ಖಾಸಗಿ ಶಾಲೆಗಳ ಶಿಕ್ಷಕರಿಗೆ ಪ್ಯಾಕೇಜ್ ಘೋಷಿಸಲು ಸಿಎಂಗೆ ಸಚಿವ ಸುರೇಶ್ ಕುಮಾರ್‌ ಮನವಿ

sureshkumar
Published on

ಬೆಂಗಳೂರು: ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ಸಮುದಾಯಕ್ಕೆ ಸರ್ಕಾರದಿಂದ ಆರ್ಥಿಕ ಪ್ಯಾಕೇಜ್ ಘೋಷಿಸಬೇಕೆಂದು ಸಚಿವ ಎಸ್.ಸುರೇಶ್ ಕುಮಾರ್‌ ಮುಖ್ಯಮಂತ್ರಿಗಳನ್ನು ಮನವಿ ಮಾಡಿದ್ದಾರೆ.

ಶಿಕ್ಷಕರ ಪದವೀಧರ ಕ್ಷೇತ್ರಗಳ‌ ಶಾಸಕರ ನಿಯೋಗದೊಂದಿಗೆ ಇಂದು ಬೆಳಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಚಿವರು ಈ ಸಮುದಾಯದ ಸ್ಥಿತಿ ಶೋಚನೀಯವಾಗಿದ್ದು, ದೈನಂದಿನ ಜೀವನ ನಿರ್ವಹಣೆಯೂ ದುಸ್ತರವಾಗಿದೆ. ಜೀವನ ನಡೆಸಲು ಈ ಸಮುದಾಯದ ಹಲವಾರು‌ ಜನ ಹಣ್ಣು ತರಕಾರಿ ಮಾರುತ್ತಿದ್ದಾರೆ, ಕೂಲಿ ಕೆಲಸ‌ ಮಾಡಿದ್ದಾರೆ. ನಮ್ಮ ಮಕ್ಕಳ ಹಿತ ಕಾಯುವ ಸಮುದಾಯವನ್ನು ನಾವು ಘನತೆಯಿಂದ ನಡೆಸಿಕೊಳ್ಳುವುದು ಕರ್ತವ್ಯವಾಗಿದ್ದು, ಸರ್ಕಾರದ ಆರ್ಥಿಕ ಪ್ಯಾಕೇಜ್ ಈ ಸಮುದಾಯಕ್ಕೆ ಆತ್ಮ ವಿಶ್ವಾಸ ತುಂಬಲು ಸಹಕಾರಿಯಾಗಲಿದೆ ಎಂದರು.

ಸಚಿವರೊಂದಿಗೆ ವಿಧಾನ ಪರಿಷತ್ತಿನ ಸದಸ್ಯರಾದ ಡಾ.ವೈ.ಎ.ನಾರಾಯಣ ಸ್ವಾಮಿ, ಪುಟ್ಟಣ್ಣ, ಅರುಣ ಶಹಾಪುರ, ಶಶೀಲ್ ನಮೋಶಿ, ಸಂಕನೂರ, ಹನುಮಂತ ನಿರಾಣಿ, ಹಾಗೂ ಚಿದಾನಂದ ಗೌಡ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net