More

    ಕೇರಳ ಸರ್ಕಾರವನ್ನೇ ಅಲ್ಲಾಡಿಸುತ್ತಿರೋ ಸ್ಮಗ್ಲಿಂಗ್ ರಾಣಿಗೆ ಸಿಗದ ಜಾಮೀನು

    ಕೊಚ್ಚಿ: ಅಕ್ರಮ ಚಿನ್ನ ಕಳ್ಳಸಾಗಣೆಗೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸೇರಿದಂತೆ ಹಲವಾರು ಅಧಿಕಾರಿಗಳ ಬುಡಕ್ಕೆ ತಂದಿಟ್ಟಿರುವ ಆರೋಪಿ ಸ್ವಪ್ನಾ ಸುರೇಶ್ ಅವರ ಜಾಮೀನು ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

    ಈ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿರುವುದು ಎನ್‌ಐಎ ಅಧಿಕಾರಿಗಳು ನೀಡಿರುವ ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ. ತನಿಖೆಯನ್ನು ತೀವ್ರಗೊಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್‌ ಹೇಳಿದೆ.

    ಯಾವುದೇ ಆಧಾರವಿಲ್ಲದೇ ನನ್ನ ವಿರುದ್ಧ ಸುಮ್ಮನೇ ಆರೋಪಗಳನ್ನು ಮಾಡಲಾಗುತ್ತಿದೆ. ಈ ಪ್ರಕರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರಾಜಕೀಯ ವಿಚಾರವೂ ಸೇರಿಕೊಂಡಿದೆ. ನಾನು ತಪ್ಪು ಮಾಡದಿದ್ದರೂ ನನ್ನನ್ನು ಸಿಲುಕಿಸಲಾಗಿದೆ. ಹೀಗಾಗಿ ನನಗೆ ಜಾಮೀನು ನೀಡಬೇಕೆಂದು ಸ್ವಪ್ನಾ ಮನವಿ ಮಾಡಿದ್ದರು.

    ಇದನ್ನೂ ಓದಿ: ಸ್ಮಗ್ಲಿಂಗ್‌ ರಾಣಿಗೂ ಕೇರಳ ಸಿಎಂಗೂ ಇದೆ ಲಿಂಕ್‌: ತನಿಖೆಯಿಂದ ಬಯಲಾಯ್ತು ಸತ್ಯ

    ರಾಜತಾಂತ್ರಿಕ ಮಾರ್ಗಗಳನ್ನು ದುರುಪಯೋಗಪಡಿಸಿಕೊಂಡು ದುಬೈನಿಂದ ಭಾರತಕ್ಕೆ ಅಕ್ರಮವಾಗಿ ಚಿನ್ನವನ್ನು ಸಾಗಣೆ ಮಾಡಿದ ಆರೋಪದಡಿ ಸ್ವಪ್ನಾ ಸುರೇಶ್ ಸೇರಿದಂತೆ ಇತರರನ್ನು ಬಂಧಿಸಿ, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿದೆ.

    ಸ್ವಪ್ನಾ ಸೇರಿದಂತೆ ರಾಜಕೀಯ ಘಟಾನುಘಟಿಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಗಳೂ ಕೇಳಿಬಂದಿದ್ದು, ತನಿಖೆ ಮುಂದುವರೆದಿದೆ.

    ಶುರುವಾಗಲಿದೆ ಕತ್ತೆಯ ಹಾಲಿನ ಡೈರಿ: ಬೆಲೆ ಕೇಳಿ ಮೂರ್ಛೆ ಹೋಗ್ಬೇಡಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts