

ಚೆನ್ನೈ: ತೀವ್ರ ಕುತೂಹಲ ಕೆರಳಿಸಿರುವ ತಮಿಳುನಾಡು ವಿಧಾನಸಭಾ ಕ್ಷೇತ್ರದ ಮತ ಎಣಿಕೆಯ ಈವರೆಗಿನ ಟ್ರೆಂಡ್ ಗಮನಿಸಿದರೆ, ಡಿಎಂಕೆಯ ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿಯ ಖುರ್ಚಿಯತ್ತ ದಾಪಗಾಲು ಇಟ್ಟಿದ್ದಾರೆ. ಇದಕ್ಕೆ ಕಾರಣ ಡಿಎಂಕೆ ಪಕ್ಷ ಮ್ಯಾಜಿಕ್ ನಂಬರ್ ದಾಟಿದೆ.
233 ಕ್ಷೇತ್ರಗಳಲ್ಲಿ ಜಯ ಸಾಧಿಸಲು 118 ಸ್ಥಾನಗಳನ್ನು ಗೆಲ್ಲಬೇಕಿತ್ತು. ಆದರೆ ಸದ್ಯದ ಮತಎಣಿಕೆಯ ಪ್ರಕ್ರಿಯೆಯನ್ನು ಗಮನಿಸಿದರೆ 153 ಕ್ಷೇತ್ರಗಳಲ್ಲಿ ಡಿಎಂಕೆ ಮುನ್ನಡೆ ಸಾಧಿಸಿದೆ. ಈ ಮೂಲಕ ಡಿಎಂಕೆ ಪಕ್ಷದ ಚಿಹ್ನೆಯಾಗಿರುವ ಸೂರ್ಯವು ಉದಯವಾಗಲಿದೆ ಎಂದೇ ಬಣ್ಣಿಸಲಾಗುತ್ತಿದೆ.
ಆಡಳಿತಾರೂಢ ಎಐಎಡಿಎಂಕೆ ಸದ್ಯದ ಸ್ಥಿತಿಯಲ್ಲಿ ಭಾರಿ ಹಿನ್ನಡೆ ಸಾಧಿಸಿದ್ದು, 104 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮುರುಗನ್ ಮಾತ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.