More

    ಉಗ್ರರ ದಾಳಿಗೂ ಜಗ್ಗದ ವಿಶ್ವದ ಎತ್ತರದ ಸೇತುವೆ ಕಾಶ್ಮೀರದಲ್ಲಿ… ಇಲ್ಲಿದೆ ಕೌತುಕ ಮಾಹಿತಿ

    ನವದೆಹಲಿ: ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯೆಂದೇ ಬಿಂಬಿತವಾಗಿರುವ ಸೇತುವೆಯನ್ನು ಜಮ್ಮು ಕಾಶ್ಮೀರದ ಚೇನಾಬ್ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದು, ಇದು 2022ರ ಆಗಸ್ಟ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

    ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯ ಕೌರಿ ಗ್ರಾಮದ ಕತ್ರಾ-ಬನಿಹಾಲ್ ರೈಲ್ವೆ ಮಾರ್ಗದಲ್ಲಿ ಸೇತುವೆ ನಿರ್ಮಾಣವಾಗುತ್ತಿದೆ. ವಿಶ್ವದ ಅತಿ ಎತ್ತರದ ಕಟ್ಟಡ ಎಂದೇ ಬಿಂಬಿತವಾಗಿರುವ ಐಫೆಲ್ ಟವರ್‌ಗಿಂತಲೂ ಎತ್ತರವಾಗಿರುವ ಈ ಸೇತುವೆ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಎಂಬ ಹೆಗ್ಗಳಿಕೆ ಪಡೆದಿದೆ.

    ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿರುವ ಐಫೆಲ್ ಟವರ್ 324 ಮೀ (1062.99 ಅಡಿ) ಎತ್ತರವಿದ್ದು ಈ ಬ್ರಿಡ್ಜ್ ಅದಕ್ಕಿಂತ 35 ಮೀ ಎತ್ತರವಿರಲಿದೆ. ಅಂದರೆ ಈ ಸೇತುವೆ ಚೇನಾಬ್ ನದಿಯಿಂದ 359 ಮೀ (1177.82 ಅಡಿ) ಎತ್ತರವಿರಲಿದೆ.

    ಕೊಂಕಣ ರೈಲ್ವೆ ಈ ಯೋಜನೆಯ ನಿರ್ಮಾಣದ ಜವಾಬ್ದಾರಿಯನ್ನು ಹೊಂದಿದ್ದು, 2004ರಲ್ಲಿ ಸೇತುವೆ ನಿರ್ಮಾಣದ ಕಾರ್ಯ ಆರಂಭವಾಗಿತ್ತು. ಉಧಮಾಪುರ-ಶ್ರೀನಗರ-ಬಾರಾಮುಲ್ಲಾ ರೈಲ್ವೆ ಸಂಪರ್ಕದ ಯೋಜನೆಯ ಒಂದು ಭಾಗವಾಗಿದೆ. ಈ ಮಾರ್ಗದಲ್ಲಿ ಉಧಮಾಪುರ-ಕಾತ್ರ (25 ಕಿಮೀ) ಸೆಕ್ಷನ್, ಬನಿಹಾಳ್-ಕ್ವಾಜಿಗುಂಡ್ (18 ಕಿಮೀ) ಸೆಕ್ಷನ್ ಹಾಗೂ ಕ್ವಾಜಿಗುಂಡ್-ಬಾರಾಮುಲ್ಲಾ (118 ಕಿಮೀ) ವಿಭಾಗವನ್ನು ಈಗಾಗಲೇ ನಿರ್ಮಿಸಲಾಗಿದೆ.

    ಈ ಸೇತುವೆ ಚೇನಾಬ್ ನದಿ ಮಟ್ಟದಿಂದ 359 ಮೀಟರ್ ಎತ್ತರದಲ್ಲಿ ನಿರ್ಮಾಣವಾಗುತ್ತಿದ್ದು, 1.3 ಕಿ.ಮೀನಷ್ಟು ಉದ್ದವಿದೆ. ಜಮ್ಮುವಿನ ಕತ್ರಾದಲ್ಲಿರುವ ಬಕ್ಕಲ್ ಹಾಗೂ ಶ್ರೀನಗರದ ಕೌರಿ ನಡುವೆ ಸಂಪರ್ಕ ಕಲ್ಪಿಸಲಿದೆ. ಸೇತುವೆ ನಿರ್ಮಾಣ ಪೂರ್ಣಗೊಂಡರೆ ಪ್ರಯಾಣದ 5-6 ಗಂಟೆ ಸಮಯವನ್ನು ಕಡಿಮೆ ಮಾಡಲಿದೆ ಎಂದು ಡೆಪ್ಯುಟಿ ಚೀಫ್ ಮುಖ್ಯ ಇಂಜಿನಿಯರ್ ಮಾಹಿತಿ ನೀಡಿದ್ದಾರೆ.

    ಇದನ್ನೂ ಓದಿ: ಈಜುಡುಗೆ ತೊಟ್ಟು ಕೊಳದಲ್ಲಿ ಧುಮುಕಿದರೆ ಹೀಗೆ ಆಗೋದಾ? ವಿಡಿಯೋ ನೋಡಿ…

    ಸೇತುವೆ ನಿರ್ಮಾಣ ಕಾರ್ಯ ವೈಷ್ಣೋ ದೇವಿ ಪುಣ್ಯ ಕ್ಷೇತ್ರಕ್ಕೆ ಪ್ರಸಿದ್ಧಿಯಾಗಿರುವ ಜಿಯಾಸಿ ರಿಯಾಸಿ ಜಿಲ್ಲೆಯ ಪ್ರವಾಸೋಧ್ಯಮದಲ್ಲಿ ಭಾರೀ ಬದಲಾವಣೆಗೆ ಕಾರಣವಾಗಲಿದೆ. ಸೇತುವೆ ಮೇಲೆ ಹೆಲಿಪ್ಯಾಡ್ ನಿರ್ಮಾಣವಾಗುವ ಕಾರಣ ಜನರು ತಮ್ಮ ಚಾಫರ್ ಮೂಲಕ ಇಲ್ಲಿಗೆ ಆಗಮಿಸಬಹುದು. ಇದರ ನಿರ್ಮಾಣ ಹಲವಾರು ಸವಾಲುಗಳಿಂದ ಕೂಡಿದ್ದರೂ ಇನ್ನೆರಡು ವರ್ಷಗಳಲ್ಲಿ ಇದು ಲೋಕಾರ್ಪಣೆಗೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಅವರು ಹೇಳಿದ್ದಾರೆ.

    ಏನೇನು ಬಳಸಲಾಗಿದೆ ಗೊತ್ತೆ?
    ಗುಮ್ಮಟದ ಆಕಾರದಲ್ಲಿ ಕಮಾನು ನಿರ್ಮಿಸಿ ಅದರ ಮೇಲೆ ಬ್ರಿಡ್ಜ್ ನಿರ್ಮಾಣವಾಗಲಿದೆ. ಸೇತುವೆ ನಿರ್ಮಾಣಕ್ಕಾಗಿ 24 ಸಾವಿರಟನ್‍ಗಳಷ್ಟು ಸ್ಟೀಲ್ ಬಳಸಲಾಗುತ್ತಿದೆ. ಸ್ಫೋಟ ನಿರೋಧಕ ಸ್ಟೀಲ್‍ನಿಂದ ಈ ಸೇತುವೆ ನಿರ್ಮಾಣ ಮಾಡಲಾಗುತ್ತಿದ್ದು, ಉಗ್ರರ ದಾಳಿಯನ್ನೂ ತಡೆದುಕೊಳ್ಳಲಿದೆ. ಅತ್ಯಂತ ಕಡಿಮೆ ಉಷ್ಣಾಂಶ ಹಾಗೂ 266 ಕಿಮೀ ವೇಗವಾಗಿ ಬೀಸುವ ಗಾಳಿಯನ್ನೂ ತಡೆದುಕೊಳ್ಳಲಿದೆ. 120 ವರ್ಷಗಳ ಕಾಲಮಿತಿಯನ್ನು ಸೇತುವೆ ಹೊಂದಿದೆ.

    ಈ ಸೇತುವೆ ನಿರ್ಮಾಣ ಪೂರ್ಣವಾದ ನಂತರ ಚೀನಾದ 275 ಮೀ ಉದ್ದದ ಶೂಬೇ ರೈಲ್ವೆ ಸೇತುವೆಯ ದಾಖಲೆಯನ್ನ ಮುರಿಯಲಿದೆ.

    ಬ್ರಿಡ್ಜ್ ಮತ್ತು ರೈಲ್ವೆ ಪ್ರಯಾಣಿಕರ ರಕ್ಷಣೆಗಾಗಿ ಏರಿಯಲ್ ರಿಂಗ್, ಆನ್‍ಲೈನ್ ನಿರ್ವಹಣೆ ಹಾಗೂ ಎಚ್ಚರಿಕೆಯ ವ್ಯವಸ್ಥೆಗಳು ಇರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸೆಪ್ಟೆಂಬರ್‌ನಲ್ಲಿ ಶಾಲೆ ಶುರುವಾಗತ್ತಾ? ಸಚಿವ ಸುರೇಶ್‌ಕುಮಾರ್‌ ಏನು ಹೇಳಿದ್ದಾರೆ ಕೇಳಿ…

    ಮಚ್ಚು ಹಿಡಿದು ಚಿನ್ನದಂಗಡಿಗೆ ನುಗ್ಗಿದವನ ಚಚ್ಚಿದಳು ಚಿಕ್ಕಮಗಳೂರು ಮಹಿಳೆ!

    ನಾಯಿಗಳು ಕಚ್ಚಿ ತಿಂದ ಕರೊನಾ ಸೋಂಕಿತನ ಶವ!

    ಪಾಕ್‌ಗೆ ಬಿಗ್‌ ಷಾಕ್‌: ಸಾಲವೂ ಬಂದ್‌, ತೈಲವೂ ಬಂದ್‌ ಎಂದ ಸೌದಿ ಅರೇಬಿಯಾ!

    ಫ್ರಿಜ್‌ ಟ್ರೇ ಬಳಸಿ ಆನ್‌ಲೈನ್‌ ಕ್ಲಾಸ್‌: ಶಿಕ್ಷಕಿಯ ಪ್ಲ್ಯಾನ್‌ಗೆ ಅಪಾರ ಮೆಚ್ಚುಗೆ

    ದಫನ್‌ ಆಗಿದ್ದವ ರಾತ್ರಿ ಹೆಂಡತಿಗೆ ಪ್ರತ್ಯಕ್ಷನಾಗಿ ನಾನೇ ನಿನ್ನ ಗಂಡ ಎಂದ!

    ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಪತ್ನಿ ಡೆಲಿವರಿ: ಶ್ಲಾಘನೆಗಳ ಮಹಾಪೂರ

    ಎಟಿಎಂ ಹಣ ಎಗರಿಸಿದ ಖದೀಮರು: ನಡೆದಾಡೋ ಸ್ಟೈಲ್‌ನಲ್ಲಿ ಸಿಕ್ಕಿಬಿದ್ದದ್ದೇ ರೋಚಕ…

    ಹೋಟೆಲ್‌ನಲ್ಲಿ ರಾತ್ರಿ ಕಳೆದ ಪ್ರೇಮಿಗಳು ಮಾರನೆಯ ದಿನ ಶವವಾದರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts