More

    ಮೂರು ವರ್ಷಗಳ ಡಿಪ್ಲೋಮಾ ಇನ್ನುಮುಂದೆ ಪಿಯುಸಿಗೆ ಸಮ- ಶಿಕ್ಷಣ ಇಲಾಖೆ ಸುತ್ತೋಲೆ

    ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿ.ಯು.ಸಿ ವಿದ್ಯಾರ್ಹತೆಗೆ ತತ್ಸಮಾನವೆಂದು ಪರಿಗಣಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸುತ್ತೋಲೆ ಹೊರಡಿಸಿದೆ.

    ನೇರ ನೇಮಕಾತಿ, ಅನುಕಂಪದ ಆಧಾರದ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯುಲು ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಶಿಕ್ಷಣವನ್ನು ಪಿ.ಯು.ಸಿ ಗೆ ತತ್ಸಮಾನವೆಂದು ಪರಿಗಣಿಸಲಾಗುವುದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಶರಣಪ್ಪ ನಡವಳಿ ಹೊರಡಿಸಿದ್ದಾರೆ.

    ಈ ಸಂಬಂಧ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. 2015ಕ್ಕಿಂತ ಹಿಂದಿನ ವರ್ಷಗಳಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಕೆಪಿಎಸ್ಸಿಯಿಂದ ನಡೆಸುವ ಇಲಾಖಾ ಪರೀಕ್ಷೆಗಳ ಜತೆಗೆ, ಕನ್ನಡ ಭಾಷಾ ಪರೀಕ್ಷೆಯನ್ನು ತೇರ್ಗಡೆ ಹೊಂದುವುದು ಎಂಬುದಾಗಿ ಆದೇಶಿಸಲಾಗಿದೆ.

    ಮೂರು ವರ್ಷಗಳ ಡಿಪ್ಲೋಮಾ ಇನ್ನುಮುಂದೆ ಪಿಯುಸಿಗೆ ಸಮ- ಶಿಕ್ಷಣ ಇಲಾಖೆ ಸುತ್ತೋಲೆ

    ಶೀಘ್ರ ಸರ್ಕಾರಿ ವೈಮಾನಿಕ ಶಾಲೆ- ಗ್ರಾಮೀಣ ಯುವಕರಿಗೆ ಉದ್ಯೋಗಕ್ಕೆ ದಾರಿ: ವಾರದೊಳಗೆ ರನ್‌ವೇ…

    ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌: ವಿವಿಧ ಜಿಲ್ಲೆಗಳಲ್ಲಿ 3006 ಹೆಲ್ತ್‌ ಆಫೀಸರ್‌ ನೇಮಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts