More

    ತಿರುಪತಿಯಲ್ಲಿ ಮತ್ತೆ ಭೂಕುಸಿತ: ಪ್ರಯಾಣಿಕರು ಸ್ವಲ್ಪದರಲ್ಲಿ ಬಚಾವ್‌- ಟ್ರಿಪ್‌ಗೆ ಹೋಗೋದಿದ್ರೆ ಕ್ಯಾನ್ಸಲ್‌ ಮಾಡಿ

    ತಿರುಪತಿ: ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತಿರುಪತಿ ಬೆಟ್ಟದಲ್ಲಿ ಮತ್ತೊಮ್ಮೆ ಭೂಕುಸಿತ ಉಂಟಾಗಿದೆ. ನಿನ್ನೆ ಇದೇ ಮಾರ್ಗದಲ್ಲಿ ಸಾಗುತ್ತಿದ್ದ ಬಸ್‌ ಬೆಟ್ಟ ಏರುವಷ್ಟರಲ್ಲಿಯೇ ಬಂಡೆಯೊಂದು ಉರುಳಿ ಬಿದ್ದಿದೆ. ಸ್ವಲ್ಪದಲ್ಲಿಯೇ ಬಸ್‌ ಮೇಲೆ ಬೀಳುವುದು ತಪ್ಪಿದ್ದರಿಂದ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಬದುಕುಳಿದಿದ್ದಾರೆ.

    ತಿರುಪತಿ ಬೆಟ್ಟದ 2ನೇ ಘಾಟ್‌ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಅಲಿಪಿರಿ ಸಮೀಪದ ಎರಡನೇ ಘಾಟ್ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದ್ದರಿಂದ ಹಲವು ವಾಹನಗಳು ಜಖಂಗೊಂಡಿವೆ. ಸುಮಾರು ಅಡಿ ಎತ್ತರದಿಂದ ಬಂಡೆಗಳು ಉರುಳಿ ಬಿದ್ದ ಪರಿಣಾಮ ಹಲವು ಕಾರುಗಳು ಸೇರಿ ರಸ್ತೆಗಳು ಹಾನಿಗೊಳಗಾಗಿವೆ. ಐಐಟಿ ದೆಹಲಿಯ ತಜ್ಞರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ವಿಜಿಲೆನ್ಸ್, ಇಂಜಿನಿಯರಿಂಗ್ ಮತ್ತು ಅರಣ್ಯ ವಿಭಾಗದ ಅಧಿಕಾರಿಗಳು ಬಂಡೆ ತೆಗೆಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

    ಮಳೆಯ ಮುನ್ಸೂಚನೆಯಿಂದಾಗಿ ಎರಡು ದಿನಗಳ ಕಾಲ ಘಾಟ್ ರಸ್ತೆಗಳನ್ನು ಮುಚ್ಚುವುದಾಗಿ ಟಿಟಿಡಿ ಈಗಾಗಲೇ ಘೋಷಿಸಿತ್ತು. ದುರಸ್ತಿ ಕಾರ್ಯದ ನಂತರ ಕೆಲವು ದಿನಗಳ ನಂತರ ಘಾಟ್ ರಸ್ತೆಗಳನ್ನು ವಾಹನ ಸಂಚಾರಕ್ಕೆ ತೆರೆಯಲಾಯಿತು. ಮೊದಲ ಘಾಟ್ ರಸ್ತೆಯಲ್ಲಿ ಅಕ್ಕಗರ್ಲ ದೇವಸ್ಥಾನದ ಬಳಿ ತಡೆಗೋಡೆಗೆ ಹಾನಿಯಾಗಿದ್ದು, ನಾಲ್ಕು ಕಡೆ ಬಂಡೆಗಳು ರಸ್ತೆಗೆ ಬಿದ್ದಿವೆ ಎಂದು ಟಿಟಿಡಿ ತಿಳಿಸಿದೆ. ಕಳೆದ 25 ವರ್ಷಗಳಲ್ಲೇ ಅತ್ಯಧಿಕ ಮಳೆಯನ್ನು ತಿರುಪತಿ ಭಾಗ ಕಂಡಿದೆ.

    ಮೊದಲ ಪತ್ನಿಯನ್ನು ಕೊಂದು ಜೈಲು ಸೇರಿದ: ಹೊರಗೆ ಬಂದು ಮದ್ವೆಯಾಗಿ ಆಕೆಯನ್ನೂ ಕೊಂದ ಮೈಸೂರಿನ ಪಾತಕಿ!

    VIDEO: ನೇರಪ್ರಸಾರದಲ್ಲಿಯೇ ಟಿವಿ ವರದಿಗಾರ್ತಿಯ ಹಿಂಬದಿ ಮುಟ್ಟಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts