More

    ವಿದ್ಯಾರ್ಹತೆ ಯಾವುದೇ ಇರಲಿ… ಭರಪೂರ ಅವಕಾಶ: ಮಾ.27 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

    ಬೆಂಗಳೂರು: ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ (DDU-GKY) 18ರಿಂದ 35 ವರ್ಷದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ದಿನಾಂಕ ಇದೇ 27ರ ಬೆಳಗ್ಗೆ 9.30 ರಿಂದ ಸಂಜೆ 4.30ರವರೆಗೆ, ಕುಂಬಳಗೋಡಿನ, ರಾಮೋಹಳ್ಳಿ ಕ್ರಾಸ್ ಬಳಿಯಿರುವ ರಾಜರಾಜೇಶ್ವರಿ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.

    ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ,ಬೆಂಗಳೂರು ದಕ್ಷಿಣ ತಾಲೂಕು ಪಂಚಾಯಿತಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಉದ್ಯೋಗಾಕಾಂಕ್ಷಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಹೊಂದಿರಬೇಕು.

    ಪಿಯುಸಿ, ಐಟಿಐ, ಡಿಪ್ಲೋಮಾ, ಬಿಕಾಂ, ಬಿಬಿಎ, ಬಿಎ, ಬಿಸಿಎ, ಬಿಇ, ಎಂಕಾಂ, ಎಂಬಿಎ, ಎಂಎ, ಎಂಸಿಎ ಪದವಿಗಳನ್ನು ಹೊಂದಿದ ಉದ್ಯೋಗಕಾಂಕ್ಷಿಗಳಿಗೆ ಒಂಬತ್ತು ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳಾದ ಮುತ್ತೂಟ್ ಗ್ರೂಪ್, ಎಚ್.ಡಿ.ಎಫ್​.ಸಿ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಯುರೇಕಾ ಫೋರ್ಬ್ಸ್, ಟೀಮ್ ಲೀಸ್, ಯು.ಟಿ.ಎಲ್ ಟೆಕ್ನಾಲಜಿ ಲಿಮಿಟೆಡ್, ಜಸ್ಟ್ ಡಯಲ್, ಇಂಪ್ಯಾಕ್ಟ್, ರಿಲೆಯನ್ಸ್ ಗಳಲ್ಲಿ ಉದ್ಯೋಗ ಸೃಷ್ಟಿಸಿಕೊಳ್ಳುವ ಅವಕಾಶ ಇದಾಗಿದೆ .

    ಹೆಚ್ಚಿನ ಮಾಹಿತಿಗಾಗಿ ಮೊ ಸಂ : 9964907444 / 7975014738 ಹಾಗೂ ನೋಂದಣಿಗಾಗಿ https://forms.gle/FcuM18DKZ7Gsngqm6 ಗೂಗಲ್ ಲಿಂಕ್ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂಗಪ್ಪರವರು ತಿಳಿಸಿದ್ದಾರೆ.

    15 ಸಾವಿರ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ: ಈ ಬಾರಿ ಇವೆ ಹಲವು ವಿಶೇಷ- ಇಲ್ಲಿದೆ ಡಿಟೇಲ್ಸ್​

    ಹುಬ್ಬಳ್ಳಿ ಕಿಮ್ಸ್​ನಿಂದ ಪ್ರೊಫೆಸರ್, ಅಸಿಸ್ಟೆಂಟ್​ ಪ್ರೊಫೆಸರ್​ ಸ್ಟೆನೋಗ್ರಾಫರ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts