More

    ಅಂಗನವಾಡಿಯಲ್ಲಿ ಮಹಿಳೆಯರಿಗೆ ಭರಪೂರ ಉದ್ಯೋಗಾವಕಾಶ: 147 ಹುದ್ದೆಗಳಿಗೆ ಆಹ್ವಾನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗದ ಜಿಲ್ಲೆಯ 7 ತಾಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಆನ್​ಲೈನ್ ಅರ್ಜಿ ಆಹ್ವಾನಿಸಿದೆ.

    ಒಟ್ಟು ಹುದ್ದೆಗಳು 147

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ 7 ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ವಿವಿಧ ಮೀಸಲಾತಿ ಅನ್ವಯ ನೇಮಕ ಮಾಡಿಕೊಳ್ಳಲಾಗುತ್ತಿದೆ. ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

    ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ (ತಹಸೀಲ್ದಾರ್ ಕಚೇರಿಯಿಂದ ಪಡೆದದ್ದು), ಜಾತಿ ಪ್ರಮಾಣ ಪತ್ರ, ವಿಧವಾ ಪ್ರಮಾಣ ಪತ್ರ, ಅಂಗವಿಕಲತೆ ಪ್ರಮಾಣ ಪತ್ರ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿ ಆಗಿದ್ದರೆ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣಪತ್ರ, ವಿಚ್ಛೇದನ ಪ್ರಮಾಣ ಪತ್ರ, ದೇವದಾಸಿಯರ ಮಕ್ಕಳು ಎಂದು ಸರ್ಕಾರದಿಂದ ದೃಢೀಕರಿಸಿದ ಪ್ರಮಾಣಪತ್ರ, ಪರಿತ್ಯಕ್ತ ಎಂದು ಗ್ರಾಪಂನಿಂದ ನೀಡಿದ ಪತ್ರ, ಯೋಜನಾ ನಿರಾಶ್ರಿತರು ಎಂದು ತಹಸೀಲ್ದಾರ್​ರಿಂದ ಪಡೆದ ಪತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬಹುದು. ಅಂಗವಿಕಲ ಅಭ್ಯರ್ಥಿಗಳು ಸಹಾಯಕಿ ಹುದ್ದೆಗೆ ಅರ್ಹರಾಗಿರುವುದಿಲ್ಲ ಎಂದು ತಿಳಿಸಲಾಗಿದೆ. ಆಸಿಡ್ ದಾಳಿಗೆ ತುತ್ತಾದವರು, ಇಲಾಖೆಯ ಸಂಸ್ಥೆಗಳಲ್ಲಿ ಹಾಗೂ ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ ಹಾಗೂ ಸ್ಥಳೀಯರಿಗೆ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು. ಆನ್​ಲೈನ್ ಅರ್ಜಿಗಳಿಗೆ ಮಾತ್ರ ಮಾನ್ಯತೆ ಇದ್ದು, ದಾಖಲೆಗಳು ಅಸ್ಪಷ್ಟವಾಗಿದ್ದರೆ ಅರ್ಜಿ ತಿರಸ್ಕರಿಸಲಾಗುವುದು.

    ಹುದ್ದೆ ವಿವರ: * ಅಂಗನವಾಡಿ ಕಾರ್ಯಕರ್ತೆ – 46

    * ಅಂಗನವಾಡಿ ಸಹಾಯಕಿ – 101

    ಎಲ್ಲೆಲ್ಲಿ ನೇಮಕ?: ಶಿವಮೊಗ್ಗ, ಹೊಸನಗರ, ಭದ್ರಾವತಿ, ಸೊರಬ, ಸಾಗರ, ತೀರ್ಥಹಳ್ಳಿ, ಶಿಕಾರಿಪುರಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಂಗನವಾಡಿಗಳಲ್ಲಿ ಹುದ್ದೆಗಳು ಖಾಲಿ ಇವೆ.

    ವಯೋಮಿತಿ: 18 ರಿಂದ 35 ವರ್ಷ ನಿಗದಿಯಾಗಿದ್ದು, ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ.

    ವಿದ್ಯಾರ್ಹತೆ: ಕಾರ್ಯಕರ್ತೆಯಾಗಲು ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರಬೇಕು. ಸಹಾಯಕಿಯಾಗಲು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು.

    ಅರ್ಜಿ ಸಲ್ಲಿಸಲು ಕೊನೇ ದಿನ: 12.08.2021

    ಅಧಿಸೂಚನೆಗೆ: https://bit.ly/376QAvA

    ಮಾಹಿತಿಗೆ: http://anganwadirecruit.kar.nic.in

    ವಿವಿಧ ಕ್ರೀಡಾಪಟುಗಳಿಗೆ ರೈಲ್ವೆಯಲ್ಲಿ ಅವಕಾಶ: 95 ಸಾವಿರ ರೂ.ವರೆಗೆ ಸಂಬಳ

    ಪದವೀಧರರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೇಮಕಾತಿ: 60 ಸಾವಿರ ರೂ.ವರೆಗೆ ಸಂಬಳ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts