More

    ಬೆಂಗಳೂರು ಅಂಗನವಾಡಿಯಲ್ಲಿ ಭರಪೂರ ಉದ್ಯೋಗಾವಕಾಶ: 357 ಹುದ್ದೆಗಳಿಗೆ ಆಹ್ವಾನ

    ಬೆಂಗಳೂರಿನ ಸ್ಥಳಿಯ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಉದ್ಯೋಗಾವಕಾಶದ ಬಾಗಿಲು ತೆರೆದಿದೆ. ಬೆಂಗಳೂರು ನಗರ ಜಿಲ್ಲೆಯ 6 ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಶಿಶು ಅಭಿವೃದ್ಧಿ ಇಲಾಖೆಯು ಮಹಿಳೆಯರಿಂದ ಆನ್​ಲೈನ್​ ಅರ್ಜಿ ಆಹ್ವಾನಿಸಿದೆ.

    ಗೌರವಧನದ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕ ಮಾಡಿಕೊಳ್ಳಲಾಗುವುದು. ಸಹಾಯಕಿ ಹುದ್ದೆಗೆ ಅಂಗವಿಕಲರು ಅರ್ಹರಾಗಿರುವುದಿಲ್ಲ. ಅಭ್ಯರ್ಥಿಗಳು ಜನನ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ (ತಹಸೀಲ್ದಾರ್​ ಕಚೇರಿಯಿಂದ ಪಡೆದದ್ದು), ಜಾತಿ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಆನ್​ಲೈನ್​ ಅರ್ಜಿಗಳಿಗೆ ಮಾತ್ರ ಮಾನ್ಯತೆ ಇದ್ದು, ದಾಖಲೆಗಳು ಅಸ್ಪಷ್ಟವಾಗಿದ್ದರೆ ಅರ್ಜಿ ತಿರಸ್ಕರಿಸಲಾಗುವುದು ಎಂದು ತಿಳಿಸಲಾಗಿದೆ.

    ಕಾರ್ಯಕರ್ತೆಯರ ಹುದ್ದೆಗಳು: 97
    ಸಹಾಯಕಿಯರ ಹುದ್ದೆಗಳು: 260
    ಒಟ್ಟು: 357

    ಎಲ್ಲಿವೆ ಹುದ್ದೆಗಳು?
    ಆನೇಕಲ್​, ಬೆಂಗಳೂರು ದಣ, ಬೆಂಗಳೂರು ರಾಜ್ಯ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವದಲ್ಲಿರುವ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿಗಳಲ್ಲಿ ಹುದ್ದೆಗಳು ಖಾಲಿ ಇವೆ.

    * ಈ ಪ್ರಮಾಣಪತ್ರಗಳಿದ್ದಲ್ಲಿ ಸಲ್ಲಿಸಿ
    ಅಭ್ಯರ್ಥಿಗಳು ವಿಧವೆ, ವಿಚ್ಛೇದಿತೆ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಯಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ದೇವದಾಸಿಯರ ಮಕ್ಕಳು, ಅಂಗವಿಕಲರಾಗಿದ್ದಲ್ಲಿ ಸರ್ಕಾರದಿಂದ ದೃಢೀಕರಿಸಿದ ಪ್ರಮಾಣಪತ್ರ, ಪರಿತ್ಯಕ್ತೆ ಎಂದು ಗ್ರಾಪಂನಿಂದ ನೀಡಿದ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ತಹಸೀಲ್ದಾರ್​ರಿಂದ ಪಡೆದ ಪತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬಹುದು. ಈ ಪ್ರಮಾಣಪತ್ರಗಳನ್ನು ಆಯಾ ಮೀಸಲಾತಿಗೆ ಪರಿಗಣಿಸಲಾಗುತ್ತದೆ.

    ವಿದ್ಯಾರ್ಹತೆ: ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ, ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ. ಕನ್ನಡ ಭಾಷೆ ಜ್ಞಾನ ಅವಶ್ಯ.

    ವಯೋಮಿತಿ: ಕನಿಷ್ಠ 18ವರ್ಷ, ಗರಿಷ್ಠ 35 ವರ್ಷ. ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇದೆ.

    ಆದ್ಯತೆ: ವಿದ್ಯಾರ್ಹತೆ, ವಯೋಮಿತಿ, ಆಸಿಡ್​ ದಾಳಿಗೆ ತುತ್ತಾದವರು, ಇಲಾಖೆಯ ಸಂಸ್ಥೆಗಳಲ್ಲಿ ಹಾಗೂ ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ, ವಿಧವೆಯರಿಗೆ, ಸ್ಥಳಿಯರಿಗೆ ಆದ್ಯತೆ ನೀಡಿ ಆಯ್ಕೆ ಮಾಡಲಾಗುವುದು.

    ಗೌರವಧನ
    ಈ ನೇಮಕಾತಿಗಳು ಗೌರವಧನ ಆಧಾರಿತವಾಗಿವೆ. ಕಾರ್ಯಕರ್ತೆಗೆ ಮಾಸಿಕ 10,000 ರೂ, ಸಹಾಯಕಿಯರಿಗೆ 5,000 ರೂ. ವೇತನ ನಿಗದಿಯಾಗಿದೆ.

    ಅರ್ಜಿ ಸಲ್ಲಿಸಲು ಕೊನೇ ದಿನ: 16.10.2021
    ಅಧಿಸೂಚನೆಗೆ: https://bit.ly/3lwCNp4
    ಮಾಹಿತಿಗೆ: https://anganwadirecruit.kar.nic.in

    ಟೈಪಿಂಗ್‌, ಷಾರ್ಟ್‌ಹ್ಯಾಂಡ್‌ ಬಲ್ಲವರಿಗೆ ಬೀದರ್​ ಕೋರ್ಟ್​ನಲ್ಲಿದೆ 21 ಹುದ್ದೆಗಳು

    ವಿವಿಧ ಪದವೀಧರರಿಗೆ ಇಸ್ರೋದ ಉಪಗ್ರಹ ಕೇಂದ್ರದಿಂದ ಅರ್ಜಿ ಆಹ್ವಾನ- 18 ಹುದ್ದೆಗಳು ಖಾಲಿ

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts