ವಿವಿಧ ಪದವೀಧರರಿಗೆ ಆದಾಯ ತೆರಿಗೆ ಇಲಾಖೆಯಿಂದ ಆಹ್ವಾನ: ನಾಳೆಯೇ ಕೊನೆಯ ದಿನ

udyoga
Published on

ಆದಾಯ ತೆರಿಗೆ ಪ್ರಧಾನ ಮುಖ್ಯ ಆಯುಕ್ತರ ಕಚೇರಿಯಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳು: 14

ದೆಹಲಿಯ ತೆರಿಗೆ ಮುಖ್ಯ ಆಯುಕ್ತರ ಕಚೇರಿಯಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳು 2 ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಯ ಕಾರ್ಯಕ್ಷಮತೆ ಆಧರಿಸಿ ಶಾಶ್ವತವಾಗುವ ಸಾಧ್ಯತೆಯೂ ಇರುತ್ತದೆ. ಕ್ರೀಡಾಪಟುಗಳಿಗೆ ವಿಶೇಷ ಆದ್ಯತೆ ಇದೆ.

ಹುದ್ದೆ ವಿವರ

* ಇನ್‍ಕಮ್ ಟ್ಯಾಕ್ಸ್ ಇನ್‍ಸ್ಪೆಕ್ಟರ್ – 1

* ಟ್ಯಾಕ್ಸ್ ಅಸಿಸ್ಟೆಂಟ್ – 4

* ಸ್ಟೆನೋಗ್ರಾಫರ್ ಗ್ರೇಡ್2 – 3

* ಮಲ್ಟಿ ಟಾಸ್ಕಿಂಗ್ ಸ್ಟಾಫ್​ – 6

ಶೈಕ್ಷಣಿಕ ಅರ್ಹತೆ: ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿ ಪಡೆದಿರಬೇಕು. ಟ್ಯಾಕ್ಸ್ ಅಸಿಸ್ಟೆಂಟ್‍ಗೆ ಪ್ರತಿ ಗಂಟೆಗೆ 8,000 ಪದಗಳ ಡೇಟಾ ಎಂಟ್ರಿ ವೇಗ ಹೊಂದಿರಬೇಕು. ಸ್ಟೆನೋಗ್ರಾಫರ್​ಗೆ ಡಿಕ್ಟೇಷನ್ ಪ್ರತಿ ನಿಮಿಷಕ್ಕೆ 80 ಪದಗಳ ಟೈಪಿಂಗ್ ಸ್ಪೀಡ್, ಇಂಗ್ಲಿಷ್‍ನಲ್ಲಿ ಪ್ರತಿ ನಿಮಿಷಕ್ಕೆ 50 ಪದ, ಹಿಂದಿ 65 ಪದಗಳ ಪ್ರತಿಲೇಖನ ಕೌಶಲ ಹೊಂದಿರಬೇಕು.

ವಯೋಮಿತಿ: ಎಲ್ಲ ಹುದ್ದೆಗಳಿಗೂ ಕನಿಷ್ಠ 18 ವರ್ಷ. ಇನ್‍ಕಮ್ ಟ್ಯಾಕ್ಸ್ ಇನ್‍ಸ್ಪೆಕ್ಟರ್​ಗೆ ಗರಿಷ್ಠ 30 ವರ್ಷ, ಉಳಿದ ಹುದ್ದೆಗಳಿಗೆ ಗರಿಷ್ಠ 27 ವರ್ಷ. ಮೀಸಲಾತಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದನ್ವಯ ವಯೋಸಡಿಲಿಕೆ ಇದೆ.

ವೇತನ: ಇನ್‍ಕಮ್ ಟ್ಯಾಕ್ಸ್ ಆಫೀಸರ್​ಗೆ ಮಾಸಿಕ 34,800 ರೂ. ವೇತನ ಇದೆ. ಉಳಿದ ಹುದ್ದೆಗಳಿಗೆ ಮಾಸಿಕ 20,200 ರೂ. ವೇತನ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಶಾರ್ಟ್‍ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಸಂದರ್ಶನದ ದಿನಾಂಕ, ಸ್ಥಳ, ಸ್ಥಳ ಹಾಗೂ ಇತರ ಮಾಹಿತಿಯನ್ನು ಶಾರ್ಟ್‍ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಮೇಲ್ ಮೂಲಕ ತಿಳಿಸಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗುತ್ತಿದೆ ಹಾಗೂ ಕ್ರೀಡಾ ವಿಭಾಗದಲ್ಲಿ ಯಾವ ಕ್ರೀಡೆ ಎಂಬುದನ್ನು ಅರ್ಜಿಯಲ್ಲಿ ತಿಳಿಸಬೇಕು. ಅಗತ್ಯ ದಾಖಲೆಗಳ ಸಹಿತ ಅರ್ಜಿಯನ್ನುThe Deputy Commissioner of Income-tax (Hqrs.- Personnel), Room No. 378A, C.R. Building, I.P. Estate, New Delhi-110 002 ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಕೆಗೆ ಕೊನೇ ದಿನ: 15.4.2021

ಅಧಿಸೂಚನೆಗೆ: https://bit.ly/3dBG3v9

ಮಾಹಿತಿಗೆ:http://www.incometaxdelhi.org

ಹೆಚ್ಚಿನ ಉದ್ಯೋಗ ಸುದ್ದಿಗೆ ಕ್ಲಿಕ್ಕಿಸಿ:

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net