

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಸ್ಪೆಷಲಿಸ್ಟ್ ಕೇಡರ್ ಹುದ್ದೆಗಳ ಅಡಿಯಲ್ಲಿ ಮ್ಯಾನೇಜರ್ ಹಾಗೂ ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳನ್ನು ದೇಶದ ಯಾವುದೇ ಭಾಗದಲ್ಲಿರುವ ಶಾಖೆಗೆ ಬೇಕಾದರೂ ನೇಮಕ ಮಾಡಬಹುದಾಗಿದೆ. 15.11.2021ರಂದು ನಡೆಯುವ ಲಿಖಿತ ಪರೀೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ಸಂದರ್ಶನದ ಆಹ್ವಾನ ಪತ್ರವನ್ನು ಅಭ್ಯರ್ಥಿಗಳ ಮೇಲ್ ಐಡಿ ಅಥವಾ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು.
ಹುದ್ದೆ ವಿವರ
* ಮ್ಯಾನೇಜರ್ (ಮಾರ್ಕೆಟಿಂಗ್) & 12
* ಡೆಪ್ಯುಟಿ ಮ್ಯಾನೇಜರ್ (ಮಾರ್ಕೆಟಿಂಗ್) & 26
ವಿದ್ಯಾರ್ಹತೆ: ಮಾರ್ಕೆಟಿಂಗ್/ ಫೈನಾನ್ಸ್ನಲ್ಲಿ ಎಂಬಿಎ/ಪಿಜಿಡಿಬಿಎಂ ಅಥವಾ ತತ್ಸಮಾನ ಶಿಕ್ಷಣ ಪಡೆದಿರಬೇಕು. 2-5 ವರ್ಷದ ವೃತ್ತಿ ಅನುಭವ ಕೇಳಲಾಗಿದೆ. ದೂರಶಿಕ್ಷಣ ಮೂಲಕ ಪಡೆದ ಪದವಿಗೆ ಮಾನ್ಯತೆ ಇಲ್ಲ ಎಂದು ತಿಳಿಸಲಾಗಿದೆ.
ವಯೋಮಿತಿ: 1.7.2021ಕ್ಕೆ ಅನ್ವಯವಾಗುವಂತೆ ಮ್ಯಾನೇಜರ್ಗೆ ಗರಿಷ್ಠ 40 ವರ್ಷ, ಡೆಪ್ಯುಟಿ ಮ್ಯಾನೇಜರ್ಗೆ ಗರಿಷ್ಠ 35 ವರ್ಷ ವಯೋಮಿತಿ ನಿಗದಿಯಾಗಿದ್ದು, ಮೀಸಲಾತಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದನ್ವಯ ವಯೋಸಡಿಲಿಕೆ ಇದೆ.
ವೇತನ: ಮ್ಯಾನೇಜರ್ ಹುದ್ದೆಗೆ ಮಾಸಿಕ 63,840&78,230 ರೂ., ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಮಾಸಿಕ 48,170&69,810 ರೂ. ವೇತನ ನಿಗದಿಪಡಿಸಲಾಗಿದೆ.
ಮೀಸಲಾತಿ: ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 20 ಸ್ಥಾನ, ಇತರ ಹಿಂದುಳಿದ ವರ್ಗಕ್ಕೆ 9, ಎಸ್ಸಿಗೆ 5, ಎಸ್ಟಿಗೆ 1, ಆಥಿರ್ಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 3 ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೂ ಸ್ಥಾನ ಕಾಯ್ದಿರಿಸಲಾಗಿದೆ.
ಅರ್ಜಿ ಶುಲ್ಕ: ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೇ ದಿನ: 18.10.2021
ಅಧಿಸೂಚನೆಗೆ: https://bit.ly/3mbJL2X
ಮಾಹಿತಿಗೆ: https://bank.sbi/careers