More

    ಪದವೀಧರರಿಗೆ ಮೈಸೂರಿನ ವಾಕ್ ಶ್ರವಣ ಸಂಸ್ಥೆಯಲ್ಲಿ ಉದ್ಯೋಗ- ₹60 ಸಾವಿರದವರೆಗೆ ಸಂಬಳ

    ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ (ಎಐಐಎಸ್‍ಎಚ್) ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
    ಒಟ್ಟು ಹುದ್ದೆಗಳು: 11

    ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳು ಕಾಯಂ ಹುದ್ದೆಗೆ ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸುವಂತಿಲ್ಲ. ಒಂದಕ್ಕಿಂತ ಹೆಚ್ಚು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

    ಹುದ್ದೆ ವಿವರ
    * ಕ್ಲಿನಿಕಲ್ ಸೈಕಾಲಜಿ ಲೆಕ್ಚರ್ – 2
    ಸೈಕಾಲಜಿಯಲ್ಲಿ ಎಂಎ/ ಎಂಎಸ್ಸಿ ಅಥವಾ ಕ್ಲಿನಿಕಲ್ ಸೈಕಾಲಜಿಯಲ್ಲಿ ಎಂ.ಫಿಲ್ ಮಾಡಿದ್ದು, ಕನಿಷ್ಠ ಶೇ.55 ಅಂಕ ಪಡೆದಿರಬೇಕು. ಸಂಶೋಧನೆ/ ಬೋಧನೆ/ ಕ್ಲಿನಿಕಲ್ ವೃತ್ತಿ ಅನುಭವ ಅವಶ್ಯ. ಮಾಸಿಕ 47,000 ರೂ. ವೇತನ ಇದ್ದು, ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    * ಸೆಕ್ಯುರಿಟಿ ಆಫೀಸರ್ – 1
    ಯಾವುದೇ ಪದವಿ ಪಡೆದಿರುವ, ಅಸಿಸ್ಟೆಂಟ್ ಸೆಕ್ಯುರಿಟಿ ಆಗಿ ಕಾರ್ಯನಿರ್ವಹಿಸಿರುವ ಅಥವಾ ಸೆಕ್ಯುರಿಟಿ ವಿಭಾಗದಲ್ಲಿ ತರಬೇತಿ ಪಡೆದಿರುವ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು. ಮಾಸಿಕ 35,000 ರೂ. ವೇತನ ಇದ್ದು, ಗರಿಷ್ಠ 65 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

    * ಸ್ಪೀಚ್ ಲ್ಯಾಂಗ್ವೇಜ್ ರೋಗಶಾಸಜ್ಞ (ಗ್ರೇಡ್-2) – 4
    * ಆಡಿಯಾಲಜಿಸ್ಟ್ – 4
    ಸ್ಪೀಚ್, ಸ್ಪೀಚ್ ಆ್ಯಂಡ್ ಹಿಯರಿಂಗ್ ಅಥವಾತತ್ಸಮಾನ ವಿಷಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಗರಿಷ್ಠ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಸಿಕ 32,000 ರೂ. ವೇತನ ನಿಗದಿಪಡಿಸಲಾಗಿದೆ.

    ಅರ್ಜಿ ಶುಲ್ಕ: ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 40 ರೂ., ಸಾಮಾನ್ಯವರ್ಗ, ಆರ್ಥಿಕವಾಗಿ ದುರ್ಬಲವಾಗಿರುವ, ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿಪಡಿಸಲಾಗಿದೆ. ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

    ಅರ್ಜಿ ಸಲ್ಲಿಸಲು ಕೊನೇ ದಿನ: 16.4.2021
    ಅರ್ಜಿ ಸಲ್ಲಿಕೆ ವಿಳಾಸ: ಇeಜಿಛ್ಛಿ ಅbಞಜ್ಞಿಜಿoಠ್ಟಿZಠಿಜಿqಛಿ u್ಛ್ಛಜ್ಚಿಛ್ಟಿ, ಅ್ಝ್ಝ ಐ್ಞbಜಿZ ಐ್ಞoಠಿಜಿಠ್ಠಿಠಿಛಿ ಟ್ಛ ಖmಛಿಛ್ಚಿe – ಏಛಿZ್ಟಜ್ಞಿಜ, IZ್ಞZoZಜZ್ಞಜಟಠಿe್ಟಜಿ, Iqsoಟ್ಟಛಿ 570 006

    ಅಧಿಸೂಚನೆಗೆ: https://bit.ly/2Ptj1ii
    ಮಾಹಿತಿಗೆ: https://sportsauthorityofindia.nic.in

    ಹೆಚ್ಚಿನ ಉದ್ಯೋಗ ಸುದ್ದಿಗೆ ಕ್ಲಿಕ್ಕಿಸಿ:

    https://www.vijayavani.net/category/%e0%b2%89%e0%b2%a6%e0%b3%8d%e0%b2%af%e0%b3%8b%e0%b2%97-%e0%b2%ae%e0%b2%bf%e0%b2%a4%e0%b3%8d%e0%b2%b0/

    ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್​ನಲ್ಲಿ ಇಂಜಿನಿಯರಿಂಗ್​ ಪದವೀಧರರಿಗೆ ಭರ್ಜರಿ ಅವಕಾಶ

    ಇಸ್ರೋದಲ್ಲಿ ಕೆಲಸ ಮಾಡಲು ಬಯಸುವವರಿಗೆ ಗುಡ್​ ನ್ಯೂಸ್​: ವಿವಿಧ ಘಟಕಗಳಲ್ಲಿ ಭರ್ಜರಿ ಉದ್ಯೋಗಾವಕಾಶ

    ವಿಜ್ಞಾನ ವಿಷಯದಲ್ಲಿ ಪದವಿ ಪಡೆದಿರುವಿರಾ? ಸೂಕ್ಷ್ಮಾಣು ಸಂಶೋಧನಾ ಸಂಸ್ಥೆಯಲ್ಲಿರುವ ಉದ್ಯೋಗಾವಕಾಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts