ಅಂಚೆ ಕಚೇರಿಯಲ್ಲಿವೆ ಡಾಕ್ ಸೇವಕ್‌ ಹುದ್ದೆಗಳು: ಎಸ್‌ಎಸ್‌ಎಲ್‌ಸಿ ಆದವರಿಗೂ ಅವಕಾಶ

udyoga-post
Published on

ಭಾರತೀಯ ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುವವರಿಗೆ ಇಲ್ಲಿವೆ ಉತ್ತಮ ಅವಕಾಶ. ಇಲಾಖೆಯ ನಂಜನಗೂಡು ವಿಭಾಗದಲ್ಲಿ ಡಾಕ್‌ ಸೇವಕ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟೂ 78 ಗ್ರಾಮೀಣ ಡಾಕ್ ಸೇವಕ ಹುದ್ದೆಗಳು ಖಾಲಿ ಇದ್ದು, ಇವುಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ಎಸ್ಎಸ್‌ಎಲ್‌ಸಿ ಪಾಸಾಗಿರಬೇಕು. 18 ರಿಂದ 40ರ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ವಯೋಮಿಯಲ್ಲಿ 5 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.

ಹಿಂದುಳಿದ ವರ್ಗ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಯಾವುದೇ ಮುಖ್ಯ ಕಚೇರಿ ಅಥವಾ ಆಯ್ದ ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು.

ಮಹಿಳಾ ಅಭ್ಯರ್ಥಿಗಳು, ತೃತಿಯ ಲಿಂಗಿಗಳು, ಅಂಗವಿಕಲ ಅಭ್ಯರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿಯನ್ನು ಆನ್ ಲೈನ್ ನಲ್ಲಿ ಮಾತ್ರ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ಮರಾಜನಗರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ 08226-224430 ಸಂಖ್ಯೆಗೆ ಕರೆ ಮಾಡಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net