ನಿರುದ್ಯೋಗಿಗಳಿಗೆ ಬಂಪರ್‌ ಅವಕಾಶ: ಅಂಚೆ ಇಲಾಖೆಯಲ್ಲಿದೆ 2443 ಹುದ್ದೆ- ಕರ್ನಾಟಕದಲ್ಲಿ ಕೆಲಸ

ಭಾರತೀಯ ಅಂಚೆ ಇಲಾಖೆಯ ಕರ್ನಾಟಕ ವಿಭಾಗದಲ್ಲಿ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟೂ 2443 ಹುದ್ದೆಗಳಿವೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 20/1/2020 ಕೊನೆಯ ದಿನ. ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳ ನಿಯಮಾನುಸಾರ ಸ್ವಯಂ ಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ ನೇಮಕಾತಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ನೇಮಕಾತಿ ಮಾಡಲಾಗುತ್ತದೆ.

ವೇತನ: ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆ 12 ರಿಂದ 14 ಸಾವಿರ ರೂ. ವೇತನ, ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗೆ 10 ರಿಂದ 12 ಸಾವಿರ ರೂ. ವೇತನ, ಡಾಕ್ ಸೇವಕ್ ಹುದ್ದೆಗಳಿಗೆ 10 ರಿಂದ 12 ಸಾವಿರ ರೂ. ವೇತನವಿದೆ.

ಅರ್ಹತೆ: ಅಭ್ಯರ್ಥಿಗಳಿಗೆ 21/12/2020ಕ್ಕೆ 18 ವರ್ಷ ಆಗಿರಬೇಕು. 40 ವರ್ಷಗಳ ವಯೋಮಿತಿ ಮೀರಿರಬಾರದು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇದೆ.

ಶೈಕ್ಷಣಿಕ ಅರ್ಹತೆ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಪಡೆದಿರಬೇಕು ಹಾಗೂ ಕರ್ನಾಟಕ ಅಧಿಕೃತ ಭಾಷೆ ಕನ್ನಡವನ್ನು ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು. ಬೇಸಿಕ್ ಕಂಪ್ಯೂಟರ್ ಜ್ಞಾನ ಮತ್ತು ಪ್ರಮಾಣ ಪತ್ರವನ್ನು ಹೊಂದಿರಬೇಕು.

ಶುಲ್ಕದ ವಿವರ: ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿಸಬೇಕು. ಎಸ್‌ಟಿ/ ಎಸ್‌ಟಿ/ ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಮಾಹಿತಿಗೆ: https://postofficerecruitment.com/karnataka

ಡಿಪ್ಲೋಮಾ, ಐಟಿಐ ಪದವೀಧರರಿಗೆ ದೇಶಾದ್ಯಂತ ಹಲವು ಹುದ್ದೆಗಳು ಖಾಲಿ

ವಿವಿಧ ಪದವೀಧರರಿಗೆ ಐಡಿಬಿಐ ಬ್ಯಾಂಕ್‌ನಲ್ಲಿವೆ 134 ಹುದ್ದೆಗಳು

ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಖಾಲಿ ಇವೆ ಫೈರ್ ಇಂಜಿನಿಯರ್ ಹುದ್ದೆಗಳು

Share This Article

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…