More

    ಉನ್ನತ ಪದವಿ ಪಡೆದವರಿಗೆ ಭರ್ಜರಿ ಅವಕಾಶ: ಕೇಂದ್ರ ಸರ್ಕಾರದಿಂದ ವಿವಿಧ ಇಲಾಖೆಗಳಿಗೆ ಆಹ್ವಾನ

    ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್‍ಸಿ)ಯಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಹುದ್ದೆಗಳು: 89

    ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಜಲಶಕ್ತಿ ಸಚಿವಾಲಯ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯ, ಗೃಹ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇವೆ. ಹುದ್ದೆಗಳಲ್ಲಿ ಮೀಸಲಾತಿ ನಿಗದಿಯಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ಇದೆ.

    ಹುದ್ದೆ ವಿವರ
    * ಪಬ್ಲಿಕ್ ಪ್ರಾಸಿಕ್ಯೂಟರ್ – 43 * ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್ – 26
    ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಸೆಂಟ್ರಲ್ ಬ್ಯೂರೋ ಆï ಇನ್ವೆಸ್ಟಿಗೇಷನ್ ವಿಭಾಗಕ್ಕೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಪಬ್ಲಿಕ್ ಪ್ರಾಸಿಕ್ಯೂಟರ್​ಗೆ ಗರಿಷ್ಠ 35 ವರ್ಷ ಹಾಗೂ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‍ಗೆ 30 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕಾನೂನಿನಲ್ಲಿ ಪದವಿ, ಪಡೆದಿದ್ದು, ವೃತ್ತಿ ಅನುಭವ ಹೊಂದಿರಬೇಕು. ನ್ಯಾಯಾಲಯಗಳಲ್ಲಿ ಪ್ರಕರಣಗಳ ವಿಚಾರಣೆ ನಡೆಸುವುದು, ನ್ಯಾಯಾಲಯದಲ್ಲಿ ನಡೆಯುವ ಪ್ರಕರಣ/ ಸಂಬಂಧಿತ ವಿಚಾರಣೆಗಳಿಗ ಹಾಜರಾಗುವುದು, ಕಾನೂನು ಸಲಹೆ ನೀಡುವುದು ಇವರ ಜವಾಬ್ದಾರಿಯಾಗಿರುತ್ತದೆ.

    * ಅಸಿಸ್ಟೆಂಟ್ ಎಕ್ಸಿಕ್ಯೂಟೀವ್ ಇಂಜಿನಿಯರ್ (ಸಿವಿಲ್) – 10
    ನೌಕರರ ರಾಜ್ಯ ವಿಮಾ ನಿಗಮದಲ್ಲಿ ಈ ಮೇಲ್ಕಂಡ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಬಿಇ, ಬಿ.ಟೆಕ್ ಪದವಿ ಪಡೆದಿದ್ದು, ಕನಿಷ್ಠ 3 ವರ್ಷ ವೃತ್ತಿ ಅನುಭವ ಇರುವ 35 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    * ಪ್ರೋಗ್ರಾಮರ್ (ಗ್ರೇಡ್ ಎ) – 1
    ಕೇಂದ್ರ ಅಂತರ್ಜಲ ಮಂಡಳಿಯಲ್ಲಿ ಈ ಹುದ್ದೆ ಖಾಲಿ ಇದ್ದು, ಸ್ಟಾೃಟಿಸ್ಟಿಕ್ಸ್/ ಮ್ಯಾಥಮೆಟಿಕ್ಸ್/ ಆಪರೇಷನ್ ರಿಸರ್ಚ್/ ಫಿಜಿಕ್ಸ್ ಅಥವಾ ಎಕನಾಮಿಕ್ಸ್/ ಕಾಮರ್ಸ್‍ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಇಂಜಿನಿಯರಿಂಗ್/ ಕಂಪ್ಯೂಟರ್ ಸೈನ್ಸ್‍ನಲ್ಲಿ ಪದವಿ ಪಡೆದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    * ಎಕನಾಮಿಕ್ ಆಫೀಸರ್ – 1
    ಕೃಷಿ ಇಲಾಖೆಯಲ್ಲಿ ಈ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಎಕನಾಮಿಕ್ಸ್/ ಬಿಜಿನೆಸ್ ಎಕನಾಮಿಕ್ಸ್/ ಎಕನಾಮೆಟ್ರಿಕ್ಸ್‍ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರು.

    * ಸೀನಿಯರ್ ಸೈಂಟಿಫಿಕ್ ಆಫೀಸರ್ (ಬ್ಯಾಲಿಸ್ಟಿಕ್ಸ್-1, ಬಯಾಲಜಿ-1) – 2
    ಫಿಜಿಕ್ಸ್/ ಫೊರೆನ್ಸಿಕ್ ಸೈನ್ಸ್, ಜೂವಾಲಜಿ/ ಬಾಟ್ನಿ/ ಆಂಥ್ರಪಲಾಜಿ/ ಮೊಲಿಕ್ಯುಲರ್ ಬಯಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಗರಿಷ್ಠ 38 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಅರ್ಜಿ ಶುಲ್ಕ: ಎಸ್ಸಿ, ಎಸ್ಟಿ, ಅಂಗವಿಕಲ, ಮಹಿಳಾ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ 25 ರೂ. ಶುಲ್ಕವಿದೆ.

    ಅರ್ಜಿ ಸಲ್ಲಿಸಲು ಕೊನೇ ದಿನ: 19.3.2021
    ಅಧಿಸೂಚನೆಗೆ: https://bit.ly/3r4edgT
    ಮಾಹಿತಿಗೆ: http://www.upsconline.nic.in

    ಹೆಚ್ಚಿನ ಉದ್ಯೋಗ ಸುದ್ದಿಗೆ ಕ್ಲಿಕ್ಕಿಸಿ:

    https://www.vijayavani.net/category/%e0%b2%89%e0%b2%a6%e0%b3%8d%e0%b2%af%e0%b3%8b%e0%b2%97-%e0%b2%ae%e0%b2%bf%e0%b2%a4%e0%b3%8d%e0%b2%b0/

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್ಸ್​ ಮಾಡಿ

    ಬೆಳಗಾವಿಯ ಕಂಟೋನ್ಮೆಂಟ್ ಬೋರ್ಡ್‍ನಲ್ಲಿವೆ ಹಲವು ಹುದ್ದೆಗಳು- 7ನೇ ಕ್ಲಾಸ್​ ಪಾಸಾದವರಿಗೂ ಅವಕಾಶ

    ಫುಡ್ ಕಾರ್ಪೋರೇಷನ್​ನಲ್ಲಿ ವಿವಿಧ ಉದ್ಯೋಗಾವಕಾಶ- ₹1.80 ಲಕ್ಷದವರೆಗೂ ಮಾಸಿಕ ಸಂಬಳ

    ವಿವಿಧ ವಿಷಯಗಳಲ್ಲಿ ಡಿಪ್ಲೋಮಾ ಮಾಡಿದವರಿಗೆ ಸೋಲಾರ್ ಸಂಸ್ಥೆಯಲ್ಲಿದೆ ಭರ್ಜರಿ ಉದ್ಯೋಗಾವಕಾಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts