More

    ಯುಪಿಎಸ್‍ಸಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಇಲ್ಲಿದೆ ಫುಲ್​ ಡಿಟೇಲ್ಸ್​…

    ಕೇಂದ್ರ ಸರ್ಕಾರದ ಹಲವು ಸಚಿವಾಲಯ, ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‍ಸಿ) ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

    ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಜಾರಿ ನಿರ್ದೇಶನಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಗೃಹ ಸಚಿವಾಲಯದ ರಾಷ್ಟ್ರೀಯ ತನಿಖಾ ಸಂಸ್ಥೆ, ದೆಹಲಿಯ ಮುನ್ಸಿಪಲ್ ಕೌನ್ಸಿಲ್‍ನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇದ್ದು, 7ನೇ ಸಿಪಿಸಿ ಲೆವೆಲ್ 11, 10ರ ಅನುಸಾರ ವೇತನ ನಿಗದಿಯಾಗಿದೆ.

    34 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 17 ಸ್ಥಾನ, ಎಸ್‍ಸಿಗೆ 4, ಎಸ್‍ಟಿಗೆ 2, ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 9, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 2 ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಅಭ್ಯರ್ಥಿಗಳ ದಾಖಲೆಗಳು ಹಿಂದಿ/ ಇಂಗ್ಲಿಷ್ ಹೊರತಾಗಿ ಬೇರೆ ಭಾಷೆಯಲ್ಲಿದ್ದರೆ ಗೆಜೆಟೆಡ್ ಅಧಿಕಾರಿ/ ನೋಟರಿ ಪತ್ರ ಸಲ್ಲಿಸಬೇಕು.

    ಹುದ್ದೆ, ಸಂಖ್ಯೆ ವಿವರ
    * ಅಸಿಸ್ಟೆಂಟ್ ಲೀಗಲ್ ಅಡ್ವೈಸರ್ – 2
    * ಮೆಡಿಕಲ್ ಫಿಜಿಸಿಸ್ಟ್ – 4
    * ಪಬ್ಲಿಕ್ ಪ್ರಾಸಿಕ್ಯೂಟರ್ – 10
    * ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) – 18

    ಶೈಕ್ಷಣಿಕ ಅರ್ಹತೆ
    ಹುದ್ದೆಗೆ ಅನುಗುಣವಾಗಿ ಕಾನೂನು, ಭೌತಶಾಸ್ತ್ರ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್‍ನಲ್ಲಿ ಪದವಿ/ ಸ್ನಾತಕೋತ್ತರ ಪದವಿ ಜತೆ ಕಂಪ್ಯೂಟರ್ ಜ್ಞಾನ ಹಾಗೂ ವೃತ್ತಿ ಅನುಭವ ಅವಶ್ಯ.

    ವಯೋಮಿತಿ
    ಹುದ್ದೆಗೆ ಅನುಗುಣವಾಗಿ ಗರಿಷ್ಠ 30 ರಿಂದ 40 ವರ್ಷ. ಎಸ್‍ಸಿ, ಎಸ್‍ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ಅಭ್ಯರ್ಥಿಗಳಿಗೆ 3ವರ್ಷ ವಯೋಸಡಿಲಿಕೆ ಇದೆ.

    ಅರ್ಜಿ ಶುಲ್ಕ
    ಎಸ್‍ಸಿ, ಎಸ್‍ಟಿ, ಅಂಗವಿಕಲ, ಮಹಿಳಾ ಅಭ್ಯರ್ಥಿಗಳನ್ನು ಹೊರತು ಪಡಿಸಿ ಉಳಿದ ಅಭ್ಯರ್ಥಿಗಳು 25 ರೂ. ಪಾವತಿಸತಕ್ಕದ್ದು.

    ಆಯ್ಕೆ ಪ್ರಕ್ರಿಯೆ
    ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ, ವೃತ್ತಿ ಅನುಭವ ಆಧರಿಸಿ ಶಾರ್ಟ್ ಲಿಸ್ಟ್ ಸಿದ್ಧಪಡಿಸಲಾಗುವುದು. ಆಯ್ದ ಅಭ್ಯರ್ಥಿಗಳಿಗೆ ಸಂದರ್ಭಕ್ಕೆ ಅನುಗುಣವಾಗಿ ನೇಮಕಾತಿ ಪರೀಕ್ಷೆ ನಡೆಸಿ ಸಂದರ್ಶನ ಅಥವಾ ಕೇವಲ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸಲು ಕೊನೇ ದಿನ: 31.12.2020
    ಅಧಿಸೂಚನೆಗೆ: https://bit.ly/3gJ96y9

    ಮಾಹಿತಿಗೆ: http://www.upsconline.nic.in

    ಇನ್ನೂ ಹೆಚ್ಚಿನ ಉದ್ಯೋಗಗಳ ಮಾಹಿತಿಗೆ https://www.vijayavani.net/ ವಿಭಾಗದ ಅಂಕಣ ಕಾಲಂನಲ್ಲಿ ಉದ್ಯೋಗಮಿತ್ರ ಕ್ಲಿಕ್ಕಿಸಿ

    ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಆಹ್ವಾನ

    ಎಸ್​ಎಸ್​ಎಲ್​ಸಿ, ಡಿಪ್ಲೋಮಾ, ಪದವೀಧರರಿಗೆ ಕೇಂದ್ರ ಸರ್ಕಾರದ 74 ಹುದ್ದೆಗಳಿಗೆ ಆಹ್ವಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts