More

    ಅಯೋಧ್ಯೆಯ ಏರ್​ಪೋರ್ಟ್​ ಇನ್ಮುಂದೆ ಮರ್ಯಾದಾ ಪುರುಷೋತ್ತಮ ಶ್ರೀರಾಮ ನಿಲ್ದಾಣ

    ಲಖನೌ: ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿರುವ ವಿಮಾನ ನಿಲ್ದಾಣ ಇನ್ನು ಮುಂದೆ “ಮರ್ಯಾದಾ ಪುರುಷೋತ್ತಮ ಶ್ರೀರಾಮವಿಮಾನ ನಿಲ್ದಾಣ” ಎಂದು ಕರೆಯಲಾಗುತ್ತದೆ. ಏಕೆಂದರೆ ಇಲ್ಲಿಯ ವಿಮಾನ ನಿಲ್ದಾಣಕ್ಕೆ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಹೆಸರಿಡುವ ಪ್ರಸ್ತಾಪಕ್ಕೆ ಉತ್ತರ ಪ್ರದೇಶ ಸಚಿವ ಸಂಪುಟ ಅನುಮೋದನೆ ನೀಡಿದೆ.

    ಸಚಿವ ಸಂಪುಟ ಇದನ್ನು ಅಂಗೀಕರಿಸಿದ ಈ ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆಯಲೂ ಸಂಪುಟ ಸಭೆ ನಿರ್ಧರಿಸಿದೆ. ಈ ಪ್ರಸ್ತಾವಕ್ಕೆ ವಿಧಾನಸಭೆಯ ಅನುಮೋದನೆ ದೊರೆತ ನಂತರ ಅದನ್ನು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳಿಸಲು ಸಂಪುಟ ಸಭೆ ಒಪ್ಪಿಗೆ ನೀಡಿತು.

    ಪ್ರಸ್ತುತ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಹೇಳಿಕೆ ತಿಳಿಸಿದೆ.

    ಇದನ್ನೂ ಓದಿ: ಗಾಂಧಿ ಕುಟುಂಬದಲ್ಲಿ ತಲ್ಲಣ ಸೃಷ್ಟಿಸಿರುವ ಒಬಾಮಾ ಪುಸ್ತಕ ವಾರದಲ್ಲಿ 17 ಲಕ್ಷ ಕಾಪಿ ಸೇಲ್​

    ರಾಜ್ಯ ಸರ್ಕಾರವು ನಗರ ಅಭಿವೃದ್ಧಿ ಮತ್ತು ಜಾಗತಿಕ ಧಾರ್ಮಿಕ ಪ್ರವಾಸೋದ್ಯಮ ತಾಣ ನಿರ್ಮಾಣದಲ್ಲಿ ತೊಡಗಿದ್ದು ಅಯೋಧ್ಯೆಯ ಸಂರಕ್ಷಣೆ, ಪ್ರವಾಸೋದ್ಯಮ ಮತ್ತು ಮೂಲಸೌಕರ್ಯಗಳ ಒಟ್ಟಾರೆ ಅಭಿವೃದ್ಧಿಗೆ ಜಾಗತಿಕ ಸಲಹೆಗಾರರನ್ನು ಸಹ ನೇಮಿಸಲಾಗುವುದು.

    “ಶ್ರೀರಾಮನ ನಗರ ಅಯೋಧ್ಯೆಯನ್ನು ವಿಶ್ವದ ಉನ್ನತ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ” ಎಂದು ಉತ್ತರಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ.
    ಯೋಗಿ ಆದಿತ್ಯನಾಥ್ ಈ ಹಿಂದೆ ಹಲವು ನಗರಗಳಿಗೆ ಮರುನಾಮಕರಣ ಮಾಡುವ ಮೂಲಕ ಸುದ್ದಿಯಲ್ಲಿದ್ದರು.

    ಇದೀಗ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರನ್ನು ಮರುನಾಮಕರಣ ಮಾಡುವ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.

    ವಿಧ್ವಂಸಕ ಕೃತ್ಯಕ್ಕೆ ಯೋಜನೆ ರೂಪಿಸಿದ್ದು ನಿಜ ಎಂದು ಬಾಯ್ಬಿಟ್ಟ ಉಗ್ರ

    ಪಾಕ್​ನಲ್ಲಿ ಇನ್ಮುಂದೆ ರೇಪ್​ ಹೆಸ್ರು ಕೇಳಿದ್ರೆ ಬೆಚ್ಚಿಬೀಳಲಿದ್ದಾರೆ ಕಾಮುಕರು- ಇದೆಂಥ ಶಿಕ್ಷೆ ಗೊತ್ತಾ?

    ಹೊರಗಡೆ ಇಂಟೀರಿಯರ್​ ಡಿಸೈನಿಂಗ್​ ಬೋರ್ಡ್​- ಒಳಗಡೆ ಅಂಗಾಂಗ ಪ್ರದರ್ಶನದ ತರಬೇತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts