More

    ಉತ್ತರ ಪ್ರದೇಶದಲ್ಲಿ 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇತಿಹಾಸ ಸೃಷ್ಟಿಸಿದ ಕಾಂಗ್ರೆಸ್‌: ಪ್ರಿಯಾಂಕಾ ಘೋಷಣೆ

    ಲಖನೌ: ಪಂಚ ರಾಜ್ಯಗಳ ಚುನಾವಣೆ ಇನ್ನೇನು ಸಮೀಪಿಸುತ್ತಿದೆ. ಅದರಲ್ಲಿಯೂ ಉತ್ತರ ಪ್ರದೇಶ ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯ ಕ್ಷೇತ್ರವಾಗಿ ಪರಿಣಮಿಸಿದೆ. ಆದ್ದರಿಂದ ಎಲ್ಲಾ ಪಕ್ಷಗಳೂ ತಮ್ಮ ಗೆಲುವಿಗಾಗಿ ರಾತ್ರಿ-ಹಗಲು ಎನ್ನದೇ ಶ್ರಮಿಸುತ್ತಿವೆ. ಇದರ ನಡುವೆಯೇ ಕಾಂಗ್ರೆಸ್ ಪಕ್ಷವು 30 ವರ್ಷಗಳಲ್ಲಿ ಮೊದಲ ಬಾರಿಗೆ ಉತ್ತರ ಪ್ರದೇಶದ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದ್ದು ಇತಿಹಾಸ ಸೃಷ್ಟಿಸಲಿದೆ.

    ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಾಹಿತಿ ನೀಡಿದ್ದಾರೆ. ನಾವು ನಮ್ಮ ಸಾಮರ್ಥ್ಯದಿಂದ ಹೋರಾಡುತ್ತೇವೆ. ಕಳೆದ 30 ವರ್ಷಗಳಲ್ಲಿ ಮೊದಲ ಸಲ ಎಲ್ಲ ಕ್ಷೇತ್ರಗಳಿಂದ ಕಣಕ್ಕಿಳಿದಿದ್ದೇವೆ ಎಂದು ಪ್ರಿಯಾಂಕಾ ಹೇಳಿದರು. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮ್ಮುಖದಲ್ಲಿ ಗಾಜಿಯಾಬಾದ್​​ನಲ್ಲಿ ಶುಕ್ರವಾರ ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಪ್ರಿಯಾಂಕಾ ಗಾಂಧಿ ನಾವು ಈ ಬಾರಿ ಚುನಾವಣೆಯಲ್ಲಿ ನಮ್ಮ ಸರ್ವ ಶಕ್ತಿಯನ್ನೂ ಧಾರೆಯೆರೆಯುತ್ತಿದ್ದೇವೆ. ಹಾಗಾಗಿ ಎಲ್ಲ 403 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುತ್ತಿದ್ದೇವೆ ಎಂದರು.

    ಫೆ.10 ರಂದು ಮೊದಲ ಹಂತದ ಮತದಾನ ನಡೆಯಲಿದೆ. 2, 3, 4, 5, 6 ಹಾಗೂ 7ನೇ ಹಂತದ ಮತದಾನ ಕ್ರಮವಾಗಿ ಫೆ.14, ಫೆ,20, ಫೆ,23, ಫೆ,27, ಮಾ.3 ಮತ್ತು ಮಾ.7 ರಂದು ನಡೆಯಲಿದೆ. ಮಾ.10 ರಂದು ಫಲಿತಾಂಶ ಹೊರಬರಲಿದೆ.

    ಟೆಸ್ಲಾ ಇಲೆಕ್ಟ್ರಿಕ್‌ ಕಾರು ಭಾರತಕ್ಕೆ: ಎಲಾನ್‌ ಮಸ್ಕ್‌ ಮನವಿ ತಿರಸ್ಕರಿಸಿದ ಕೇಂದ್ರ ಸರ್ಕಾರ- ಕಾರಣ ಇಲ್ಲಿದೆ…

    VIDEO: ಹೊಟ್ಟೆ-ಬಟ್ಟೆ ಕಟ್ಟಿ ಮಾಡಿದ ಆಸ್ತಿ ಬರೆದು ಕೊಟ್ಟರೂ ನಿಲ್ಲದ ದಾಹ: ಕೋಟಿ-ಕೋಟಿ ಆಸ್ತಿ ಒಡತಿ ಬೀದಿ ಪಾಲು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts