More

    ಉತ್ತರಾಖಂಡದಲ್ಲಿ ಮತ್ತೆ ಶಾಕ್​- ನದಿನೀರಿನ ಮಟ್ಟ ಹೆಚ್ಚಳ, 34 ಮೃತದೇಹ ಪತ್ತೆ; ರಕ್ಷಣಾ ಕಾರ್ಯ ಸ್ಥಗಿತ

    ಉತ್ತರಾಖಂಡ್:‌ ಉತ್ತರಾಖಂಡದಲ್ಲಿ ಕೆಲ ದಿನಗಳ ಹಿಂದೆ ಉಂಟಾದ ಹಿಮಸ್ಫೋಟಕ್ಕೆ ಸಂಬಂಧಿಸಿದಂತೆ ಇದುವರೆಗೆ 34 ಮೃತದೇಹಗಳು ಪತ್ತೆಯಾಗಿವೆ. ಇನ್ನೂ 200ಕ್ಕೂ ಅಧಿಕ ಮಂದಿ ಬದುಕಿರುವ ಬಗ್ಗೆ ಸಂದೇಹ ವ್ಯಕ್ತವಾಗಿದೆ.

    ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿರುವ ಮಧ್ಯಯೇ ರಿಷಿಗಂಗಾ ನದಿ ಮತ್ತೆ ಉಕ್ಕಿ ಹರಿಯಲು ಶುರುವಾಗಿದೆ. ಈ ಹಿನ್ನೆಲೆಯಲ್ಲಿ ‌ ಚೆಮೋಲಿಯ ರೇಣಿ ಮತ್ತು ತಪೋವನ್ ಗ್ರಾಮದಲ್ಲಿ ರಕ್ಷಣಾ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ.

    ಕಳೆದ ಭಾನುವಾರ ಹಿಮ ಸ್ಫೋಟ ದುರಂತ ಸಂಭವಿಸಿದ ಬಳಿಕ ತಪೋವನದಲ್ಲಿ 25ರಿಂದ 35 ಮಂದಿ ನಾಲ್ಕು ದಿನಕ್ಕೂ ಹೆಚ್ಚು ಕಾಲ ಸಿಕ್ಕಿಹಾಕಿಕೊಂಡಿದ್ದಾರೆ. ಸುರಂಗದ ಒಳಗೆ ಕೆಲಸ ಮಾಡುತ್ತಿದ್ದ ಭದ್ರತಾ ಸಿಬ್ಬಂದಿ ಹೊರಗೆ ಬಂದಿದ್ದು, ಭಾರೀ ಯಂತ್ರಗಳ ಮೂಲಕ ಅವಶೇಷಗಳನ್ನು, ಕೆಸರುಗಳನ್ನು ತೆಗೆಯಲಾಗಿದೆ.

    ಈಗಾಗಲೇ ಸಿಕ್ಕಿರುವ 34 ಮೃತದೇಹಗಳ ಪೈಕಿ 10 ಮಂದಿಯನ್ನು ಮಾತ್ರ ಗುರುತಿಸಲಾಗಿದ್ದು, 24 ಮೃತದೇಹವನ್ನು ಗುರುತಿಸಲು ಸಾಧ್ಯವಾಗಿಲ್ಲ. ಈ ನಡುವೆ ರಿಷಿ ಗಂಗಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ನಾಪತ್ತೆಯಾಗಿದ್ದರು. ಅವರು ಸುರಕ್ಷಿತವಾಗಿ ಹಿಂತಿರುಗಿದ್ದಾರೆ ಎಂದು ಹೇಳಲಾಗಿದೆ. ಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ಲಿಟಟೆಡ್ ಕೊರೆಯುವ ಯಂತ್ರದೊಂದಿಗೆ ಕಾರ್ಮಿಕರನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.

    ಹಿಮ ಕರಗಿ ದುರಂತ?; ವಿಜಯವಾಣಿ ಪ್ರತ್ಯಕ್ಷ ವರದಿ

    ಹಿಮದಲ್ಲಿ ಕರಗಿದ ಕಣ್ಣೀರು; 171 ಮಂದಿ ಇನ್ನೂ ನಾಪತ್ತೆ, ಸಂಪರ್ಕ ಕಡಿದುಕೊಂಡ14 ಹಳ್ಳಿ

    ಒಂದು ಮಗು ನೀತಿನಿಂದ ಜನಸಂಖ್ಯೆ ಕುಸಿತ- ಚೀನಾ ಕಂಗಾಲು; ಸಂಖ್ಯೆ ಹೆಚ್ಚಿಸಲು ಹೊಸ ಪ್ಲ್ಯಾನ್​!

    ಮುಸ್ಲಿಂ ಹೆಣ್ಣುಮಕ್ಕಳಿಗೆ 18 ವರ್ಷ ಆಗದಿದ್ದರೂ ಪ್ರೌಢಾವಸ್ಥೆಗೆ ಬಂದರೆ ಮದುವೆಗೆ ಸ್ವತಂತ್ರರು; ಹೈಕೋರ್ಟ್​

    ರೈತ ಮುಖಂಡರಿಂದ ಜೀವಕ್ಕೆ ಅಪಾಯವಿದೆ- ಹಿಂಸಾಚಾರದ ಕುರಿತು ನಟ ದೀಪ್​ ಸಿಧು ಹೇಳಿರುವ ಮಾಹಿತಿ ಇಲ್ಲಿದೆ…

    ಮುದ್ದು ಕಂದನ ಜೀವ ಉಳಿಸಲು ₹6 ಕೋಟಿ ಜಿಎಸ್​ಟಿ ಮನ್ನಾ ಮಾಡಿದ ಪ್ರಧಾನಿ ಮೋದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts