More

    ಮರಾಠಾ ಆಯ್ತು, ಈಗ ವೀರಶೈವ ನಿಗಮ-ಮುಖ್ಯಮಂತ್ರಿ ಹೊರಡಿಸಿದ್ರು ಆದೇಶ

    ಬೆಂಗಳೂರು: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಲು ನಿರ್ಧರಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎರಡು ದಿನಗಳ ಹಿಂದೆ ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು, ಲಿಂಗಾಯತ ಸಮುದಾಯ ಸೇರಿದಂತೆ ಹಲವು ಸಂಘಟನೆಗಳು ಈ ಕ್ರಮವನ್ನು ವಿರೋಧಿಸಿದ ಬೆನ್ನಲ್ಲೇ ಇದೀಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರು ಮುಂದಾಗಿದ್ದಾರೆ.

    ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದು ಇವರಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ. ಹೀಗಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಗಮ ಆರಂಭಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶ ನೀಡಿದ್ದಾರೆ.

    ಮರಾಠಾ ಆಯ್ತು, ಈಗ ವೀರಶೈವ ನಿಗಮ-ಮುಖ್ಯಮಂತ್ರಿ ಹೊರಡಿಸಿದ್ರು ಆದೇಶ
    ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಬೆನ್ನಲ್ಲೇ ಲಿಂಗಾಯತ ಸಮುದಾಯದ ಸಚಿವರು ಮಾತ್ರವಲ್ಲದೆ ಕಾಂಗ್ರೆಸ್ ನಿಯೋಗವೂ ತಮ್ಮ ಸಮುದಾಯಕ್ಕೆ ಶೇ.16 ರಷ್ಟು ಮೀಸಲು ನೀಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿತ್ತು. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ‌ ರಚನೆಯ ಜತೆಗೆ ಸಮುದಾಯಕ್ಕೆ ಹಿಂದುಳಿದ ವರ್ಗದ ಮೀಸಲಾತಿ ಒದಗಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್, ಬಿಜೆಪಿ ಮಹಿಳಾ ಯುವನಾಯಕಿ ಸೃಷ್ಟಿ ಪಾಟೀಲ್ ಸಹ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ‌ ರಚನೆಗೆ ಮನವಿ ಮಾಡಿದ್ದರು.

    ಈ ಎಲ್ಲಾ ಬೆಳವಣಿಗೆಗಳ ನಂತರ ಮುಖ್ಯಮಂತ್ರಿಗಳು ಈ ಆದೇಶ ಹೊರಡಿಸಿದ್ದಾರೆ. ಆದರೆ ಆದೇಶದಲ್ಲಿ ನಿಗಮ ಸ್ಥಾಪನೆ,ಅನುದಾನ ಸೇರಿದಂತೆ ಯಾವುದೇ ಮಾಹಿತಿಯನ್ನು ತಿಳಿಸಿಲ್ಲ. ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಂಡು ಸರ್ಕಾರಿ ಆದೇಶ ಹೊರಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

    ಪಟಾಕಿಗೆ ಬಲಿಯಾದ ಬಿಜೆಪಿ ಸಂಸದೆಯ ಏಕೈಕ ಮೊಮ್ಮಗಳು!

    ಗಲಭೆ ಆರೋಪಿ ಸಂಪತ್​ರಾಜ್​ ಬಗ್ಗೆ ಡಿಕೆಶಿಗೆ ಮೊದಲೇ ಗೊತ್ತಿತ್ತಾ? ಏನು ಹೇಳಿದ್ದಾರೆ ಕೇಳಿ…

    ದೀಪಾವಳಿ ಸಮಯದಲ್ಲಿ ರಕ್ತದೋಕುಳಿಗೆ ಸ್ಕೆಚ್: ಜೈಷ್-ಎ-ಮೊಹಮ್ಮದ್​ ಉಗ್ರರು ಅರೆಸ್ಟ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts