

ವಿಜಯನಗರ: ಮೊಬೈಲ್ ಫೋನ್ ಕೊಡಿಸಲಿಲ್ಲವೆಂದು ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿರುವ ಭಯಾನಕ ಘಟನೆ ವಿಜಯನಗರದ ಕೊಟ್ಟೂರು ತಾಲೂಕಿನ ತೂಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪ್ರಥಮ ಪಿಯುಸಿ ಓದುತ್ತಿದ್ದ ನಾಗರಾಜ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೊಬೈಲ್ ಫೋನ್ ಕೊಡಿಸಿಲ್ಲವೆಂದು ಫೆ.16 ರಂದು ಬಾಲಕ ಮನೆ ಬಿಟ್ಟು ಹೋಗಿದ್ದ. ನಂತರ ಆತನ ಶವ ಕೊಟ್ಟೂರು ಕೆರೆಯಲ್ಲಿ ಪತ್ತೆಯಾಗಿದೆ. ಆದರೆ ಆತ ಸಂಪೂರ್ಣ ಸುಟ್ಟು ಕರಕಲಾಗಿದ್ದ!
ಸನ್ನಿಧಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ನಾಗರಾಜ, ಓದಿಗಾಗಿ ಮೊಬೈಲ್ ಫೋನ್ ಕೊಡಿಸುವಂತೆ ಪಾಲಕರ ಬಳಿ ಹಟ ಹಿಡಿದಿದ್ದ. ಆದರೆ ಕೆಲವೊಂದು ಕಾರಣಕ್ಕೆ ಫೋನ್ ಕೊಡಿಸಿರಲಿಲ್ಲ. ಇದರಿಂದ ಬೇಸರಗೊಂಡದ್ದ ಬಾಲಕ ಮನೆಬಿಟ್ಟು ಹೋಗಿದ್ದ. ನಂತರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಂಚಿಕೊಂಡಿದ್ದಾನೆ. ನಂತರ ಕೆರೆಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.
ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.