More

    ಮತ್ತೆ ಭುಗಿಲೆದ್ದ ಫೋಟೋ ವಿವಾದ: ಶಿವಮೊಗ್ಗದಲ್ಲಿ ಹಿಂದೂ ಯುವಕನಿಗೆ ಚಾಕು ಇರಿತ- ನಿಷೇಧಾಜ್ಞೆ ಜಾರಿ

    ಶಿವಮೊಗ್ಗ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಮಾರಂಭದ ಪ್ರಯುಕ್ತ ಮಾಲ್​ವೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ಹಾಕಿದ್ದಕ್ಕೆ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಸಾವರ್ಕರ್​ ಅವರ ಫೋಟೋ ತೆಗೆದು ಆ ಜಾಗದಲ್ಲಿ ಟಿಪ್ಪೂ ಸುಲ್ತಾನ್​ ಫೋಟೋ ಇಡಲು ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಉಂಟಾಗಿದ್ದ ಘರ್ಷಣೆ ಇದೀಗ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

    ಶಿವಮೊಗ್ಗದ ಅಮೀರ್​ ಅಹಮದ್​ ವೃತ್ತದಲ್ಲಿ ಭಾರಿ ಗಲಾಟೆ ನಡೆಯುತ್ತಿದ್ದು, ಪ್ರೇಮ್​ ಸಿಂಗ್​ ಎಂಬ ಯುವಕನನ್ನು ಅನ್ಯ ಕೋಮಿನ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಇದರಿಂದ ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

    ಪ್ರೇಮ್​ ಸಿಂಗ್​ ಅವರನ್ನು ಇಲ್ಲಿಯ ಮೆಗ್ಗಾನ್​ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಭಾರಿ ಗಲಾಟೆ ಹಿನ್ನೆಲೆಯಲ್ಲಿ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ.

    ಸ್ವಾತಂತ್ರ ಬಂದು 75 ವರ್ಷವಾದ ಹಿನ್ನೆಲೆಯಲ್ಲಿ‌ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಿ ಅಲಂಕರಿಸಲಾಗಿತ್ತು. ಅವುಗಳಲ್ಲಿ ಸಾವರ್ಕರ್ ಭಾವಚಿತ್ರ ಇರುವುದನ್ನು ಕಂಡ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

    ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದುಕೊಟ್ಟು ಬಂದ ಸಾವರ್ಕರ್ ಹೇಗೆ ಸ್ವಾತಂತ್ರ ಹೋರಾಟಗಾರನಾಗಲು ಸಾಧ್ಯ? ಎಂದು ಎಸ್​​ಡಿಪಿಐ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಾವರ್ಕರ್ ಭಾವಚಿತ್ರ ತೆಗೆಯುವಂತೆ ಪ್ರತಿಭಟನೆಯನ್ನೂ ನಡೆಸಿದ್ದರು. ಸಾವರ್ಕರ್ ಚಿತ್ರದ ಬದಲು ಸ್ವಾತಂತ್ರ್ಯಕ್ಕಾಗಿ ಜೀವಕೊಟ್ಟವರ ಭಾವಚಿತ್ರ ಹಾಕುವಂತೆ ಪಟ್ಟುಹಿಡಿದಿದ್ದರು. ನಂತರ ಆ ಜಾಗದಲ್ಲಿ ಟಿಪ್ಪು ಸುಲ್ತಾನ್​ ಫೋಟೋ ಇರಿಸಲು ಯತ್ನಿಸಲಾಗಿತ್ತು. ಇದರಿಂದ ಪರಿಸ್ಥಿತಿ ಕೈಮೀರಿತ್ತು. ಇದೀಗ ಮತ್ತೆ ಆ ವಿವಾದ ಭುಗಿಲೆದ್ದಿದೆ.

    ಇಂದು ಮತ್ತೆ ಸ್ಥಳದಲ್ಲಿದ್ದ ಸಾವರ್ಕರ್​ ತೆಗೆದು ಟಿಪ್ಪು ಫೋಟೋ ಇಡಲು ಹೊರಟಿತ್ತು ಒಂದು ಗುಂಪು. ನಂತರ ಪೊಲೀಸರು ಮಧ್ಯೆ ಪ್ರವೇಶಿಸಿ ಸಾವರ್ಕರ್ ಫೋಟೋ ತೆರವು ಮಾಡಿದರು. ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೊ ಇಡಲು ಪೊಲೀಸರು ನಿರಾಕರಿಸಿದರು. ಈ ಹಿನ್ನೆಲೆಯಲ್ಲಿ ಎರಡು ಕೋಮಿನ ನಡುವೆ ಜಟಾಪಟಿ ಶುರುವಾಯಿತು.

    ಎರಡು ಕೋಮಿನವರಿಗೆ ಶಾಂತವಾಗಿರಲು ಪೊಲೀಸರು ಸೂಚನೆ ನೀಡಿದರು. ಈ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ ಶುರುವಾಯಿತು. ಪ್ರತಿಭಟನೆ ನಡೆಯುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಮತ್ತೊಂದು ಕೋಮಿನ ಗುಂಪು ಟಿಪ್ಪು ಸುಲ್ತಾನ್ ಫ್ಲೆಕ್ಸ್ ಇಡಲು ಹೊರಟಿತು. ಗುಂಪು ಚದರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ಮಾಡಿದರು. (ದಿಗ್ವಿಜಯ ನ್ಯೂಸ್​)

    VIDEO: ತ್ರಿವರ್ಣ ಧ್ವಜ ಹಾರಿಸಿದರೆ ಸಾಯಿಸುವುದಾಗಿ ಘೋಷಿಸಿದ್ದ ಶ್ರೀನಗರದ ಲಾಲ್ ಚೌಕ್‌ನಲ್ಲಿ ಮೊಳಗಿತು ವಂದೇ ಮಾತರಂ…

    VIDEO: ಕೋಲಾರದಲ್ಲಿ ಅನಾವರಣಗೊಂಡ ದೇಶದ ಅತಿದೊಡ್ಡ ಧ್ವಜ ಕಂಡು ಪುಳಕಿತರಾದ ಜನ- ಸೇನಾ ಹೆಲಿಕಾಪ್ಟರ್​ನಿಂದ ಪುಷ್ಪಾರ್ಚನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts