More

    ಕೆಆರ್​ಎಸ್​ನಿಂದ ದಾಖಲೆ ಪ್ರಮಾಣದ ನೀರು ಬಿಡುಗಡೆ: 40 ಗ್ರಾಮಗಳಿಗೆ ಪ್ರವಾಹದ ಭೀತಿ- ಐತಿಹಾಸಿಕ ತಾಣಗಳಿಗೂ ಕಂಟಕ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಹಾ ಮಳೆ ಹಿನ್ನೆಲೆಯಲ್ಲಿ ಕೆಆರ್​ಎಸ್​ ಡ್ಯಾಂನಿಂದ 99 ಸಾವಿರ ಕ್ಯೂಸೆಕ್ ಗೂ ಹೆಚ್ಚು ನೀರು ಬಿಡುಗಡೆ ಮಾಡಲಾಗಿದ್ದು, ಕಾವೇರಿ ನದಿ ಪಾತ್ರದಲ್ಲಿ ಹೆಚ್ಚಾದ ಪ್ರವಾಹ ಭೀತಿ ಹೆಚ್ಚಾಗಿದೆ.

    ಮೂರು ವರ್ಷಗಳ ಬಳಿಕ ಅಧಿಕ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. 2019ರಲ್ಲಿ 1.64 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿತ್ತು. ಸದ್ಯ 99,038 ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದ್ದು, ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದೆ.

    ಶ್ರೀರಂಗಪಟ್ಟಣ, ಪಾಂಡವಪುರ ತಾಲೂಕಿನ 40 ಗ್ರಾಮಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. ಮತ್ತೊಂದೆಡೆ ಪ್ರವಾಸಿ ತಾಣಗಳು, ಐತಿಹಾಸಿಕ ಕಟ್ಟಡಗಳಿಗೂ ಪ್ರವಾಹದ ಕಂಟಕ ಎದುರಾಗಿದೆ. ರಂಗನತಿಟ್ಟು ಪಕ್ಷಿಧಾಮ, ಪಶ್ಚಿಮ ವಾಹಿನಿ, ಗೋಸಾಯ್ ಘಾಟ್ ಮುಳುಗುವ ಸಾಧ್ಯತೆ ಹೆಚ್ಚಿದೆ.

    200 ವರ್ಷದ ಹಳೆಯದಾದ ವೆಲ್ಲೆಸ್ಲಿ ಸೇತುವೆಗೆ ಅಪಾಯ ಉಂಟಾಗಿದೆ. ಸದ್ಯ ನದಿ ತೀರದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.

    ಮಡಿಕೇರಿ ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಮಳೆ ಆರ್ಭಟ ಹೆಚ್ಚಿದ್ದು, ಸದ್ಯ ಡ್ಯಾಂಗಿ 88,348 ಕ್ಯೂಸೆಕ್ ಒಳ ಹರಿವು ಇದೆ. ಮುಂಜಾಗೃತಾ ಕ್ರಮವಾಗಿ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. (ದಿಗ್ವಿಜಯ ನ್ಯೂಸ್​)

    ಕಣ್ಣಲ್ಲಿ ಕಣ್ಣಿಟ್ಟು ಕಾಯ್ತಿದ್ರೂ ಸಿಕ್ತಿಲ್ಲ ಚಿರತೆ: ಬೆಳಗಾವಿಯ 22 ಶಾಲೆಗಳಿಗೆ ರಜೆ ಘೋಷಣೆ

    ಗುಜರಾತ್​ನಲ್ಲಿ ಕಾಂಗ್ರೆಸ್​-ಬಿಜೆಪಿ ನಡುವೆ ಸೀಕ್ರೆಟ್​ ಲವ್​ , ಎರಡೂ ಶೀಘ್ರವೇ ವಿಲೀನ: ಬಾಂಬ್​ ಸಿಡಿಸಿದ ಕೇಜ್ರಿವಾಲ್​

    ದೇಹದ ಇಂಚಿಂಚೂ ಬಿಡದೇ ಟ್ಯಾಟೂ ಹಾಕಿಸಿಕೊಂಡ ನಟಿ! ಖಾಸಗಿ ಅಂಗಗಳ ನೋವು ಬಿಚ್ಚಿಟ್ಟಿದ್ದು ಹೀಗೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts