More

    ವೀಕೆಂಡ್‌ ಕರ್ಫ್ಯೂ ವೇಳೆ ಬಸ್‌, ಮೆಟ್ರೊ ಸೇವೆ ಇರುತ್ತಾ? ಏನೇನು ಹೊಸ ರೂಲ್ಸ್‌? ಇಲ್ಲಿವೆ ಡಿಟೇಲ್ಸ್‌

    ಬೆಂಗಳೂರು: ಕರೊನಾಕ್ಕೆ ಸಂಬಂಧಿಸಿದಂತೆ ಹೊಸದಾಗಿ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿರುವ ಬೆನ್ನಲ್ಲೇ ಇದೀಗ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯ ಬಸ್‌ಗಳ ಓಡಾಟದ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಶನಿವಾರ ಮತ್ತು ಭಾನುವಾರ ಕರ್ಫ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಬಸ್‌ ಮತ್ತು ನಮ್ಮ ಮೆಟ್ರೊ ಸಂಚಾರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿರುವ ಮಾರ್ಗಸೂಚಿಗಳು ಇದಾಗಿವೆ.

    ಇದರಲ್ಲಿರುವ ಹೈಲೈಟ್ಸ್‌ ಇಲ್ಲಿದೆ:

    * ಕರ್ಫ್ಯೂ ಸಂದರ್ಭದಲ್ಲಿ ಅಗತ್ಯ ಸೇವೆಗಳಿಗಾಗಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಗೆವರೆಗೆ ಬಿಎಂಟಿಸಿ ಬಸ್‌ ಇರಲಿದೆ. ಅಂದರೆ ಶನಿವಾರ, ಭಾನುವಾರ ಜನಸಾಮಾನ್ಯರಿಗೆ ಬಿಎಂಟಿಸಿ ಬಸ್‌ಗಳ ಸಂಚಾರ ಇರುವುದಿಲ್ಲ. ಈ ಸಂದರ್ಭದಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಬಿಎಂಟಿಸಿ ಬಸ್‌ಗಳು ಲಭ್ಯ.

    * ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಪ್ರಯಾಣದ ವೇಳೆ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ತಮ್ಮೊಡನೆ ಇರಿಸಿಕೊಂಡಿರಬೇಕು.

    * ಯಾವುದಾದರೂ ಪರೀಕ್ಷೆಗಳು ಇದ್ದಲ್ಲಿ, ವಿದ್ಯಾರ್ಥಿಗಳಿಗೂ ಪ್ರವೇಶ ಪತ್ರವನ್ನು ತೋರಿಸುವುದು ಕಡ್ಡಾಯ.

    * ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ಸಿಬ್ಬಂದಿ, ಸರ್ಕಾರಿ, ಖಾಸಗಿ ಬ್ಯಾಂಕ್​​, ವಿಮಾ ಇಲಾಖೆ ಸಿಬ್ಬಂದಿಗೂ ಅವಕಾಶವಿದೆ.

    * ವಾರಂತ್ಯದಲ್ಲಿ ಶೇ.10 ರಷ್ಟು ಬಸ್​ಗಳು ಮಾತ್ರ ಕಾರ್ಯನಿರ್ವಹಿಸಲಿವೆ

    * ಬೆಂಗಳೂರಿನಲ್ಲಿ ಕಂಟೈನ್ಮೆಂಟ್ ಝೋನ್​ನಲ್ಲಿ ಬಸ್​ ಸೇವೆ ಲಭ್ಯ ಇರುವುದಿಲ್ಲ

    * ಬಸ್​​ನಲ್ಲಿ ಪ್ರಯಾಣಿಕರು ಮಾಸ್ಕ್​​ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

    * ರೈಲು, ವಿಮಾನಗಳ ಮೂಲಕ ಬರುವ ಪ್ರಯಾಣಿಕರು ಟಿಕೆಟ್ ಹಾಗೂ ಐಡಿ ಕಾರ್ಡ್ ತೋರಿಸಿ ಬಸ್​ಗಳಲ್ಲಿ ಪ್ರಯಾಣ ಮಾಡಬಹುದು.

    * ಆಸ್ಪತ್ರೆಗೆ ತೆರಳುವ ರೋಗಿ ಮತ್ತು ಸಹಾಯಕರ ಪ್ರಯಾಣಕ್ಕೆ ಅವಕಾಶವಿದೆ.

    * ವೀಕೆಂಡ್​ ಕರ್ಫ್ಯೂ ವೇಳೆ ಕೆಎಸ್‌ಆರ್‌ಟಿಸಿ ಬಸ್‌ಗಳು ಎಂದಿನಂತೆ ಸಂಚರಿಸಲಿವೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

    * ರಾಜ್ಯ ಹಾಗೂ ಹೊರ ರಾಜ್ಯದ ನಡುವೆ ಬಸ್ ಸಂಚಾರ ಇರಲಿದೆ. ಗೋವಾ, ಕೇರಳ, ‌ಮಹಾರಾಷ್ಟ್ರ ಹಾಗೂ ತಮಿಳುನಾಡಿನ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.

    * ವೀಕೆಂಡ್ ಕರ್ಫ್ಯೂ​ ವೇಳೆಯೂ ನಮ್ಮ ಮೆಟ್ರೋ ಸಂಚಾರ ಇರಲಿದೆ. ಹಸಿರು, ನೇರಳೆ ಮಾರ್ಗದಲ್ಲಿ ಯಥಾಪ್ರಕಾರ ಮೆಟ್ರೋ ರೈಲು ಸಂಚಾರ ನಡೆಸಲಿದೆ. ಶೇಕಡಾ 50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಇರಲಿದೆ (ಸದ್ಯ ಮೆಟ್ರೋ ರೈಲಿನಲ್ಲಿ 1800-1900 ಜನ ಪ್ರಯಾಣಿಸುತ್ತಿದ್ದಾರೆ. ಈಗ ಇದರ ಮಿತಿಯನ್ನು 800-900ಕ್ಕೆ ಇಳಿಸಲಾಗಿದೆ)

    * ಸದ್ಯ 15 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸುತ್ತಿದೆ. ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಕ್ಕೊಂದು ಮೆಟ್ರೋ ಸಂಚಾರ ಮಾಡಲಿದೆ.

    10 ರಿಂದ 12ನೇ ತರಗತಿ ಹೊರತುಪಡಿಸಿ ಉಳಿದ ತರಗತಿಗಳು ಆನ್‌ಲೈನ್‌ನಲ್ಲಿ- ನೈಟ್‌ ಕರ್ಫ್ಯೂ ಮುಂದುವರಿಕೆ

    ನಾನೇಕೆ ಹಿಂದೂ ಧರ್ಮದಿಂದ ಮತಾಂತರಗೊಂಡೆ? ರಹಸ್ಯ ಬಿಚ್ಚಿಟ್ಟ ಖ್ಯಾತ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌

    ಫುಲ್‌ಟೈಟ್‌ ಆಗಿ ವಿಮಾನನಿಲ್ದಾಣದೊಳಗೇ ಮೂತ್ರ ಮಾಡಿದ ಶಾರುಖ್‌ ಪುತ್ರ ಆರ್ಯನ್‌! ಏನಿದರ ಅಸಲಿಯತ್ತು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts