More

    VIDEO: ಪ.ಬಂಗಾಳದಲ್ಲಿ ಬಾಂಬ್‌ ದಾಳಿ: ಗಂಭೀರ ಗಾಯಗೊಂಡ ಸಚಿವ- ಸಿಸಿಟಿವಿಯಲ್ಲಿ ಸೆರೆ

    ಮುರ್ಷಿದಾಬಾದ್‌: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ರೈಲು ನಿಲ್ದಾಣದಲ್ಲಿ ಬಾಂಬ್‌ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಕಾರ್ಮಿಕ ಸಚಿವ ಜಾಕೀರ್ ಹುಸೇನ್ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿಟಾ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಜಾಕೀರ್ ಹುಸೇನ್ ರಾತ್ರಿ 10 ಗಂಟೆ ಸುಮಾರಿಗೆ ಕೋಲ್ಕತಾಕ್ಕೆ ತೆರಳಲು ರೈಲು ನಿಲ್ದಾಣಕ್ಕೆ ಆಗಮಿಸಿದ್ದರು. ನಿಲ್ದಾಣದ 2 ನೇ ಪ್ಲಾಟ್‌ಫಾರ್ಮ್‌ನಲ್ಲಿ ಕಾಯುತ್ತಿದ್ದ ವೇಳೆಯಲ್ಲಿ ಬಾಂಬ್ ಸ್ಫೋಟವಾಗಿದೆ.

    ಸಚಿವ ಜಾಕೀರ್‌ ಮತ್ತು ಬೆಂಬಲಿಗರರನ್ನು ಟಾರ್ಗೆಟ್‌ ಮಾಡಿಕೊಂಡು ಈ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಸಚಿವ ಜಾಕೀರ್‌ ಹುಸೇನ್‌ ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಮುರ್ಷಿದಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರ ಕಾಲು ಮತ್ತು ಕಿಬ್ಬೊಟ್ಟೆಗೆ ಗಾಯವಾಗಿರುವುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ.

    ಗಾಯಾಳುಗಳನ್ನು ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆರಂಭಿಕ ಚಿಕಿತ್ಸೆಯ ನಂತರ ಅವರನ್ನು ಕೋಲ್ಕತಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ಹೇಳಿವೆ.

    ಈ ಸ್ಫೋಟ ಈಗ ರಾಜಕೀಯ ತಿರುವು ಪಡೆದುಕೊಂಡಿದ್ದು, ದಾಳಿಯನ್ನು ತೀವ್ರವಾಗಿ ಖಂಡಿಸಲಾಗಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್, ಬಿಜೆಪಿಯ ಬಂಗಾಳ ಅಭಿಯಾನದ ಪ್ರಧಾನ ಮುಖವಾಗಿರುವ ಮಾಜಿ ಟಿಎಂಸಿ ನಾಯಕ ಸುವೆಂದು ಅಧಿಕಾರಿ ಘಟನೆಯನ್ನು ಖಂಡಿಸಿದ್ದಾರೆ.

    ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಕೂಡ ಈ ದಾಳಿಯನ್ನು ಖಂಡಿಸಿದ್ದು, ಕೂಡಲೇ ಅಪರಾಧಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

    ನಡುರಸ್ತೆಯಲ್ಲಿಯೇ ವಕೀಲ ದಂಪತಿಯ ಬರ್ಬರ ಹತ್ಯೆ: ವಿಡಿಯೋದಲ್ಲಿ ಭಯಾನಕ ದೃಶ್ಯ ದಾಖಲು

    ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಕ್ಯಾಪ್ಟನ್ ಸತೀಶ್ ಶರ್ಮಾ ನಿಧನ

    ಶಾಲೆಯ ಮೇಲೆ ಬಂದೂಕುಧಾರಿಗಳಿಂದ ದಾಳಿ- 40 ಮಂದಿ ಶಿಕ್ಷಕರು, ವಿದ್ಯಾರ್ಥಿಗಳ ಅಪಹರಣ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts