More

    ಅಂತ್ಯಸಂಸ್ಕಾರಕ್ಕೆ ಹೆಗಲು ಕೊಡಲು ಪುರುಷರ ಹಿಂದೇಟು: ಹೆಣ್ಣುಮಕ್ಕಳಿಂದಲೇ ವಿಧಿವಿಧಾನ

    ರಾಂಚಿ: ಗ್ರಾಮದಲ್ಲಿ ಉಂಟಾದ ವೈಮನಸ್ಸಿನಿಂದಾಗಿ ಮೃತಪಟ್ಟ ಮಹಿಳೆಯ ಶವ ಹೊರಲು ಪುರುಷರು ಮುಂದಾಗದ ಹಿನ್ನೆಲೆಯಲ್ಲಿ ಹೆಣ್ಣುಮಕ್ಕಳೇ ಶವಸಂಸ್ಕಾರ ಮಾಡಿರುವ ಘಟನೆಯೊಂದು ಜಾರ್ಖಂಡ್ ರಾಜ್ಯದ ಹಜಾರಿಬಾಗ್ ಜಿಲ್ಲೆಯ ಖಂಡ್ವಾ ಗ್ರಾಮದಲ್ಲಿ ನಡೆದಿದೆ.

    ಮೃತರಾಗಿರುವ ಮಹಿಳೆ ಕುಂತೀದೇವಿ ನಾಲ್ಕು ವರ್ಷಗಳ ಹಿಂದೆ ಗಲಾಟೆ ಮಾಡಿಕೊಂಡಿದ್ದರು. ಆದ್ದರಿಂದ ಅವರನ್ನು ಗ್ರಾಮದ ಮುಖಂಡರು ತಮ್ಮ ಜಾತಿಯಿಂದ ಬಹಿಷ್ಕಾರ ಹಾಕಿದ್ದರು. ಕಳೆದ ಕೆಲ ದಿನಗಳಿಂದ ಪಾರ್ಶ್ವವಾಯುಗೆ ತುತ್ತಾಗಿದ್ದ ಅವರು ಇಂದು ಮೃತಪಟ್ಟರು.

    ಆದರೆ ಜಗಳ ಮಾಡಿಕೊಂಡಿದ್ದ ಕಾರಣ, ಯಾರೂ ಶವ ಎತ್ತಲು ಮುಂದೆ ಬರಲಿಲ್ಲ. ಜಾತಿಯಿಂದ ಹೊರಕ್ಕೆ ಹಾಕಿರುವ ಕಾರಣ, ಅವರನ್ನು ಮುಟ್ಟುವುದಿಲ್ಲ ಎಂದರು. ಇವರಿಗೆ ಎಂಟು ಮಂದಿ ಪುತ್ರಿಯರು ಇದ್ದು, ಅವರೇ ಮುಂದೆ ನಿಂತು ಶವವನ್ನು ತೆಗೆದಕೊಂಡು ಹೋಗಿದ್ದೂ ಅಲ್ಲದೇ, ಅಂತಿಮ ಸಂಸ್ಕಾರ ಮಾಡಿದರು.

    ಮಕ್ಕಳು ಅಂತ್ಯಸಂಸ್ಕಾರ ಮಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಗ್ರಾಮಸ್ಥರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪೋಷಕರು ಬದುಕಿರಲಿ, ಇಲ್ಲದಿರಲಿ… ಸಾಕು ಮಗಳಿಗೆ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ- ಕಾನೂನು ಏನಿದೆ ನೋಡಿ…

    ಅವರಪ್ಪನಿಂದಲೂ ಬಂಧಿಸಲು ಸಾಧ್ಯವಿಲ್ಲ- ‘ಮೂರ್ಖರ ವಿಜ್ಞಾನ’ದ ಪ್ರತಿಭಟನೆಗೆ ಬಾಬಾ ರಾಮ್‌ದೇವ್‌ ಪ್ರತಿಕ್ರಿಯೆ

    ಹೀಗೂ ಇರ್ತಾರೆ! ತಲೆಬುರುಡೆ ಓಪನ್‌ ಮಾಡಿ ಕತ್ತರಿ ಹಾಕಿದರೂ ಜೋಕ್‌ ಮಾಡುತ್ತಿದ್ದ ರೋಗಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts