17.8 C
Bengaluru
Wednesday, January 22, 2020

ಯಾರು ಸಾ.ರಾ ಮಹೇಶ್​… ಎಂದಿದ್ದ ರೇಣುಕಾಚಾರ್ಯಗೆ ಸಚಿವ ಮಹೇಶ್​ ಕೊಟ್ಟ ತಿರುಗೇಟು ಹೇಗಿತ್ತು ಗೊತ್ತಾ?

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಹಾಸನ: ಯಾರ್ರೀ ಸಾ.ರಾ ಮಹೇಶ್​, ಒಂದು ಬಾರಿ ಮಂತ್ರಿಯಾದ ಕೂಡಲೇ ಅವರೇನು ಹೀರೋನಾ… ಎಂಬ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಹೇಳಿಕೆಗೆ ಸಚಿವ ಸಾ.ರಾ ಮಹೇಶ್​ ತಿರುಗೇಟು ನೀಡಿದ್ದಾರೆ.

” ರೇಣುಕಾಚಾರ್ಯ ಅವರಿಗೆ ರಾಜಕಾರಣದ ಅರಿವಿನ ಕೊರತೆ ಇದೆ. ಸಾ.ರಾ ಮಹೇಶ್​ ಯಾರು ಎಂದು ಪ್ರಶ್ನಿಸುವ ರೇಣುಕಾಚಾರ್ಯಗೆ ಕಳೆದ ಬಾರಿ ವಿಧಾನಸಭೆಗೆ ಪ್ರವೇಶ ಪಡೆಯಲು ಸಾಧ್ಯವಾಗಿರಲಿಲ್ಲ. ಒಂದು ಬಾರಿ ಸಚಿವರಾದರೆ ದೊಡ್ಡ ಹೀರೋನ ಎಂದು ಪ್ರಶ್ನಿಸುವ ರೇಣುಕಾಚಾರ್ಯ ಅವರು ಐದಾರು ಬಾರಿ ಸಚಿವರಾಗಿರುವ ಬಹುದೊಡ್ಡ ನಾಯಕರು,” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಆಪರೇಷನ್​ ಕಮಲದ ಕುರಿತು ಮಾತನಾಡಿದ ಸಚಿವ ಸಾ.ರಾ ಮಹೇಶ್​, ” ಶಾಸಕರು ಮುಂಬೈಗೆ, ಮದರಾಸ್​ಗೆ ತೆರಳಿದ್ದಾರೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ ಬಿತ್ತರವಾಗುತ್ತಿರುವ ಸುದ್ದಿ. ಬೇರೆಡೆಗೆ ತೆರಳಿದ ಶಾಸಕರ ಹೆಸರುಗಳನ್ನು ಮಾಧ್ಯಮಗಳು ಬಹಿರಂಗಪಡಿಸಿದರೆ ಉತ್ತಮ. ನಮ್ಮ ಶಾಸಕರು ಪಕ್ಷಕ್ಕೆ ಬದ್ಧರಾಗಿದ್ದಾರೆ. ಹಾಗೇನಾದರೂ, ಬಿಜೆಪಿಯವರು ನಮ್ಮ ಒಬ್ಬ ಶಾಸಕರನ್ನು ಸೆಳೆದು ಅವರ ಹೆಸರು ಹೇಳುವ ಸಾಮರ್ಥ್ಯವಿದ್ದರೆ ನಾವೂ ಅವರ ಹತ್ತು ಜನ ಶಾಸಕರನ್ನು ಸೆಳೆದು ಹೆಸರುಗಳನ್ನು ಘೋಷಿಸುತ್ತೇವೆ. ಪ್ರಧಾನಮಂತ್ರಿಯಾಗಿದ್ದವರು, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು ನಮ್ಮ ಪಕ್ಷದಲ್ಲೂ ಇದ್ದಾರೆ. ಆಪರೇಷನ್​ ನಡೆಸಲು ನಮಗೂ ಶಕ್ತಿ ಇದೆ,” ಎಂದು ಅವರು ಹೇಳಿದರು.

ನಮ್ಮ ಶಾಸಕರನ್ನು ಸೆಳೆಯಲು ಸಾಧ್ಯವಿಲ್ಲ ಎಂದಿದ್ದ ಸಾ.ರಾ. ಮಹೇಶ್​, ಬಿಜೆಪಿಯ ಹತ್ತು ಮಂದಿ ನಮ್ಮ ಕಡೆ ಇದ್ದಾರೆ ಎಂದು ಕೆಲ ದಿನಗಳ ಹಿಂದೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಾ.ರಾ ಮಹೇಶ್​ ವಿರುದ್ಧ ಮಾತನಾಡಿದ್ದ ಬಿಜೆಪಿ ಶಾಸಕ ರೇಣುಕಾಚಾರ್ಯ, “ಯಾರ್ರೀ ಸಾ.ರಾ ಮಹೇಶ್?” ಎಂದು ಏರು ಧನಿಯಲ್ಲಿ ಮಾಧ್ಯಮಗಳನ್ನು ಪ್ರಶ್ನಿಸಿದ್ದರು. ರೇಣುಕಾಚಾರ್ಯ ಅವರ ಮಾತಿಗೆ ಸಾ.ರಾ ಮಹೇಶ್​ ಈಗ ವ್ಯಂಗ್ಯಭರಿತವಾಗಿಯೇ ತಿರುಗೇಟು ನೀಡಿದ್ದಾರೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...