More

    ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ ಸಿಎಂ ಬಸವರಾಜ ಬೊಮ್ಮಾಯಿ

    ಬೆಂಗಳೂರು: ಸುಮಾರು 8000 ಕ್ಕೂ ಹೆಚ್ಚು ಮರಗಳಿಗೆ ತಾಯಿ ಸ್ವರೂಪವಾಗಿರುವ ಸಾಲುಮರದ ತಿಮ್ಮಕ್ಕಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು.

    ಕೆಲ ದಿನಗಳ ಹಿಂದಷ್ಟೇ ಸಿಎಂ ಬೊಮ್ಮಾಯಿ ಅವರನ್ನು ತಿಮ್ಮಕ್ಕ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದಾದ ಬಳಿಕ ಸಿಎಂ ಸೂಚನೆ ಮೇರೆಗೆ ಬಿಡಿಎ, ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕಳಿಗೆ ನೀಡಿತ್ತು. ಇಂದು (ಜೂನ್​ 25) ಮುಂಜಾನೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಸಿಎಂ ಕರಾರು ಪತ್ರವನ್ನು ವಿತರಣೆ ಮಾಡಿದರು.

    ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ ಸಿಎಂ ಬಸವರಾಜ ಬೊಮ್ಮಾಯಿ

    ಸಿಎಂ ಸೂಚನೆ ಮೇರೆಗೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಸಾಲುಮರದ ತಿಮ್ಮಕ್ಕ ಅವರಿಗೆ ಬುಧವಾರ ನಿವೇಶನ ಪತ್ರ ವಿತರಿಸಿದರು. ಈ ವೇಳೆ ಬಿಡಿಎ ಕಾರ್ಯದರ್ಶಿ ಆನಂದ್, ಉಮೇಶ್, ಆಯುಕ್ತ ರಾಜೇಶ್‌ಗೌಡ, ಉಪಕಾರ್ಯದರ್ಶಿ ಮಧು ಉಪಸ್ಥಿತರಿದ್ದರು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯ ಮೇರೆಗೆ ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್‌ನಲ್ಲಿ ನಿವೇಶನವನ್ನು ಗುರುತಿಸಿ ವಿತರಿಸಲಾಗುತ್ತಿದೆ ಎಂದು ವಿಶ್ವನಾಥ್ ಅವರು ಹೇಳಿದ್ದಾರೆ. ತಿಮ್ಮಕ್ಕಳಿಗೆ ಒಟ್ಟು 50×80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

    ಬಿಡಿಎ ನಿವೇಶನ ನೀಡಿರುವುದು ಸಂತಸದ ವಿಷಯ. ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು ಎಂದು ಸಾಲುಮರದ ತಿಮ್ಮಕ್ಕ ಹೇಳಿದ್ದಾರೆ.

    ಬಂಡಾಯ ನಾಯಕ ಏಕನಾಥ್​ ಶಿಂಧೆಗೆ ಸವಾಲು ಎಸೆದ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ

    ಎಸ್ಸೆಸ್ಸೆಲ್ಸಿ ಪಾಸ್​ ಆಗಲ್ಲ ಎಂದು ಗೇಲಿ ಮಾಡಿದವರಿಗೆ ಈ ಹುಡುಗ ಕೊಟ್ಟ ತಿರುಗೇಟು ಹೇಗಿದೆ ನೋಡಿ!

    VIDEO| ಜೀವದ ಹಂಗು ತೊರೆದು ವ್ಯಕ್ತಿಯ ಪ್ರಾಣ ಉಳಿಸಿದ ರೈಲ್ವೆ ಸಿಬ್ಬಂದಿ: ಮೆಚ್ಚುಗೆಯ ಮಹಾಪೂರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts