More

    ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ ; ಅಧಿಕಾರಿಗಳಿಗೆ ತೋಟಗಾರಿಕೆ ಇಲಾಖೆ ಉಪನಿರ್ದೇಶ ಬಿ.ರಘು ಸೂಚನೆ

    ತುಮಕೂರು : ತುಮಕೂರು ತಾಪಂ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು ಎಂದು ಆಡಳಿತಾಧಿಕಾರಿ, ತೋಟಗಾರಿಕೆ ಇಲಾಖೆ ಉಪನಿರ್ದೇಶ ಬಿ.ರಘು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

    ತಾಪಂ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸಾವಾನ್ಯ ಸಭೆ ಹಾಗೂ ವಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ವಾತನಾಡಿದ ಅವರು, ವಿವಿಧ ಇಲಾಖೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ವಾಡಿದ್ದು, ವಿಳಂಬ ವಾಡದೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.

    ವಿಶೇಷ ಟಕ ಯೋಜನೆಯಡಿ ಬಿಡುಗಡೆಗೊಂಡಿರುವ ಅನುದಾನವನ್ನು ಸಂಬಂಧಿಸಿದ ಇಲಾಖೆಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಸದ್ಬಳಕೆ ವಾಡಬೇಕು. ಯೋಜನೆಯಡಿ ಗುರುತಿಸಲಾದ ಫಲಾನುಭವಿಗಳನ್ನು ವಿನಾ ಕಾರಣ ಅಲೆದಾಡುವಂತೆ ವಾಡದೆ ನಿಗದಿತ ಅವಧಿಯೊಳಗೆ ಯೋಜನೆಯ ಸೌಲಭ್ಯವನ್ನು ತಲುಪಿಸಬೇಕು ಎಂದರು.

    ಅರಣ್ಯ ಇಲಾಖೆ ಕೃಷಿ ಪ್ರೋತ್ಸಾಹ ಯೋಜನೆಯಡಿ ರೈತರ ಜಮೀನಿನಲ್ಲಿ ಗಿಡಮರಗಳನ್ನು ಬೆಳೆಸಲು ಕ್ರಮವಹಿಸಬೇಕು. ಉದ್ಯೋಗ ಖಾತರಿ ಮತ್ತು ನರೇಗಾ ಯೋಜನೆಗೆ ಆದ್ಯತೆ ನೀಡಿ ಇಂಗು ಗುಂಡಿಗಳನ್ನು ನಿರ್ಮಿಸುವಂತೆ ರೈತರಲ್ಲಿ ಅರಿವು ಮೂಡಿಸಬೇಕು ಎಂದರಲ್ಲದೆ, ತಾಪಂ ಆವರಣದಲ್ಲಿ ನರೇಗದಿಂದಾಗುವ ಪ್ರಯೋಜನಗಳನ್ನು ಪ್ರಾತ್ಯಕ್ಷಿಕೆಗಳ ಮೂಲಕ ಪ್ರಕಟಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.

    ತಾಲೂಕಿನಲ್ಲಿ ವಾಡಿಕೆಯಂತೆ ಮಳೆಯಾಗಿದ್ದು ಬಿತ್ತನೆ ಬೀಜ, ರಸಗೊಬ್ಬರವನ್ನು ಸಮಪರ್ಕವಾಗಿ ವಿತರಣೆ ವಾಡಲಾಗಿದೆ. ಕೃಷಿ ಇಲಾಖೆಯಡಿ ಕೃಷಿ ಹೊಂಡ, ಚೆಕ್ ಡ್ಯಾಂಗಳನ್ನು ನಿರ್ಮಿಸಿ ವಾನವ ದಿನಗಳನ್ನು ಹೆಚ್ಚು ಹೆಚ್ಚು ಸೃಜಿಸುವ ಮೂಲಕ ನರೇಗಾ ಯೋಜನೆಯನ್ನು ಯಶಸ್ವಿಗೊಳಿಸಲಾಗುತ್ತಿದೆ ಎಂದು ಕೃಷಿ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.

    ಸವಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಆರಂಭವಾಗಿರುವ ಹಾಸ್ಟೆಲ್‌ಗಳಲ್ಲಿ ಶೌಚಗೃಹ , ನೀರಿನ ತೊಟ್ಟಿಗಳನ್ನು ಸ್ವಚ್ಛತೆಗೊಳಿಸಿ ಕರೊನಾ ವಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ವಾಡುವಂತೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದರು.
    ಜಲ್ ಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ತಾಲೂಕಿನ ಪ್ರತಿ ಅಂಗನವಾಡಿ ಹಾಗೂ ಶಾಲೆಗಳಿಗೆ ನಳ ಸಂಪರ್ಕ ಕಲ್ಪಿಸಿ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಂಜಿನಿಯರ್‌ಗಳಿಗೆ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts