22.5 C
Bengaluru
Sunday, January 19, 2020

ಕುಸಿದ ಸಚ್ಚೇರಿಪೇಟೆ ಕಜೆ ಮೋರಿ

Latest News

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

<ಅಪಾಯಕಾರಿ ರಸ್ತೆಯಲ್ಲೇ ನಿತ್ಯ ಸಂಚಾರ >

ಬೆಳ್ಮಣ್:  ಮುಂಡ್ಕೂರು ಗ್ರಾಪಂ ವ್ಯಾಪ್ತಿಯ ಬೋಳಪದವು ಮಾರ್ಗದಿಂದ ಸಚ್ಚೇರಿಪೇಟೆ ಕಜೆ ಮಾರಿಗುಡಿ ದೇವಸ್ಥಾನ ಸಂಪರ್ಕಿಸುವ ರಸ್ತೆಯಲ್ಲಿ ಮೋರಿಯೊಂದು ದಿನೇ ದಿನೇ ಕುಸಿಯುತ್ತಿದ್ದು ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಆತಂಕ ಉಂಟುಮಾಡಿದೆ.

ಕಳೆದ ಒಂದು ವರ್ಷಗಳಿಂದ ಈ ಮೋರಿ ಕುಸಿದಿದ್ದು ಇಲ್ಲಿಯವರೆಗೂ ಯಾವುದೇ ಕ್ರಮವನ್ನು ಸಂಬಂಧಿಸಿದ ಇಲಾಖೆ ಕೈಗೊಂಡಿಲ್ಲ. ಈ ಭಾಗದಲ್ಲಿ ಹಲವಾರು ಮನೆಗಳಿದ್ದು ಹಾಗೂ ಕಜೆ ಮಹಮ್ಮಾಯಿ ದೇವಸ್ಥಾನವೂ ಇರುವುದರಿಂದ ಬಹುತೇಕ ವಾಹನಗಳು ಹಾಗೂ ಭಕ್ತರು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಆದರೆ ದೇವಸ್ಥಾನದಿಂದ ಅನತಿ ದೂರದಲ್ಲಿರುವ ಈ ಮೋರಿ ಸಂಪೂರ್ಣ ಕುಸಿದರೆ ಭಾರಿ ನಷ್ಟ ಸಂಭವಿಸಲಿದೆ.

ಬೆಳ್ಮಣ್, ಬೋಳ, ಕೆದಿಂಜೆ , ಮಂಜರಪಲ್ಕೆ ಹಾಗೂ ಮುಂಡ್ಕೂರು ಭಾಗದ ಜನರು ಮೂಡುಬಿದಿರೆಯನ್ನು ಸೇರಲು ಹೆಚ್ಚಾಗಿ ಇದೇ ರಸ್ತೆ ಅವಲಂಬಿಸಿದ್ದಾರೆ. ಇದು ಹತ್ತಿರದ ರಸ್ತೆಯಾಗಿದ್ದು ಕಜೆ ಮಾರ್ಗವಾಗಿ ಸಚ್ಚೇರಿಪೇಟೆಯನ್ನು ಕಡಂದಲೆಯಾಗಿ ಮೂಡುಬಿದಿರೆ ಸಂಪರ್ಕ ಪಡೆಯುವುದರಿಂದ ಬಹುತೇಕ ವಾಹನಗಳು ಇದೇ ರಸ್ತೆಯಲ್ಲಿ ನಿತ್ಯ ಓಡಾಟ ನಡೆಸುತ್ತವೆ. ಹೀಗಾಗಿ ಕೂಡಲೇ ಕುಸಿದ ಮೋರಿಯ ದುರಸ್ತಿ ಕಾರ್ಯ ನಡೆಯಲಿ ಎಂಬುದು ಇಲ್ಲಿನ ನಿವಾಸಿಗಳ ಒತ್ತಾಯ. ಒಂದು ವೇಳೆ ಮೋರಿ ಸಂಪೂರ್ಣ ಕುಸಿದರೆ ಕಜೆ ಪರಿಸರವನ್ನು ಸಂಪರ್ಕಿಸುವ ರಸ್ತೆಯೂ ಕಡಿತಗೊಳ್ಳಲಿದೆ.

ನೀರಿನಲ್ಲಿ ಕೊಚ್ಚಿ ಹೋದ ಮೋರಿ: ರಸ್ತೆ ಮಧ್ಯದಲ್ಲಿ ಹರಿಯುತ್ತಿದ್ದ ನೀರು ಮೋರಿಯಲ್ಲಿ ಹರಿದು ಹೋಗಲು ಇಲ್ಲಿ ಸಿಮೆಂಟ್ ಮೋರಿಗಳನ್ನು ಹಲವು ವರ್ಷಗಳ ಹಿಂದೆ ಅಳವಡಿಸಲಾಗಿದ್ದು , ಪ್ರಸಕ್ತ ಮಳೆಯ ನೀರಿನ ರಭಸಕ್ಕೆ ಮೋರಿಯು ಒಂದು ಭಾಗದಲ್ಲಿ ಸಂಪೂರ್ಣ ಕುಸಿದಿದ್ದು, ಸಿಮೆಂಟ್ ಮೋರಿಯೂ ನೀರಿನಲ್ಲಿ ಸ್ವಲ್ಪ ದೂರ ಕೊಚ್ಚಿ ಹೋಗಿದೆ. ಮೋರಿಯ ತಡೆಗೋಡೆ ಒಂದು ಭಾಗದಲ್ಲಿ ಸಂಪೂರ್ಣ ಕುಸಿದಿದ್ದು, ಕಲ್ಲುಗಳು ಚೆಲ್ಲಾಪಿಲ್ಲಿಯಾಗಿವೆ. ದಿನೇ ದಿನೇ ಮೋರಿಯು ಕುಸಿತಗೊಳ್ಳುವುದರಿಂದ ರಸ್ತೆಯೂ ಬಿರುಕು ಬಿಟ್ಟಿದೆ.

ಮೋರಿ ಕುಸಿತಗೊಂಡು ಹಲವು ಕಾಲ ಕಳೆದರೂ ಇಲ್ಲಿಯವರೆಗೆ ಕ್ರಮ ಕೈಗೊಂಡಿಲ್ಲ. ದಿನೇದಿನೆ ಮೋರಿ ಕುಸಿತಗೊಳ್ಳುತ್ತಿರುವುದರಿಂದ ಮುಂದಿನ ದಿನಗಳಲ್ಲಿ ರಸ್ತೆಯೂ ಸಂಪೂರ್ಣ ಕುಸಿಯುವ ಸಾಧ್ಯತೆಗಳಿವೆ.
ಸುಧಾಕರ್, ಸ್ಥಳೀಯರು

ಮೋರಿ ಕುಸಿದಿರುವ ಬಗ್ಗೆ ಪಂಚಾಯಿತಿ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುತ್ತೇವೆ.
ಶುಭಾ ಪಿ.ಶೆಟ್ಟಿ, ಮುಂಡ್ಕೂರು ಗ್ರಾಪಂ ಅಧ್ಯಕ್ಷರು

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...