More

    ಡಿ.ಕೆ.ಸುರೇಶ್, ವಿನಯ ಕುಲಕರ್ಣಿ ವಜಾಗೊಳಿಸಿ: ಕೆಎಸ್‌ಇ ಒತ್ತಾಯ

    ಶಿವಮೊಗ್ಗ: ದೇಶ ವಿಭಜಿಸುವ ಹೇಳಿಕೆ ನೀಡಿದ ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಅವರನ್ನು ತಾಕತ್ತಿದ್ದರೆ ಪಕ್ಷದಿಂದ ವಜಾಗೊಳಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.

    ಕೇಂದ್ರ ಸರ್ಕಾರ ತೆರಿಗೆ ಹಣ ನೀಡಿಲ್ಲ ಎಂದು ಸುಳ್ಳನ್ನೇ 100 ಬಾರಿ ಹೇಳಿ ಸತ್ಯವೆಂಬಂತೆ ಬಿಂಬಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.
    ರಾಜ್ಯಸಭೆಯಲ್ಲಿ ವೀರಾವೇಶದಿಂದ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ದೇಶ ವಿಭಜನೆ ಸಹಿಸುವುದಿಲ್ಲ. ಅಖಂಡ ಭಾರತ ನಮ್ಮ ಆಶಯ ಎಂದು ಹೇಳಿದ್ದಾರೆ. ಅವರದೇ ಪಕ್ಷದ ಸಂಸದ ಹಾಗೂ ಶಾಸಕ ದಕ್ಷಿಣ ಭಾರತ ಪ್ರತ್ಯೇಕ ದೇಶವಾಗಬೇಕೆಂದು ಹೇಳಿರುವುದನ್ನು ಖರ್ಗೆ ಹೇಗೆ ಸಹಿಸಿಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.
    ರಾಜ್ಯ ಕಾಂಗ್ರೆಸ್ ಸಾರ್ವಜನಿಕರ ಹಣದಲ್ಲಿ ದೆಹಲಿಯ ಜಂತರ್‌ಮಂತರ್‌ನಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಆರಂಭಿಸಿದೆ. ಕಾಂಗ್ರೆಸ್ ಶಾಸಕರ ಪ್ರಯಾಣಕ್ಕೆ ವಿಮಾನ, ವಸತಿ, ಊಟ, ತಿಂಡಿ ಎಲ್ಲದಕ್ಕೂ ತೆರಿಗೆ ಹಣ ಬಳಕೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ನಮ್ಮ ಸಂಸದರ ಬಗ್ಗೆ ಸಿದ್ದರಾಮಯ್ಯ ಕ್ಷುಲ್ಲಕವಾಗಿ ಮಾತನಾಡುತ್ತಾರೆ. ರಾಜ್ಯದ ನಮ್ಮ ಪಕ್ಷದ ಎಲ್ಲ ಸಂಸದರು ಅತ್ಯುತ್ತಮವಾಗಿ ಕೆಲಸ ಮಾಡಿದ್ದಾರೆ. ಇದಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರವೇ ನಿದರ್ಶನ. ಸಚಿವ ರಾಮಲಿಂಗಾರೆಡ್ಡಿ ಹಾಗೂ ಶಾಸಕ ಬಾಲಕೃಷ್ಣ ಕೂಡ ಕೀಳು ಮಟ್ಟದ ಹೇಳಿಕೆ ನೀಡಿರುವುದು ವಿಪರ್ಯಾಸ ಎಂದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts