More

    ತ್ಯಾಗ, ಬಲಿದಾನದ ಪ್ರತೀಕ ಸ್ವಾತಂತ್ರೃ

    ಚಿಕ್ಕೋಡಿ: ವಿಶ್ವದಲ್ಲಿಯೇ ಭಾರತ ಇಂದು 4ನೇ ಅತೀ ದೊಡ್ಡ ಸಶಸ್ತ್ರ ದೇಶವಾಗಿದ್ದು, ಸಾಮಾಜಿಕವಾಗಿ, ವೈಜ್ಞಾನಿಕವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ಧಿಯತ್ತ ದೇಶ ಮುನ್ನಡೆಯುತ್ತಿದೆ ಎಂದು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಹೇಳಿದರು.

    ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ 74ನೇ ಸ್ವಾತಂತ್ರೃ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಕೋವಿಡ್-19 ತಡೆಯಲು ಸೇನಾನಿಗಳಾಗಿ ಸೇವೆ ಸಲ್ಲಿಸಿದ ಎಲ್ಲರಿಗೂ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಭಾರತ ವಿಶ್ವದಲ್ಲಿಯೇ ಸಾಧನೆ ಮಾಡಿ ಮೊದಲ ಸ್ಥಾನ ಪಡೆಯಲಿದೆ ಎಂದರು. ದೇಶದಲ್ಲಿ ಕರೊನಾ ಸಂಕಷ್ಟಕ್ಕೆ ಸಿಲುಕಿದ ಜನರಿಗಾಗಿ ಪ್ರಧಾನಿ ಮೋದಿ ಅವರು 20 ಸಾವಿರ ಕೋಟಿ ರೂ.ಗಳ ಬೃಹತ್ ಪ್ಯಾಕೇಜ್ ಘೋಷಿಸಿದ್ದಾರೆ. ಜನರು ಸ್ವಯಂ ಪ್ರೇರಿತರಾಗಿ ಲಾಕ್‌ಡೌನ್ ಹಾಕಿಕೊಂಡು ತಾವೇ ದೈಹಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು.

    ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ನಿರಂತರ ಪ್ರಯತ್ನ ಮಾಡಿದರೆ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂಬುದನ್ನು ಎಸ್‌ಎಸ್‌ಎಲ್‌ಸಿ ಹಾಗೂ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿ ಮುಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ ಎಂದರು. ತಾಪಂ ಅಧ್ಯಕ್ಷೆ ಊರ್ಮಿಳಾ ಪಾಟೀಲ, ಮಹಾದೇವಿ ನಾಯಕ್, ಬಾಳಾಸಾಹೇಬ ವಡ್ಡರ, ಮನೋಜ ನಾಯಿಕ, ಡಾ. ಸುಂದರ ರೋಗಿ, ಡಿಡಿಪಿಐ ಗಜಾನನ ಮನ್ನೀಕೇರಿ, ಡಾ. ವಿಠ್ಠಲ ಶಿಂಧೆ, ತಾಪಂ ಇಒ ಸಮೀರಾ ಮುಲ್ಲಾ, ಸಿಡಿಪಿಒ ದೀಪಾ ಕಾಳೆ ಇತರರು ಇದ್ದರು. ಯುಪಿಎಸ್‌ಸಿ ಪರೀಕ್ಷೆ ಪಾಸಾಗಿರುವ ಪ್ರಿಯಾಂಕಾ ಕಾಂಬಳೆ ಅವರನ್ನು ತಾಲೂಕಾಡಳಿತದಿಂದ ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳು, ಕರೊನಾ ಸೇನಾನಿಗಳಾಗಿ ಕಾರ್ಯನಿರ್ವಹಿಸಿದ ವಿವಿಧ ಇಲಾಖೆ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts