25.9 C
Bengaluru
Wednesday, January 22, 2020

ಟಿಕೆಟ್ಟೇ ಸಿಗಲ್ಲ ಎಂದವರೀಗ ಬೆಂಗಳೂರು ಸಾಮ್ರಾಟ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

| ರಮೇಶ ದೊಡ್ಡಪುರ, 

ಬೆಂಗಳೂರು: ‘ಬೆಂಗಳೂರು ಉತ್ತರದಲ್ಲಿ ಸೋಲುವ ಭಯದಿಂದ ಉಡುಪಿ-ಚಿಕ್ಕಮಗಳೂರು ಟಿಕೆಟ್ ಕೇಳಿದ್ದಾರೆ, ಈ ಬಾರಿ ಸೋಲುವುದು ಗ್ಯಾರಂಟಿ..’ ಎಂಬ ಅನೇಕ ಊಹಾಪೋಹಗಳ ನಡುವೆಯೇ ಡಿ.ವಿ. ಸದಾನಂದಗೌಡರು ಎರಡನೇ ಬಾರಿಗೆ ಕೇಂದ್ರ ಸಚಿವರಾಗಿದ್ದು, ಬೆಂಗಳೂರಿನಲ್ಲಿ ಬಿಜೆಪಿ ನಿಯಂತ್ರಣವನ್ನು ಯಾರು ಪಡೆಯಬೇಕು ಎಂಬ ಲೆಕ್ಕಾಚಾರ ಮತ್ತೆ ಗರಿಗೆದರಿದೆ.

ಲೋಕಸಭಾ ಚುನಾವಣೆಗೂ ಮುನ್ನ ಸದಾನಂದಗೌಡರು ಬೆಂಗಳೂರಿನಲ್ಲಿ ಮೊದಲ ಬಾರಿಗೆ ಸಂಸದರಾಗಿದ್ದರು. ಮೋದಿ ಸರ್ಕಾರ ರಚನೆಯಾದಾಗ ಅತ್ಯಂತ ಮಹತ್ವದ ರೈಲ್ವೆ ಸಚಿವರೂ ಆದರು. ಆದರೆ ಬದಲಾದ ಕಾಲಘಟ್ಟದಲ್ಲಿ ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಖಾತೆ ನೀಡಲಾಯಿತು. ಅನಂತಕುಮಾರ್ ನಿಧನದ ನಂತರವಷ್ಟೇ ಪ್ರಮುಖವಾದ ರಸಗೊಬ್ಬರ ಖಾತೆ ಹೊಣೆ ನೀಡಲಾಗಿತ್ತು.

ಈ ನಡುವೆ ಉತ್ತರ ಲೋಕಸಭೆ ಕ್ಷೇತ್ರದಲ್ಲಿ ದಾಸರಹಳ್ಳಿ, ಹೆಬ್ಬಾಳ ಮತ್ತು ಮಲ್ಲೇಶ್ವರ ವಿಧಾನಸಭೆ ಕ್ಷೇತ್ರಗಳಲ್ಲಿದ್ದ ಬಿಜೆಪಿ ಶಾಸಕರ ಸಂಖ್ಯೆ 2018ರಲ್ಲಿ ಮಲ್ಲೇಶ್ವರಕ್ಕೆ ಸೀಮಿತವಾದಾಗ ಸದಾನಂದಗೌಡರ ಸಾಮರ್ಥ್ಯದ ಬಗ್ಗೆ ಪಕ್ಷದಲ್ಲಿ ಸಾಕಷ್ಟು ಚರ್ಚೆಗಳು ನಡೆದವು. ಜನಪ್ರಿಯತೆ ಕಳೆದುಕೊಂಡಿರುವ ಕಾರಣಕ್ಕೆ, ಪತ್ನಿಯ ತವರು ಮೈಸೂರು-ಕೊಡಗು ಅಥವಾ ತನ್ನ ತವರು ಕ್ಷೇತ್ರ ದಕ್ಷಿಣ ಕನ್ನಡದಲ್ಲಿ ಟಿಕೆಟ್ ಕೇಳುತ್ತಿದ್ದಾರೆ ಎಂದು ಪಕ್ಷದ ವಲಯದಲ್ಲಿ ಸಾಕಷ್ಟು ಸುದ್ದಿ ಹರಿದಾಡಿತ್ತು.

ಬೆಂಗಳೂರು ಬಿಜೆಪಿ ನೇತೃತ್ವವನ್ನು ಯಾರು ಹೊರಬೇಕು ಎಂಬ ಒಳ ರಾಜಕೀಯ ಇದರ ಹಿಂದೆ ಇತ್ತು ಎಂಬುದು ಪಕ್ಷದ ಮೂಲಗಳ ಮಾಹಿತಿ. ಸದಾನಂದಗೌಡರು ಮುಂದುವರಿದರೆ ತಮ್ಮ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂಬ ಕಾರಣಕ್ಕೆ ಅವರನ್ನು ಬೇರೆಡೆ ಸ್ಥಳಾಂತರಿಸಲು ಕೆಲವರು ಸುಳ್ಳು ಸುದ್ದಿ ಹರಿಯಬಿಟ್ಟಿದ್ದರು. ಅಂತಿಮವಾಗಿ ಅವರು ಟಿಕೆಟ್ ಗಿಟ್ಟಿಸುವ ಜತೆಗೆ ಗೆದ್ದಿದ್ದಾರೆ ಹಾಗೂ ಬೆಂಗಳೂರಿನ ಮೂವರು ಸಂಸದರ ಪೈಕಿ ಏಕೈಕ ಕೇಂದ್ರ ಸಚಿವರೂ ಆಗಿದ್ದಾರೆ. ಕೆಲವರಿಂದ ನಿರ್ಲಕ್ಷಿಸಲ್ಪಟ್ಟಿದ್ದ ನಾಯಕರು ಈಗಾಗಲೇ ಸದಾನಂದಗೌಡರಿಗೆ ಸಮೀಪವಾಗುವತ್ತ ಚಿಂತನೆ ನಡೆಸಿದ್ದಾರೆ. ಈ ಮೂಲಕ ಬೆಂಗಳೂರು ಬಿಜೆಪಿಯಲ್ಲಿ ಬಣ ರಾಜಕೀಯ ಇನ್ನೊಂದು ಹಂತದ ಚರ್ಚೆಗೆ ತೆರೆದುಕೊಳ್ಳಬಹುದು ಎಂದು ನಾಯಕರೊಬ್ಬರ ಅಭಿಪ್ರಾಯ.

ಬಡವಾದ ದಕ್ಷಿಣ ಕನ್ನಡ: ಗೋಡ್ಸೆ ಕುರಿತ ಹೇಳಿಕೆಗೆ ಅವಿಭಜಿತ ದಕ್ಷಿಣ ಕನ್ನಡದಲ್ಲಿ ಇಬ್ಬರಿಗೆ ಅವಕಾಶ ಕ್ಷೀಣವಾಗಿದ್ದರಿಂದ, ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ ನೀಡಿ ಎಂಬ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮಾತಿಗೂ ಮನ್ನಣೆ ಸಿಕ್ಕಿಲ್ಲ. ಒಟ್ಟಾರೆಯಾಗಿ, ಬಿಜೆಪಿ ಭದ್ರಕೋಟೆ, ಸಂಘ ಪರಿವಾರದ ಪ್ರಯೋಗಶಾಲೆ ಎನ್ನಲಾಗುವ ದಕ್ಷಿಣ ಕನ್ನಡಕ್ಕೆ ವಿವಿಧ ಕಾರಣಗಳಿಂದಾಗಿ ಸಚಿವ ಸ್ಥಾನ ಕೈತಪ್ಪಿದೆ.

ಗೋಡ್ಸೆ ಹೇಳಿಕೆಗೆ ಎರಡು ವಿಕೆಟ್

ಭಾಷಣಕ್ಕೆ ನಿಂತರೆ ಯಾರನ್ನಾದರೂ ಪ್ರಭಾವಿಸುವ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಸಚಿವ ಸ್ಥಾನಕ್ಕೆ ಅವರ ಮಾತೇ ಮುಳುವಾಗಿದೆ ಎಂಬುದು ಬಿಜೆಪಿಯಲ್ಲಿನ ಸುದ್ದಿ. ಹೆಗಡೆಯಷ್ಟೇ ವಿವಾದಕ್ಕೊಳಗಾದರೂ ಬೆಗುಸರೈ ಸಂಸದ ಗಿರಿರಾಜ್ ಸಿಂಗ್​ಗೆ ಸಚಿವ ಸ್ಥಾನ ಸಿಕ್ಕಿರುವುದು ಕೆಲವರಲ್ಲಿ ಅಚ್ಚರಿ ಮೂಡಿಸಿದೆ. ಆದರೆ ಬಿಜೆಪಿಯಲ್ಲಿ ಸಾಮಾನ್ಯವಾಗಿ ವಿವಾದಕ್ಕೊಳಗಾಗುವ ಮುಸ್ಲಿಂ ಕುರಿತ ಟೀಕೆಗಳಿಗಿಂತಲೂ ಸಂವಿಧಾನ ಮತ್ತು ಗೋಡ್ಸೆ ಕುರಿತು ಹೆಗಡೆ ಮಾತುಗಳು ನಕಾರಾತ್ಮಕ ಪ್ರಭಾವ ಬೀರಿವೆ ಎನ್ನಲಾಗಿದೆ. ಸಂವಿಧಾನ ಕುರಿತ ಹೇಳಿಕೆಯಂತೂ ಇಂದಿಗೂ ಬಿಜೆಪಿಯನ್ನು ಕಾಡುತ್ತಿದೆ. ಇನ್ನು ಗೋಡ್ಸೆ ಕುರಿತ ಮೃದು ಧೋರಣೆ ಬಗ್ಗೆ ಎನ್​ಡಿಎ ಪ್ರಮುಖ ಪಾಲುದಾರ ನಿತೀಶ್ ಕುಮಾರ್ ಒಮ್ಮೆ, ಸ್ವತಃ ಪ್ರಧಾನಿ ಮೋದಿ 2 ಬಾರಿ ಅಸಮಾಧಾನ ವ್ಯಕ್ತಪಡಿಸಿದ್ದರು. ಮೂರನೇ ಬಾರಿ ಸಂಸದರಾಗಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಸಹ ಸಚಿವ ಸ್ಥಾನದ ಹೊಸ್ತಿಲಲ್ಲಿ ಗೋಡ್ಸೆ ಕುರಿತ ಟ್ವೀಟ್​ಗೆ ಬಲಿಯಾಗಿದ್ದಾರೆ. ಇಲ್ಲದಿದ್ದರೆ ಮೊದಲ ಸಂಪುಟದಲ್ಲಿ ಸ್ಥಾನ ಸಿಗುವ ಎಲ್ಲ ಲಕ್ಷಣಗಳಿದ್ದವು. ಪ್ರಧಾನಿ ಮೋದಿಯವರಿಗೆ ವೈಯಕ್ತಿಕವಾಗಿ ಅಚ್ಚುಮೆಚ್ಚಿನ ಕ್ಷೇತ್ರವಾದ್ದರಿಂದ ಭವಿಷ್ಯದಲ್ಲಿ ಈ ವಿಚಾರ ತಣ್ಣಗಾದರೆ ಮತ್ತೆ ಸಚಿವರಾಗುವ ಅವಕಾಶ ಇದೆ ಎನ್ನಲಾಗುತ್ತಿದೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...