

ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡುವ ಸಾಧನಾ ಪ್ರಶಸ್ತಿಗೆ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಭಾಜನವಾಗಿದ್ದು, ಸಂಘ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಜಿ. ಸ್ವೀಕರಿಸಿದರು.
ಇತ್ತೀಚೆಗೆ ನಡೆದ 2023-2024 ನೇ ಸಾಲಿನ ಮಹಾಸಭೆಯಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿ ಹಸ್ತಾಂತರಿಸಿದರು.
ನಿರ್ದೇಶಕರಾದ ಭಾಸ್ಕರ ಎಸ್.ಕೋಟ್ಯಾನ್, ಶಶಿಕುಮಾರ್ ರೈ ಬಿ., ಎಸ್.ಬಿ.ಜಯರಾಮ್ ರೈ, ದೇವಿಪ್ರಸಾದ್ ಶೆಟ್ಟಿ ಸದಾಶಿವ ಉಳ್ಳಾಲ, ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್.ರಮೇಶ್, ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಬೀಡಿನಪಾಲು, ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ ಅಶೋಕ್ ಕುಮಾರ್ ಕೋಮಾಲಿ, ಜಯಶಂಕರ್ ಕಾನ್ಸಾಲೆ ಹಾಗೂ ಮೂರ್ತೆದಾರರ ಮಹಾಮಂಡಲದ ಸಿಇಒ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.