

ನವದೆಹಲಿ: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ನೀಡಿದ ಸನಾತನ ಧರ್ಮ ವಿರುದ್ಧದ ಹೇಳಿಕೆಗೆ ಇದೀಗ ದೇಶವ್ಯಾಪಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸದ್ಯ ಈ ಹೇಳಿಕೆಗೆ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ಸನಾತನ ಧರ್ಮ ವಿವಾದದ ಬಗ್ಗೆ ಮಾತನಾಡಿದ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ, “ನಾವು ಯಾವುದೇ ಧರ್ಮವನ್ನು ಟೀಕಿಸುವುದಿಲ್ಲ. ಆದ್ರೆ, ನಮ್ಮ ‘ಧರ್ಮ’ವನ್ನು ಯಾರಾದರೂ ಪ್ರಶ್ನಿಸಿದರೆ, ನಾವು ಅವರಿಗೆ ತಕ್ಕ ಉತ್ತರವನ್ನು ನೀಡುತ್ತೇವೆ. 2024 ರಲ್ಲಿ ಅವರು ಉತ್ತರವನ್ನು ಪಡೆಯುತ್ತಾರೆ” ಎಂದು ಹೇಳಿದರು.
ಸನಾತನ ಧರ್ಮ ವಿವಾದಕ್ಕೆ ಕಾರಣವೇನು?: ಡಿಎಂಕೆ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಕೊರೊನಾ, ಮಲೇರಿಯಾ, ಡೆಂಗ್ಯೂ ವೈರಸ್ಗಳನ್ನು ನಿರ್ಮೂಲನೆ ಮಾಡಿದಂತೆ ಇದನ್ನು ಕೂಡ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಇದೀಗ ದೇಶದೆಲ್ಲೆಡೆ ಭಾರೀ ಆಕ್ರೋಶಕ್ಕೆ ಗುರಿಯಾಗಿದೆ,(ಏಜೆನ್ಸೀಸ್).