More

    ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಏಮ್ಸ್​ ಆಸ್ಪತ್ರೆಗೆ ದಾಖಲು!

    ನವದೆಹಲಿ: ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಅವರು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ರೆಟಿನಾ ಹಿಂಭಾಗದಲ್ಲಿ ಸೋಂಕು ಉಂಟಾಗಿದ್ದು, ಅದೇ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಹೇಳಲಾಗಿದೆ.

    ಇದನ್ನೂ ಓದಿ: ಚಳಿಗಾಲದ ಈ ಚಳಿಯಲ್ಲಿ ಐಸ್​ನಲ್ಲಿ ಗಂಟೆಗಟ್ಟಲೆ ಕುಳಿತ ಭೂಪ! ಕಾರಣ ಕೇಳಿದರೆ ಶಹಬ್ಬಾಸ್​ ಎನ್ನುತ್ತೀರಿ!

    ಪ್ರಜ್ಞಾ ಸಿಂಗ್ ಅವರು ಕೆಲ ತಿಂಗಳುಗಳಿಂದ ಏಮ್ಸ್​ ಆಸ್ಪತ್ರೆಯಲ್ಲಿ ರೆಟಿನಾ ಸಂಬಂಧಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ದಿನಗಳ ಹಿಂದೆ ಅದಕ್ಕೆಂದೇ ಏಮ್ಸ್​ಗೆ ತೆರಳಿದ್ದರು. ಆದರೆ ಆ ಸಮಯದಲ್ಲಿ ತಪಾಸಣೆ ನಡೆಸಿರುವ ವೈದ್ಯರು, ಪ್ರಜ್ಞಾ ಅವರಿಗೆ ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದಾರೆ.

    ಇದನ್ನೂ ಓದಿ: ರೈತರ ಹೋರಾಟಕ್ಕೆ ವಿದೇಶಗಳಿಂದ ಬರುತ್ತಿದೆ ಹಣ! ಫೋರೆಕ್ಸ್​ ಇಲಾಖೆಯಿಂದ ಬಂತು ನೋಟಿಸ್​!

    ಪ್ರಜ್ಞಾ ಅವರ ಕರೊನಾ ಪರೀಕ್ಷೆ ಮಾಡಲಾಗಿದೆ. ವರದಿ ನೆಗೆಟಿವ್​ ಬಂದಿದೆ. ಆದರೆ ಅವರು ಸಂಪೂರ್ಣವಾಗಿ ಗುಣವಾಗುವವರೆಗೂ ಆಸ್ಪ್ರೆಯಲ್ಲೇ ಇರಬೇಕಿದೆ ಎಂದು ವೈದ್ಯರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿರುವ ಕಾರಣದಿಂದಲೇ ಎನ್​ಐಎ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಸಂಸದೆ ತಿಳಿಸಿದ್ದಾರೆ. (ಏಜೆನ್ಸೀಸ್​)

    ವಿಡಿಯೋ ಕಾಲ್ ಮೂಲಕವೇ ಯುವಕನ ಬಟ್ಟೆ ಬಿಚ್ಚಿಸಿದ ಚಾಲಾಕಿ ಹುಡುಗಿಯರು!

    ಹಸೆಮಣೆ ಏರಬೇಕಾದವಳು ಆಸ್ಪತ್ರೆ ಸೇರಿದಳು! ಆಸ್ಪತ್ರೆಯ ಹಾಸಿಗೆಯಲ್ಲೇ ನಡೆಯಿತು ಮದುವೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts