More

    ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸದಿದ್ದರೆ ಕಾನೂನು ಕ್ರಮ

    ಧಾರವಾಡ: ಸಫಾಯಿ ಕರ್ಮಚಾರಿಗಳಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ರಾಷ್ಟ್ರೀಯ ಮತ್ತು ರಾಜ್ಯ ಸರ್ಕಾರಗಳಿಂದ ಕಾನೂನಾತ್ಮಕವಾಗಿ ಸಿಗಬೇಕಾದ ಎಲ್ಲ ಸೌಕರ್ಯ, ಸೌಲಭ್ಯಗಳನ್ನು ಪೂರೈಸುವುದು ಸ್ಥಳೀಯ ಸಂಸ್ಥೆ, ಇಲಾಖೆಗಳ ಮುಖ್ಯಸ್ಥರ ಕರ್ತವ್ಯವಾಗಿದೆ. ಅನಗತ್ಯ ವಿಳಂಬ ಮಾಡಿದರೆ ಅಂತಹ ಅಧಿಕಾರಿಗಳ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಾರಸು ಮಾಡಲಾಗುವುದು ಎಂದು ರಾಷ್ಟ್ರೀಯ ಸಫಾಯಿ ಕಾರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ವೆಂಕಟೇಶನ್ ಹೇಳಿದರು.
    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿಗಳ ಸೌಲಭ್ಯ ಮತ್ತು ಸಮಸ್ಯೆಗಳ ಕುರಿತು ಗುರುವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
    ಪೌರ ಕಾರ್ಮಿಕರಿಗೆ ಕನಿಷ್ಠ ವೇತನ ನೀಡಬೇಕು. ಗುಣಮಟ್ಟದ ಊಟ- ಉಪಹಾರ ನೀಡಬೇಕು. ಪುರುಷ ಮತ್ತು ಮಹಿಳಾ ಪೌರ ಕಾರ್ಮಿಕರಿಗೆ ಪ್ರತ್ಯೇಕ ಶೌಚಗೃಹ, ವಿಶ್ರಾಂತಿ ಕೊಠಡಿ ಕಲ್ಪಿಸಬೇಕು. ಸಂರಕ್ಷಣ ಕವಚ, ಸಮವಸ, ಗಮ್‌ಬೂಟ್ ವಿತರಿಸಬೇಕು. ಮಹಿಳಾ ಪೌರ ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಿ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ, ಅನಗತ್ಯ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
    ಪ್ರಭಾರ ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಪೌರ ಕಾರ್ಮಿಕರಿಗೆ ಕನಿಷ್ಠ ವೇತನ, ಭತ್ಯೆ ನೀಡುವಲ್ಲಿ ತಾರತಮ್ಯವಾದರೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಪರಿಶೀಲಿಸಿ ಸ್ವಯಂ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಬೇಕು ಎಂದರು.
    ಡಿಸಿ ಅನುವಾದ: ಆಯೋಗದ ಅಧ್ಯಕ್ಷ ಎಂ. ವೆಂಕಟೇಶನ್ ತಮಿಳುನಾಡು ಮೂಲದವರು. ಅವರ ಇಂಗ್ಲಿಷ್ ಮತ್ತು ತಮಿಳು ಭಾಷೆಯ ವಿಷಯಗಳನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಕನ್ನಡಕ್ಕೆ ಅನುವಾದಿಸಿ ಸಭೆಗೆ ತಿಳಿಸಿದರು. ಅವರು ನೀಡಿದ ಸೂಚನೆ, ಕೇಳಿದ ಪ್ರಶ್ನೆಗಳನ್ನು ಅನುವಾದಿಸಿದ ಜಿಲ್ಲಾಧಿಕಾರಿ, ಅಧಿಕಾರಿಗಳು ಮತ್ತು ಪೌರ ಕಾರ್ಮಿಕರಿಗೆ ಕನ್ನಡದಲ್ಲಿ ತಿಳಿಸಿ ಅವರ ಉತ್ತರಗಳನ್ನು ತಮಿಳಿಗೆ ಭಾಷಾಂತರಿಸಿ ಅಧ್ಯಕ್ಷರಿಗೆ ತಿಳಿಸಿದರು.
    ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಉಪ ಪೊಲೀಸ್ ಆಯುಕ್ತ ಕುಶಲ್ ಚೌಕ್ಸೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ. ಶುಭಾ ವೇದಿಕೆಯಲ್ಲಿದ್ದರು. ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಅಧಿಕಾರಿಗಳು, ಸಾಯಿ ಕರ್ಮಚಾರಿ ಜಿಲ್ಲಾ ಸದಸ್ಯರು ಉಪಸ್ಥಿತರಿದ್ದರು.

    See also  ಒಗ್ಗೂಡಿದರೆ ಸೌಲಭ್ಯ ಲಭ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts