
ಉಪ್ಪಿನಂಗಡಿ: ಸಹಕಾರ ಭಾರತಿಯ ಜಿಲ್ಲಾ ಸ್ತರದ ಬೈಠಕ್ ಹಿನ್ನೆಲೆಯಲ್ಲಿ ಆಗಮಿಸಿದ ರಾಜ್ಯ ಹಾಗೂ ಜಿಲ್ಲಾ ಸ್ತರದ ಪದಾಧಿಕಾರಿಗಳು ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಭೇಟಿ ನೀಡಿ ಸಂಘದ ವ್ಯವಹಾರದ ಬಗ್ಗೆ ವಿಚಾರ ವಿಮರ್ಶೆ ನಡೆಸಿದರು.
ಸಂಘದ ಅಧ್ಯಕ್ಷ ಸುನೀಲ್ ಕುಮಾರ್ ದಡ್ಡು ಸಹಕಾರ ಭಾರತಿಯ ಪದಾಧಿಕಾರಿಗಳನ್ನು ಗೌರವಿಸಿದರು. ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ರಾಜ್ಯ ಸಹಕಾರ್ಯದರ್ಶಿ ಗಣೇಶ್ ಶೆಣೈ, ಜಿಲ್ಲಾ ಅಧ್ಯಕ್ಷ ಸುಧಾಕರ ರೈ, ಜಿಲ್ಲಾ ಉಪಾಧ್ಯಕ್ಷ ಕೆ.ವಿ.ಪ್ರಸಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್, ಮಂಗಳೂರು ಮಹಾನಗರ ಅಧ್ಯಕ್ಷ ಜಿ.ಆರ್.ಪ್ರಸಾದ್, ಜಿಲ್ಲಾ ಮಹಿಳಾ ಪ್ರಮುಖ್ ಸುಭದ್ರಾ ರಾವ್, ಬೆಳ್ತಂಗಡಿ ತಾಲೂಕು ಅಧ್ಯಕ್ಷ ವೆಂಕಪ್ಪಯ್ಯ, ಮೂಡುಬಿದಿರೆ ತಾಲೂಕು ಅಧ್ಯಕ್ಷ ದಯಾನಂದ ಪೈ, ಕಡಬ ತಾಲೂಕು ಪ್ರಧಾನ ಕಾರ್ಯದರ್ಶಿ ಭರತ್ ನೆಕ್ಕರಾಜೆ, ಬೆಳ್ತಂಗಡಿ ತಾಲೂಕು ಮಹಿಳಾ ಪ್ರಮುಖ್ ಭಾರತಿ, ಪ್ರಮುಖರಾದ ಪ್ರಶಾಂತ್ ಗಟ್ಟಿ, ಪದ್ಮನಾಭ ಅರ್ಕಜೆ, ರಾವೇಂದ್ರ ಭಂಡಾರ್ಕರ್ ಉಪಸ್ಥಿತರಿದ್ದರು.
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಅರ್ಜಿ ಆಹ್ವಾನ