More

    ನ.15ರಂದು ಮಂಗಳೂರಿನಲ್ಲಿ ಸಹಕಾರಿ ಸಪ್ತಾಹ

    ಮಂಗಳೂರು: ರಾಜ್ಯಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ನ.15ರಂದು ಟಿ.ವಿ ರಮಣ ಪೈ ಕನ್ವೆನ್ಶನ್ ಹಾಲ್‌ನಲ್ಲಿ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

    67ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಗುರುವಾರ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಭವನದಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
    ಈ ಬಾರಿ ಸಹಕಾರ ಸಪ್ತಾಹವನ್ನು ಕರೊನೋತ್ತರ ಸಹಕಾರ ಸಂಸ್ಥೆಗಳ ಜವಾಬ್ದಾರಿ ಮತ್ತು ಪಾತ್ರ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ದೈಹಿಕ ಅಂತರದೊಂದಿಗೆ ಅರ್ಥಪೂರ್ಣವಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.

    ಸಹಕಾರ ಸಂಘಗಳ ಅಪರ ನಿಬಂಧಕ ದೇವರಾಜ್ ಸಿ.ಎನ್, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ವೆಂಕಟಸ್ವಾಮಿ, ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕ ಪ್ರಕಾಶ್ ರಾವ್ ಸಲಹೆ ನೀಡಿದರು.

    ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಬಿ.ಪ್ರಸಾದ್ ಕೌಶಲ್ ಶೆಟ್ಟಿ, ಬಿ.ಜಯಕರ್ ಶೆಟ್ಟಿ ಇಂದ್ರಾಳಿ, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ.ರಾಜಾರಾಮ್ ಭಟ್, ವಾದಿರಾಜ್ ಎಂ. ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ್ ರೈ, ರಾಜು ಪೂಜಾರಿ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಜೈರಾಜ್ ಬಿ. ರೈ, ಹರಿಶ್ಚಂದ್ರ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ದಕ್ಷಿಣ ಕನ್ನಡ ಸಹಕಾರಿ ಯೂನಿಯನ್‌ನ ಮಾಜಿ ಅಧ್ಯಕ್ಷ ಹರೀಶ್ ಆಚಾರ್, ಹಾಲು ಒಕ್ಕೂಟದ ವ್ಯವಸ್ಥಾಪನಾ ನಿರ್ದೇಶಕ ಸುರೇಶ್ ಕುಮಾರ್, ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒ ರವೀಂದ್ರ ಬಿ, ಸಹಕಾರಿ ಯೂನಿಯನ್ ಸಿಇಒ ಪುರುಷೋತ್ತಮ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts