More

    ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಶಾಲಾ- ಕಾಲೇಜುಗಳಿಗೆ ಮೂರು ದಿನ ರಜೆ

    ಹಾವೇರಿ: ನಗರದಲ್ಲಿ ಜ.6ರಿಂದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜ.6, 7ರಂದು ಜಿಲ್ಲೆಯ ಎಲ್ಲ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಘುನಂದ ಆದೇಶ ಹೊರಡಿಸಿದ್ದಾರೆ. ಜ.8ರಂದು ಭಾನುವಾರದ ಸಾವ್ರತ್ರಿಕ ರಜೆ ಇದೆ.
    ವಸತಿ ವ್ಯವಸ್ಥೆ ಮಾಡಿರುವ 67 ಶಾಲಾ- ಕಾಲೇಜು ಹಾಗೂ ವಸತಿ ನಿಲಯಗಳಿಗೆ ಹೆಚ್ಚುವರಿಯಾಗಿ ಜ.4ರಿಂದ 8ರವರೆಗೆ ರಜೆ ಘೋಷಿಸಲಾಗಿದೆ. ವಸತಿ ವ್ಯವಸ್ಥೆ ಮಾಡಿರುವ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಎಸ್.ಎಂ.ಎಸ್. ಪದವಿ ಪೂರ್ವ ಕಾಲೇಜು, ಎಸ್.ಜೆ.ಎಂ.ಪದವಿ ಪೂರ್ವ ಕಾಲೇಜುಗಳಿಗೆ ಜ.4ರಿಂದ 8ರವರೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ರಜೆ ಘೋಷಿಸಿದೆ.
    ಉಪನ್ಯಾಸಕರಿಗೆ ಒಒಡಿ ಸೌಲಭ್ಯ
    ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಕೂಡ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಹಾವೇರಿ ಜಿಲ್ಲೆಯ ಎಲ್ಲ ಪದವಿ ಪೂರ್ವ ಕಾಲೇಜುಗಳಿಗೆ ಜ.6, 7ರಂದು ರಜೆ ಘೋಷಿಸಲಾಗಿದೆ. ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಹಾಗೂ ಇತರ ಸಿಬ್ಬಂದಿ ಸಮ್ಮೇಳನದಲ್ಲಿ ಭಾಗವಹಿಸುವುದನ್ನು ಅನ್ಯಕಾರ್ಯದ ನಿಮಿತ್ಯ(ಒಒಡಿ) ಎಂದು ಪರಿಗಣಿಸಲಾಗುವುದು ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts