ಹುಬ್ಬಳ್ಳಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ 84 ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.
ಧಾರವಾಡದ ಜುಬಿಲಿ ವೃತ್ತದಿಂದ ಸಮ್ಮೇಳನ ನಡೆಯುವ ಕೃಷಿ ವಿವಿ ಆವರಣದವರೆಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು, ವಾಯುವ್ಯ ಸಾರಿಗೆ ಸಂಸ್ಥೆ, ಬೇಂದ್ರೆ ನಗರ ಸಾರಿಗೆ, ಟಾಟಾ ಮಾರ್ಕೊಪೋಲೊ, ಶಾಲಾ ವಾಹನಗಳಿಂದ ಉಚಿತ ಸಾರಿಗೆ ವ್ಯವಸ್ಥೆ ನೀಡಲಾಗುತ್ತಿದೆ.
ವಿವಿಧೆಡೆಯಿಂದ ಧಾರವಾಡಕ್ಕೆ ಬರುತ್ತಿರುವ ಸಾಹಿತ್ಯಾಸಕ್ತರಿಗೆ ಇದರಿಂದ ಅನುಕೂಲವಾಗುತ್ತಿದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.