ತುರುವನೂರು ಅವರ ಮೊಳಕೆ ಕೃತಿ ಬಿಡಗಡೆ; ಸಾಹಿತ್ಯ ವಲಯದಲ್ಲಿ ಕಡಿಮೆಯಾಗುತ್ತಿರುವ ಸಂವಾದ ಸಂಸ್ಕೃತಿ : ಪ್ರೊ.ಬರಗೂರು ವಿಷಾದ

blank
blank

 

ಬೆಂಗಳೂರು:
ಸಾಹಿತ್ಯ ವಲಯದಲ್ಲಿ ಸಂವಾದ ಸಂಸ್ಕೃತಿ ಕಡಿಮೆಯಾಗುತ್ತಿದೆ ಎಂದು ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಪತ್ರಕರ್ತ ತುರುವನೂರು ಮಂಜುನಾಥ ಅವರ ಮೊಳಕೆ ಕೃತಿಯನ್ನು ಬಿಡಗಡೆಗೊಳಿಸಿ ಮಾತನಾಡಿ, ಸಾಹಿತ್ಯಕ್ಷೇತ್ರದಲ್ಲಿ ಕೃಷಿಮಾಡುವವರಿಗೆ ಉದ್ದಟತನ ಮತ್ತು ಸಿನಿಕತನ ಇರಬಾರದು ಇದರಿಂದ ಸೃಜಶೀಲ ಸಾಹಿತ್ಯ ಹಾದಿತಪ್ಪುತ್ತದೆ ಎಂದರು.
ಸಾಹಿತ್ಯ ಕ್ಷೇತ್ರದಲ್ಲಿ ವಿನಮ್ರತೆಯಿಂದ ವಿಷಯ ಮತ್ತು ವಿಮರ್ಶೆಗಳ ಮಂಡನೆಯಿಂದ ಬರಹಗಾರರು ಮೌಲಿಕ ಗುಣಗಳು ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.
ಹಿಂದಿನ ಸಾಹಿತಿಗಳ ನಡುವೆ ಸಾಹಿತ್ಯ ಸಂವಾದಗಳು ನಡೆಯುತ್ತಿದ್ದ ಕಾರಣ ಗುಣಮಟ್ಟದ ಸಾಹಿತ್ಯ ರಚನೆಯಾಗುತ್ತಿದ್ದವು ಆದರೆ ಇತ್ತೀಚಿನ ದಿನಗಳ ಅಂತವಾತಾವರಣ ಕಡಿಮೆಯಾಗುತ್ತಿದೆ ಎಂದರು.
ಮೊಳಕೆ ಕೃತಿ ಯಾವುದೆ ವೈಚಾರಿಕ ಪಂಥಕ್ಕೆ ಸೇರದೆ ಉತ್ತಮವಾದದನ್ನು ಆಯ್ಕೆಮಾಡಿಕೊಳ್ಳಬೇಕು ಎನ್ನುವ ದೃಷ್ಟಿಯಲ್ಲಿ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ ಆ ನಿಟ್ಟಿನಲ್ಲಿ ಜನಪರತೆಯ ಹಾದಿಯಲ್ಲಿ ಈ ಕೃತಿ ಗೆಲ್ಲುತ್ತದೆ ಎಂದು ವಿಶ್ಲೇಷಿಸಿದರು.
ಹಿರಿಯ ಪತ್ರಕರ್ತ ಹುಣಸವಾಡಿ ರಾಜನ್ ಮಾತನಾಡಿ, ಪತ್ರಕೋದ್ಯಮದಲ್ಲಿ ಇಂದು ಸತ್ಯ ಅಸತ್ಯವಾಗಿಹೋಗಿದೆ. ಸತ್ಯದ ಹೆಸರಿನಲ್ಲಿ ಸುಳ್ಳುಗಳನ್ನು ರಾರಾಜಿಸುತ್ತಿವೆ. ಈ ನಿಟ್ಟಿನಲ್ಲಿ ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.
ಹಿರಿಯ ಪ್ರತಕರ್ತ ಅನಂತ ಚಿನಿವಾರ ಮಾತನಾಡಿ, ಇಂದು ಪತ್ರಕರ್ತನಾದವನಿಗೆ ಅಹಂ ಮತ್ತು ಸಿನಿಕತನ ಇರಬಾರದು ಅದರಿಂದ ಸುದ್ದಿಗಳ ಮೇಲೆ ಪರಿಣಾಮ ಬೀರುತ್ತವೆ ಹೀಗಾಗಿಯೇ ಇಂದು ಸುದ್ದಿಗಳ ಗುಣಮಟ್ಟ ಕಡಿಮೆಯಗುತ್ತಿದೆ ಎಂದು ವಿಷಾದಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಸೋಶಿಯಲ್ ಮೀಡಿಯಾ ಪ್ರಭಾವದಿಂದ ಪತ್ರಕರ್ತರ ಸಂಖ್ಯೆ ಹೆಚ್ಚಾಗಿದ್ದು, ನೈಜ ಪತ್ರಕರ್ತರು ಸವಾಲುಗಳು ವಿರುದ್ದ ಈಜಬೇಕಾದ ಸ್ಥಿತಿ ಬಂದಿದೆ ಎಂದರು.
ನಿವೃತ್ತ ಐಎಎಸ್ ಅಧಿಕಾರಿ ಜಿ.ಎನ್.ಶಿವಮೂರ್ತಿ, ಮೊಳಕೆ ಕೃತಿಯ ಕತೃ ತುರುವನೂರು ಮಂಜುನಾಥ್, ಹಿರಿಯ ಪತ್ರಕರ್ತ ಹನುಮೇಶ್ ಯಾವಗಲ್ ಇದ್ದರು.

 

Share This Article

ನೀರು, ಸೋಪು ಇಲ್ಲದೆ ಕೊಳಕಾದ ಸ್ವಿಚ್‌ಬೋರ್ಡ್‌ನ್ನು ಹೊಸದರಂತೆ ಮಾಡಲು ಇಲ್ಲಿದೆ ಸೂಪರ್‌ ಟಿಪ್ಸ್‌ | Switchboard

Switchboard: ಸಾಮಾನ್ಯವಾಗಿ ಮನೆಗಳಲ್ಲಿರುವ ವಿದ್ಯುತ್ ಸ್ವಿಚ್‌ಬೋರ್ಡ್‌ಗಳು ದಿನ ಕಳೆದಂತೆ ಕೊಳಕಾಗುತ್ತದೆ. ವಿಶೇಷವಾಗಿ ಅಡುಗೆಮನೆಯಲ್ಲಿರುವ ಸ್ವಿಚ್‌ಬೋರ್ಡ್‌ಗಳು ಬಹಳ…

ಈ ಆಹಾರಗಳ ಅತಿಯಾದ ಸೇವನೆಯಿಂದ ಕಿಡ್ನಿ ಸ್ಟೋನ್‌ ಉಂಟಾಗಬಹುದು: ತಜ್ಞರ ಎಚ್ಚರಿಕೆ..! Health Tips

Health Tips: ಮೂತ್ರಪಿಂಡದಲ್ಲಿ ಕಲ್ಲುಗಳಿದ್ದರೆ ಸೊಂಟ, ಹೊಟ್ಟೆ ಮತ್ತು ಬೆನ್ನಿನಲ್ಲಿ ತೀವ್ರವಾದ ನೋವು ಉಂಟಾಗುತ್ತದೆ. ಈ…