Saif Ali Khan : ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಸೈಫ್ ಅಲಿ ಖಾನ್ ಮೇಲೆ ಕಿಡಿಗೇಡಿಯೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಷ್ಟಕ್ಕೂ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆದಿದ್ದೇಕೆ ಎಂಬ ಪ್ರಶ್ನೆ ಇದೀಗ ಉದ್ಭವವಾಗಿದೆ. ಕಳ್ಳತನಕ್ಕೆ ಯತ್ನಿಸಿದ್ದನ್ನು ತಡೆದಿದ್ದಕ್ಕೆ ಖದೀಮ ಚಾಕುವಿನಿಂದ ಇರಿದಿದ್ದಾನೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ಸಂಸದರೊಬ್ಬರು ನೀಡಿದ ಹೇಳಿಕೆ ಇದೀಗ ಭಾರಿ ಚರ್ಚೆಯನ್ನು ಹುಟ್ಟು ಹಾಕಿದೆ.
ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪ್ ಗರ್ಹಿ ಅವರು ಸೈಫ್ ಅಲಿ ಖಾನ್ ಮೇಲೆ ನಡೆದ ದಾಳಿ ಕುರಿತು ಟ್ವೀಟ್ ಮಾಡಿದ್ದಾರೆ. ಸೈಫ್ ಮೇಲಿನ ದಾಳಿಯು ಸಾಮಾನ್ಯ ಘಟನೆಯಲ್ಲ. ಈ ಬಗ್ಗೆ ಎಲ್ಲ ಅಂಶಗಳನ್ನು ಆಳವಾಗಿ ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅತ್ಯಂತ ನಾಗರಿಕ ಪ್ರದೇಶಗಳಲ್ಲಿ ವಾಸಿಸುವ ಸಿನಿಮಾ ಕಲಾವಿದರು ಸಹ ಸುರಕ್ಷಿತವಾಗಿಲ್ಲ ಅಂದರೆ, ಸಾಮಾನ್ಯ ಜನರ ಸ್ಥಿತಿ ಏನು ಎಂದು ಇಮ್ರಾನ್ ಪ್ರಶ್ನೆ ಮಾಡಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ನಟರಾದ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ವಿರುದ್ಧ ದ್ವೇಷಪೂರಿತ ಹೇಳಿಕೆಗಳನ್ನು ನೀಡಲಾಗುತ್ತಿದೆ. ಇದೇ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವಿಷವಾಗಿ ಹರಡಿದೆ. ಇದರ ಬೆನ್ನಲ್ಲೇ ನಿನ್ನೆ ರಾತ್ರಿ ಕಳ್ಳನೊಬ್ಬ ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ್ದಾರೆ. ಇದೆಲ್ಲವನ್ನು ನೋಡಿದರೆ, ಮುಂಬೈನಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕೆಟ್ಟದಾಗಿದೆ ಎಂಬುದನ್ನು ತೋರಿಸುತ್ತದೆ ಎಂದು ಇಮ್ರಾನ್ ಹೇಳಿದ್ದಾರೆ.
पिछले कुछ दिनों से जिस तरह अभिनेता सैफ़ अली ख़ान और करीना कपूर को लेकर नफ़रत भरे बयान दिये गये, सोशल मीडिया पर ज़हर परोसा गया और कल रात सैफ़ अली ख़ान पर चोरी करने वाले ने जानलेवा हमला किया, इस सबसे पता चलता है कि मुम्बई की क़ानून व्यवस्था कितनी बदहाल है, मुख्यमंत्री @Dev_Fadnavis…
— Imran Pratapgarhi (@ShayarImran) January 16, 2025
ಇಮ್ರಾನ್ ಅವರು ತಮ್ಮ ಟ್ವೀಟ್‌ನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯನ್ನು ಸಹ ಟ್ಯಾಗ್ ಮಾಡಿದ್ದಾರೆ. ಫಡ್ನವೀಸ್ ಜಿ, ಕನಿಷ್ಠ ಪಕ್ಷ ಮುಂಬೈನ ಇಮೇಜ್ ಬಗ್ಗೆ ಸ್ವಲ್ಪವಾದರೂ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಆಳವಾಗಿ ತನಿಖೆ ನಡೆಸಲು ಕೋರಿದ್ದಾರೆ.
ಅಂದಹಾಗೆ ಮುಂಬೈ ಪ್ರತಿಷ್ಠಿತ ಪ್ರದೇಶವಾಗಿರುವ ಬಾಂದ್ರಾದಲ್ಲಿರುವ ಸೈಫ್ ಅವರ ಸ್ವಂತ ಮನೆಯಲ್ಲಿಯೇ ಈ ಹಲ್ಲೆ ನಡೆದಿದೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಇದಾದ ನಂತರ, ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅಪರಿಚಿತ ದಾಳಿಕೋರ ಪರಾರಿಯಾಗಿದ್ದಾನೆ. ತನಿಖೆ ಆರಂಭಿಸಿರುವ ಪೊಲೀಸರು ಸೈಫ್ ಅವರ ಮನೆಯಲ್ಲಿ ಕೆಲಸ ಮಾಡುವ ಮೂವರನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. (ಏಜೆನ್ಸೀಸ್)
ಈ ದುಡ್ಡು ತೆಗೆದುಕೊಂಡು ನಿಮ್ಮ ಹೊಟ್ಟೆ ತುಂಬಿಸಿಕೊಳ್ಳಿ… ಲಂಚಬಾಕ ಅಧಿಕಾರಿ ಮೇಲೆ ನೋಟಿನ ಸುರಿಮಳೆ! Corrupt Officer