

ಮುಂಬೈ: ನಟ ಸೈಫ್ ಅಲಿ ಖಾನ್ (Saif Ali Khan) ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಪೊಲೀಸರು ತಲೆಮಾರಿಸಿಕೊಂಡಿರುವ ಆರೋಪಿಯನ್ನು ಹುಡುಕಲು 20 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ ಬೆನ್ನಲ್ಲೇ ಮಹತ್ದವ ಬೆಳವಣಿಗೆಯೊಂದು ನಡೆದಿದ್ದು, ತನಿಖೆಗೆ ಸೂಪರ್ಕಾಪ್ ಒಬ್ಬರು ಎಂಟ್ರಿ ಕೊಟ್ಟಿದ್ದಾರೆ.
ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಪಡೆದಿರುವ ದಯಾ ನಾಯಕ್ (Daya Nayak) ಅವರು ಸೈಫ್ ಅಲಿ ಖಾನ್ (Saif Ali Khan) ಅವರ ಪ್ರಕರಣd ವಿಚಾರಣೆಗೆ ಎಂಟ್ರಿ ಕೊಟ್ಟಿದ್ದು, ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದಕ್ಕೂ ಮೊದಲು ನಟ ಸೈಫ್ ಅಲಿ ಖಾನ್ರನ್ನು ದಾಖಲು ಮಾಡಿರುವ ಲೀಲಾವತಿ ಆಸ್ಪತ್ರೆಗೆ ಭೇಟಿ ನೀಡಿದ ದಯಾ ನಾಯಕ್ ಕೆಲವರ ವಿಚಾರಣೆ ನಡೆಸಿದ್ದಾರೆ.
ಆರೋಪಿಯನ್ನು ಪತ್ತೆ ಹಚ್ಚಲು ಮುಂಬೈ ಪೊಲೀಸರು ರಚಿಸಿರುವ 20 ವಿಶೇಷ ತಂಡಗಳಲ್ಲಿ ದಯಾ ನಾಯಕ್ ಅವರು ಒಂದು ಟೀಮ್ನ ಮುಖ್ಯಸ್ಥರಾಗಿದ್ದು, ಇದರ ಭಾಗವಾಗಿ ಅವರು ಆಸ್ಪತ್ರೆ ಹಾಗೂ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ 56 ವರ್ಷದ ನರ್ಸ್ ಎಲಿಯಾಮಾ ಫಿಲಿಪ್ ನೀಡಿರುವ ಹೇಳಿಕೆ ಹೊಸ ತಿರುವನ್ನು ಪಡೆದುಕೊಂಡಿದ್ದು, ಆರೋಪಿ 1 ಕೋಟಿ ರೂಪಾಯಿ ಬೇಡಿಕೆ ಇರಿಸಿದ್ದನ್ನು ಎಂಬುದು ವಿಚಾರಣೆಯ ತಿಳಿದು ಬಂದಿದೆ. ಹಲ್ಲೆಗೆ ಸಂಬಂಧಿಸಿದಂತೆ ಆರೋಪಿಯು ನಟ ಸೈಫ್ ಅಲಿ ಖಾನ್ಗೆ (Saif Ali Khan) 6 ಕಡೆ ಚುಚ್ಚಿದ್ದು, ಸದ್ಯ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರಿಎ ಶಸ್ತ್ರಚಿಕಿತ್ಸೆಯನ್ನು ಮಾಡಿದ್ದು, ನಿಗಾ ವಹಿಸಿದ್ದಾರೆ. ನಟನ ಆರೋಗ್ಯದ ಕುರಿತಾಗಿ ಆಸ್ಪತ್ರೆ ಸಿಬ್ಬಂದಿ ಪ್ರಕಟಣೆಯನ್ನು ಹೊರಡಿಸಿದ್ದು, ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.