24.5 C
Bangalore
Sunday, December 8, 2019

ಸಂತ ಲಾರೆನ್ಸರ ಸೇವೆ ಆದರ್ಶ

Latest News

ಡಾಬಾದಲ್ಲಿ ಇಟ್ಟಿದ್ದ 40 ಕೆಜಿ ಈರುಳ್ಳಿ ಕದ್ದೊಯ್ದ ಇಬ್ಬರು ಮಹಿಳೆಯರು; ಪೊಲೀಸರಿಗೆ ದೂರು ನೀಡುವುದಿಲ್ಲವೆಂದ ಮಾಲೀಕ

ಮೊಹಾಲಿ: ಈರುಳ್ಳಿ ಬೆಲೆ ಗಗನಕ್ಕೇರಿದೆ. ಬೆಲೆ ಏರಿಕೆಯ ನಡುವೆ ಈರುಳ್ಳಿ ಕಳ್ಳರೂ ಹೆಚ್ಚಾಗಿದ್ದಾರೆ. ಹಾಗೇ ಪಂಜಾಬ್​ನ ಮೊಹಾಲಿಯಲ್ಲಿ ಇಬ್ಬರು ಮಹಿಳೆಯರು ಸುಮಾರು 40 ಕೆಜಿ ಈರುಳ್ಳಿಯನ್ನು...

ಪಾವಗಡದ ಆಸ್ಪತ್ರೆ ಮುಂಭಾಗ ಮೃತನ ಸಂಬಂಧಿಕರ ಪ್ರತಿಭಟನೆ

ಪಾವಗಡ: ಆಕಸ್ಮಿಕ ಬೆಂಕಿ ಅವಘಡದಲ್ಲಿ ಗಾಯಗೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ನವ ವಿವಾಹಿತ ಗುಜ್ಜನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಎಚ್.ಪಾಳ್ಯದ ನವೀನ್(23) ಮೃತಪಟ್ಟಿದ್ದು, ಸಾವಿಗೆ ವೈದ್ಯರ...

ಸಾಸಲು ಗ್ರಾಮದಲ್ಲಿ ತ್ಯಾಜ್ಯ ನೀರಿನ ಸಂಕಷ್ಟ

ದೊಡ್ಡಬಳ್ಳಾಪುರ: ತಾಲೂಕಿನ ಸಾಸಲು ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆ ಆವರಣದಲ್ಲಿ ತ್ಯಾಜ್ಯ ನೀರು ಹರಿದು ವಿದ್ಯಾರ್ಥಿಗಳು ಕೊಳಚೆ ನೀರಲ್ಲೇ ಸಂಚರಿಸುವಂತಾಗಿದೆ. ಗ್ರಾಮದ ಅಣ್ಣಯ್ಯನ ಪಾಳ್ಯದ ತ್ಯಾಜ್ಯ ನೀರು ಶಾಲಾ...

ರಸ್ತೆಯಲ್ಲಿ ಬೇಡ ರಾಗಿ ಒಕ್ಕಣೆ

ಶಿವರಾಜ ಎಂ.ಬೆಂಗಳೂರು: ಸತತ ಬರದಿಂದ ಕಂಗೆಟ್ಟಿದ್ದ ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ರಾಗಿ ಸಲಿನಿಂದ ‘ಸುಗ್ಗಿ’ ಸಂಭ್ರಮ ಮನೆ ಮಾಡಿದೆ. ಈಗಾಗಲೇ ರಾಗಿ ಕಟಾವು...

ಮಹನೀಯರ ಚರಿತ್ರೆ ಅರಿವಿಗೆ ಛದ್ಮವೇಷ ಪೂರಕ

ವಿಜಯಪುರ: ಮಹಾತ್ಮ ಗಾಂಧಿ, ನೆಹರು, ಭಗತ್‌ಸಿಂಗ್, ಶ್ರೀರಾಮ, ಅಂಬೇಡ್ಕರ್ ಸೇರಿ ಇತರ ಮಹನೀಯರ ವೇಷ-ಭೂಷಣವನ್ನು ಮಕ್ಕಳು ಧರಿಸುವುದರಿಂದ ಅವರ ಜೀವನ ಚರಿತ್ರೆ, ವ್ಯಕ್ತಿತ್ವ, ಅರಿಯಲು ಹಾಗೂ...

ಕಾರ್ಕಳ: ನಿತ್ಯ ಜೀವನದಲ್ಲಿ ಸತ್ಯ, ನೀತಿ, ವಿನಯತೆ ಅಳವಡಿಸಿಕೊಂಡು ಅನೀತಿ, ಅನ್ಯಾಯ, ಅಧರ್ಮದ ವಿರುದ್ಧ ಹೋರಾಟ ನಡೆಸಲು ಧೈರ್ಯ ತೋರುವವನು ಪವಿತ್ರನಾಗಲು ಸಾಧ್ಯ ಎಂದು ಮಂಗಳೂರು ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ಡಾನಾ ಹೇಳಿದರು.
ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯ ಕ್ಷೇತ್ರದ ವಾರ್ಷಿಕೋತ್ಸವದ ನಾಲ್ಕನೇ ದಿನ ಬುಧವಾರ ಬಲಿಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು.

ಸಂತ ಲಾರೆನ್ಸ್ ಅವರ ಪುಣ್ಯ ಕಾರ್ಯದಿಂದ ಅತ್ತೂರು ಪುಣ್ಯಭೂಮಿ ಸರ್ವಧರ್ಮೀಯರ ಆರಾಧನಾ ತಾಣವಾಗಿ ವಿಶ್ವ ಮಾನ್ಯತೆ ಪಡೆದಿದೆ. ಸಂತ ಲಾರೆನ್ಸ್‌ರ ಪವಿತ್ರ ಸೇವೆ ನಾಗರಿಕರ ಬದುಕಿಗೆ ಆದರ್ಶವಾಗಿ ಉಳಿಯುವಂತಾಗಿದೆ. ಸಾಮಾನ್ಯ ಜನರಾಗಿರುವ ನಾವು ಪವಿತ್ರರಾಗಲು ನಮ್ಮಲ್ಲಿ ಅಚಲ ವಿಶ್ವಾಸ, ನಂಬಿಕೆ, ಪ್ರೀತಿ, ಕರುಣೆ, ಶ್ರದ್ಧೆ ಮತ್ತು ಭಕ್ತಿಯೊಂದಿಗೆ ಮಾನವೀಯತೆ ಅಳವಡಿಸಿಕೊಳ್ಳುವ ಅಗತ್ಯ ಇದೆ ಎಂದರು.
ಉಡುಪಿ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಲೋಬೊ, ಬಸಿಲಿಕದ ನಿರ್ದೇಶಕ ಹಾಗೂ ಧರ್ಮ ಕೇಂದ್ರದ ಪ್ರಧಾನ ಗುರು ಜಾರ್ಜ್ ಡಿಸೋಜ ಸಹಿತ 25 ಧರ್ಮಗುರುಗಳು ಉಪಸ್ಥಿತರಿದ್ದರು.

ಕರ್ತವ್ಯನಿಷ್ಠೆಯಿಂದ ಪಾವಿತ್ರೃತೆ: ಅಂತರಂಗ ಶುದ್ಧಿಗೊಂಡು ಪ್ರಾರ್ಥನೆ ಕೈಗೊಂಡಾಗ ಭಗವಂತ ಆಶೀರ್ವದಿಸುತ್ತಾನೆ. ಸೃಷ್ಟಿಕರ್ತನು ಏನ್ನನ್ನು ಬಯಸಿ ಮಾನವನನ್ನು ಈ ಭೂಲೋಕಕ್ಕೆ ಕಳುಹಿಸಿದ್ದನೋ ಅದನ್ನು ನಿಷ್ಠೆಯಿಂದ ಮಾಡಿದಾಗ ಮಾತ್ರ ನಾವು ಪವಿತ್ರರಾಗಲು ಸಾಧ್ಯ ಎಂದು ಬೆಳ್ತಂಗಡಿಯ ಧರ್ಮಾಧ್ಯಕ್ಷ ಡಾ.ಲೋರೆನ್ಸ್ ಮುಕ್ಕುಯಿ ನಾಲ್ಕನೇ ದಿನದ ಸಂಜೆ ಬಲಿಪೂಜೆ ನೆರವೇರಿಸಿ ಪ್ರವಚನ ನೀಡಿದರು. ಪರಿಶುದ್ಧ ವ್ಯಕ್ತಿತ್ವದಿಂದ ಮಾತ್ರ ದೇವರ ಸನ್ನಿಧಾನ ಪಡೆಯಲು ಸಾಧ್ಯ. ಕರ್ತವ್ಯದಲ್ಲಿ ಲೋಪವೆಸಗಬಾರದು. ವಕ್ರಬುದ್ಧಿ ಮತ್ತು ದುಷ್ಟಜನರ ಸಂಘದಿಂದ ದೂರ ಉಳಿಯಬೇಕು. ಅವರ ಒಳಿತಿಗಾಗಿ ಪ್ರಾರ್ಥಿಸಬೇಕು ಎಂದರು.

ತಾಯಿಯ ವಾತ್ಸಲ್ಯ ಭದ್ರ ಬುನಾದಿಗೆ ದಾರಿ ದೀಪ. ದೇವರ ಮೇಲಿನ ಭಕ್ತಿ ಅಂತರಾಳದಲ್ಲಿ ಮೂಡಿಬಂದಾಗ ಜೀವನ ಪಾವನವಾಗುತ್ತದೆ. ಹೆತ್ತವರನ್ನು, ಗುರುಗಳನ್ನು ಗೌರವಿಸುವ ಸಂಸ್ಕಾರದೊಂದಿಗೆ ಕೃತಾರ್ಥ ಮನೋಭಾವ ಬೆಳೆಸಿಕೊಳ್ಳಬೇಕು.
ಡಾ.ಪೀಟರ್ ಪಾವ್ಲ್ ಸಲ್ಡಾನಾ, ಮಂಗಳೂರು ಧರ್ಮಾಧ್ಯಕ್ಷ

Stay connected

278,749FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...