

ಬಂಟ್ವಾಳ: ಸಜೀಪಮೂಡ ಗ್ರಾಮದ ಸುಭಾಷ್‌ನಗರ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 14 ಶಾಲೆಗಳ ಸಜೀಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.
ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್ ಉದ್ಘಾಟಿಸಿ ಮಾತನಾಡಿ, ಸರ್ಕಾರ ಶಿಕ್ಷಣ ಇಲಾಖೆ ಮೂಲಕ ನಡೆಸುವ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ತಾಲೂಕು, ಜಿಲ್ಲಾ ವಲಯ ಮಟ್ಟಕ್ಕೆ ಅನುದಾನ ನೀಡುತ್ತಿದೆ, ಆದರೆ ಕ್ಲಸ್ಟರ್ ಮಟ್ಟದ ಕಾರ್ಯಕ್ರಮಕ್ಕೆ ಅನುದಾನ ನೀಡದೆ ಕಡೆಗಣಿಸುತ್ತಿರುವುದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ. ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನ್ಯಾಯೋಚಿತ ಸೂಕ್ತ ಅನುದಾನ ನೀಡುವಂತೆ ಒತ್ತಾಯಿಸಿದರು.
ಸಿಆರ್‌ಪಿ ಇಂದಿರಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಜಿಪ ಮೂಡ ಗ್ರಾಪಂ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಪೂಂಜ, ಗ್ರಾಪಂ ಉಪಾಧ್ಯಕ್ಷ ಸಿದ್ದಿಕ್, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಸೌಮ್ಯಾ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ವತ್ಸಲಾ ಸ್ವಾಗತಿಸಿ, ಕಂಚಿನಡ್ಕ ಶಾಲಾ ಮುಖ್ಯಶಿಕ್ಷಕರಾದ ಫ್ರಾನ್ಸಿಸ್ ಡೇಸಾ ನಿರೂಪಿಸಿ. ಶಿಕ್ಷಕಿ ಜೆಸಿಂತಾ ವಂದಿಸಿದರು.