More

    ಸಕಾಲಕ್ಕೆ ಅಧಿಕಾರಿಗಳು ಸಹಕರಿಸಿ: ಸಚಿವ ಸುರೇಶ್​ಕುಮಾರ್ ಕರೆ

    ರಾಮನಗರ: ಜಿಲ್ಲೆಯಲ್ಲಿ ಸಕಾಲ ಯೋಜನೆಯಡಿ ಸ್ವೀಕೃತವಾಗಿ ಬಾಕಿ ಉಳಿದಿರುವ ಅರ್ಜಿಗಳನ್ನು ಮತ್ತು ಮೇಲ್ಮನವಿಗಳನ್ನು ವಿಲೇವಾರಿ ಮಾಡಲು ಹಾಗೂ ಸಕಾಲ ಯೋಜನೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಸಕಾಲ ಸಪ್ತಾಹಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್​ಕುಮಾರ್ ವೀಡಿಯೋ ಕಾನ್ಪರೆನ್ಸ್ ಮೂಲಕ ಸೋಮವಾರ ಚಾಲನೆ ನೀಡಿದರು.

    ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆ ನಡೆಸಬೇಕು ಮತ್ತು ಸಕಾಲದ ಅನುಷ್ಠಾನ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಎಲ್ಲೆ ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಸಕಾಲ ಸಪ್ತಾಹದಿಂದ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಜಿಲ್ಲಾಧಿಕಾರಿಗಳು ಸಹಕಾರ ನೀಡಬೇಕು ಎಂದು ತಿಳಿಸಿದರು.

    ಸಕಾಲದಲ್ಲಿ ಒಟ್ಟು 1025 ಸೇವೆಗಳು ಲಭ್ಯವಿದ್ದು, ಈಗಾಗಲೇ ರಾಜ್ಯಾದ್ಯಂತ 22,88,81,652 ಅರ್ಜಿಗಳು ಬಂದಿಜದ್ದು, 22,82,55,866 ಅರ್ಜಿಗಳು ವಿಲೇವಾರಿ ಆಗಿದೆ ಎಂದು ಮಾಹಿತಿ ನೀಡಿದರು. ವಿಡಿಯೋ ಕಾನ್ಪರೆನ್ಸ್​ನಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಸಕಾಲ ಮಿಷನ್ ಅಪರ ನಿರ್ದೇಶಕಿ ಡಾ.ಬಿ.ಆರ್.ಮಮತಾ, ಎಂ.ಎಸ್.ಅರ್ಚನಾ, ಉಪವಿಭಾಗಾಧಿಕಾರಿ ದಾಕ್ಷಾಯಿಣಿ ಇತರ ಅಧಿಕಾರಿಗಳು ಹಾಜರಿದ್ದರು.

    ಮೂರು ಹಂತದಲ್ಲಿ ಸಪ್ತಾಹ

    ಮೊದಲ ಹಂತದಲ್ಲಿ ನಗರಾಭಿವೃದ್ಧಿ, ಕಂದಾಯ, ಸಾರಿಗೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆಗೆ ಸಂಬಂಧಪಟ್ಟಂತೆ ನ.30ರಿಂದ ಡಿ.5ರವರೆಗೆ ಸಪ್ತಾಹ ನಡೆಯಲಿದೆ. 2ನೇ ಹಂತದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಪಟ್ಟಂತೆ ಡಿ.7ರಿಂದ ಡಿ.11ರವರೆಗೆ ಹಾಗೂ ಉಳಿದ ಇಲಾಖೆಗಳಿಗೆ ಸಂಬಂಧಪಟ್ಟಂತೆ 3ನೇ ಹಂತದಲ್ಲಿ ಡಿ.14ರಿಂದ ಡಿ.19ರವರೆಗೆ ಸಪ್ತಾಹ ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts