More

    ಆರೋಗ್ಯ ರಕ್ಷಣೆಗೆ ಹೆಚ್ಚಿನ ಗಮನ, ಡಾ.ರವೀಂದ್ರ ಪ್ರಭು ಸಲಹೆ

    ಗಂಗೊಳ್ಳಿ: ಜನರು ಆರೋಗ್ಯ ರಕ್ಷಣೆ ಕಡೆಗೆ ಹೆಚ್ಚಿನ ಗಮನ ನೀಡಬೇಕಿದೆ. ಗ್ರಾಮೀಣ ಭಾಗದ ಜನರು ಆರೋಗ್ಯ ತಪಾಸಣೆಗಾಗಿ ಪಟ್ಟಣ ಪ್ರದೇಶಗಳಿಗೆ ತೆರಳಬೇಕಾದ ಅನಿವಾರ್ಯತೆ ಇದೆ. ಗ್ರಾಮೀಣ ಜನರ ಅಲೆದಾಟ ತಪ್ಪಿಸಲು ತ್ರಾಸಿಯ ಹೃದಯ ಭಾಗದಲ್ಲಿ ವಿಶಿಷ್ಟ ವೈದ್ಯಕೀಯ ಸೌಲಭ್ಯಗಳನ್ನೊಳಗೊಂಡ ಸಾಕೇತ ವೈದ್ಯಕೀಯ ಪ್ರಯೋಗಾಲಯ ಪ್ರಾರಂಭಿಸಿರುವುದು ಶ್ಲಾಘನೀಯ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ನೆಫ್ರಾಲಜಿ ವಿಭಾಗ ಮುಖ್ಯಸ್ಥ ಡಾ.ರವೀಂದ್ರ ಪ್ರಭು ಹೇಳಿದರು.

    ತ್ರಾಸಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕೊಂಕಣಿ ಖಾರ್ವಿ ಭವನದಲ್ಲಿ ಗಂಗೊಳ್ಳಿ ನಿನಾದ ಚಾರಿಟೆಬಲ್ ಟ್ರಸ್ಟ್ ಪ್ರವರ್ತಿತ ಸಾಕೇತ ವೈದ್ಯಕೀಯ ಪ್ರಯೋಗಾಲಯ ಹಾಗೂ ತಪಾಸಣಾ ಕೇಂದ್ರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.

    ಮಂಗಳೂರು ಹಾಂಗ್ಯೋ ಐಸ್‌ಕ್ರೀಂ ಸಂಸ್ಥೆ ಆಡಳಿತ ನಿರ್ದೇಶಕ ಪ್ರದೀಪ ಜಿ. ಪೈ ಮಾತನಾಡಿ, ನಾಲ್ಕು ವರ್ಷ ಹಿಂದೆ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯಿಂದ ಉದ್ಘಾಟನೆಗೊಂಡ ಗಂಗಾಮೃತ ಯೋಜನೆಯಡಿ ಸಾಕೇತ ವೈದ್ಯಕೀಯ ಪ್ರಯೋಗಾಲಯ ಆರಂಭಿಸಿ ಗ್ರಾಮೀಣ ಪ್ರದೇಶದ ಜನರಿಗೆ ಕಡಿಮೆ ದರದಲ್ಲಿ ಉತ್ಕೃಷ್ಟ ಮಟ್ಟದ ಸೌಲಭ್ಯಗಳನ್ನು ಒದಗಿಸುವ ನಿರ್ಧಾರ ಅಭಿನಂದನೀಯ ಎಂದರು.

    ಉಡುಪಿ ಶೆಣೈ ಮೆಡಿಕಲ್ ಸೆಂಟರ್‌ನ ಡಾ.ಸುಖಾನಂದ ಶೆಣೈ, ಗಂಗೊಳ್ಳಿ ಮಲ್ಯರ ಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರತಿನಿಧಿ ಜಿ.ವೇದವ್ಯಾಸ ಕೆ.ಆಚಾರ್ಯ, ಸಾಕೇತ ವಿಶೇಷ ಸಮಿತಿ ಸಂಚಾಲಕ ಡಾ.ಸಂದೀಪ ಕೆ.ಪೈ ಶುಭಾಶಂಸನೆಗೈದರು. ನಿನಾದ ಚಾರಿಟೆಬಲ್ ಟ್ರಸ್ಟ್ ವಿಶ್ವಸ್ಥರು, ಸಾಕೇತ ವಿಶೇಷ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಪ್ರಯೋಗಾಲಯದ ಸಿಬ್ಬಂದಿ ಹಾಗೂ ಪ್ರಯೋಗಾಲಯ ಪ್ರಾರಂಭಕ್ಕೆ ಸಹಕರಿಸಿದವರನ್ನು ಗೌರವಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಎಂ.ಮುಕುಂದ ಪೈ ಸ್ವಾಗತಿಸಿ, ಪ್ರಸ್ತಾವಿಸಿದರು. ಪತ್ರಕರ್ತ ಬಿ.ರಾಘವೇಂದ್ರ ಪೈ ಕಾರ್ಯಕ್ರಮ ನಿರ್ವಹಿಸಿದರು. ಸಾಕೇತ ವಿಶೇಷ ಸಮಿತಿ ಕಾರ್ಯದರ್ಶಿ ಡಾ.ದಿನೇಶ ಎಂ.ನಾಯಕ್ ವಂದಿಸಿದರು.

    ಹಾಥರಸ್​ ಕೇಸ್​: ಅಲಹಾಬಾದ್ ಹೈಕೋರ್ಟ್​ ನಿಗಾದಲ್ಲಿ ನಡೆಯಲಿದೆ ಸಿಬಿಐ ತನಿಖೆ ಎಂದ ಸುಪ್ರೀಂ ಕೋರ್ಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts