21 C
Bengaluru
Thursday, January 23, 2020

‘ಸಖಿ’ಯಿಂದ ಹೆಚ್ಚಿದ ಮತದಾನ ಪ್ರಮಾಣ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

| ಮಂಜುನಾಥ ಕೋಳಿಗುಡ್ಡ ಬೆಳಗಾವಿ

ಜಿಲ್ಲೆಯ ಮೂರು ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆಯಲ್ಲಿ ಶೇ. 100ರಷ್ಟು ಮತದಾನಕ್ಕೆ ಸಂಕಲ್ಪತೊಟ್ಟು ಚುನಾವಣಾ ಆಯೋಗ ಸಿಸ್ಟಿಮೆಟಿಕ್ ವೋಟರ್ಸ್ ಎಜುಕೇಷನ್ ಆ್ಯಂಡ್ ಇಲೆಕ್ಟೋರಲ್ ಪಾರ್ಟಿಸಿಪೇಷನ್ (ಸ್ವೀಪ್) ಮತದಾನದ ಕುರಿತು ಜಾಗೃತಿ ಮೂಡಿಸಿತ್ತು. ಆ ಅಭಿಯಾನಕ್ಕೆ ಡಿ.5ರಂದು ನಡೆದ ಉಪಚುನಾವಣೆಯಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರಲ್ಲೂ ಸಖಿ ಮತಗಟ್ಟೆಗಳಿಂದಾಗಿ ಮಹಿಳಾ ಮತದಾನ ಪ್ರಮಾಣ ಏರಿಕೆ ಕಂಡಿದೆ.

ಮಹಿಳಾ ಮತದಾರರನ್ನು ಮತಗಟ್ಟೆ ಕೇಂದ್ರಗಳಿಗೆ ಕರೆತರಲು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ನಡೆಸಿದ ಜಾಗೃತಿ ಕಾರ್ಯಕ್ರಮ ಸಕಾರಾತ್ಮಕ ಫಲ ನೀಡಿದೆ.
ಜಿಲ್ಲೆಯ ಗೋಕಾಕ, ಕಾಗವಾಡ ಮತ್ತು ಅಥಣಿ ವಿಧಾನಸಭಾ ಕ್ಷೇತ್ರಗಳಲ್ಲಿ 6,45,525 ಮತದಾರರಿದ್ದರು. ಆ ಪೈಕಿ 3,27,699 ಪುರುಷ ಹಾಗೂ 3,17,826 ಮಹಿಳಾ ಮತದಾರರಿದ್ದಾರೆ. ಕರದಂಟು ನಾಡು ಗೋಕಾಕ ಕ್ಷೇತ್ರದಲ್ಲಿ ಮಹಿಳಾ ಮಣಿಗಳು ಮತ ಚಲಾವಣೆ ಮಾಡುವ ಮೂಲಕ ಅಭ್ಯರ್ಥಿಗಳಿಗೆ ಜೈ ಎಂದಿದ್ದಾರೆ. 3 ಕ್ಷೇತ್ರದಲ್ಲಿ ಒಟ್ಟಾರೆ ಶೇ. 74.72ರಷ್ಟು ಮತದಾನವಾಗಿದೆ.

ಫಲ ನೀಡಿದ ಕಾರ್ಯಕ್ರಮ: ಉಪ ಚುನಾವಣೆಗೆ ದಿನಾಂಕ ಘೋಷಣೆಯಾದ ದಿನದಿಂದ ಶೇ. 100ರಷ್ಟು ಮತದಾನ ಸಾಧಿಸಲು ಸ್ವೀಪ್ ನಿರ್ಧರಿಸಿತ್ತು. ಈ ಹಿಂದಿನ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಶೇ.40ಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆ ವ್ಯಾಪ್ತಿಯ ಜನರಲ್ಲಿ ಜಾಗೃತಿ ಮೂಡಿಸಲು ಚುನಾವಣೆ ಆಯೋಗ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅನೇಕ ಕಾರ್ಯಕ್ರಮ ಆಯೋಜಿಸಿ ಮತದಾನದ ಜಾಗೃತಿ ಮೂಡಿಸಿತ್ತು. ಈ ಜಾಗೃತಿ ಕಾರ್ಯಕ್ರಮ ಉಪಸಮರದಲ್ಲಿ ಉತ್ತಮ ಫಲ ನೀಡಿದೆ.

ಶೇ. 50ಕ್ಕಿಂತ ಅಧಿಕ ಮಹಿಳಾ ಮತದಾನ: ಗೋಕಾಕ ಕ್ಷೇತ್ರದಲ್ಲಿ 1,22,373 ಮಹಿಳಾ ಮತದಾರರ ಪೈಕಿ 89,566 ಮಹಿಳೆಯರು, ಅಥಣಿ ಕ್ಷೇತ್ರದಲ್ಲಿ 1,05,790 ಮಹಿಳಾ ಮತದಾರರ ಪೈಕಿ 79,079 ಮಹಿಳೆಯರು ಹಾಗೂ ಕಾಗವಾಡ ಕ್ಷೇತ್ರದಲ್ಲಿ 89,657 ಮಹಿಳಾ ಮತದಾರರ ಪೈಕಿ 68,012 ಮಹಿಳೆಯರು ಉಪಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಮೂಲಕ ಇತರೆ ಮತದಾರರಿಗೂ ಮಾದರಿಯಾಗಿದ್ದಾರೆ ಎಂದು ಸ್ವೀಪ್ ಸಮಿತಿ ಅಧಿಕಾರಿಗಳು ತಿಳಿಸಿದ್ದಾರೆ.

ಮತದಾರರನ್ನು ಸೆಳೆದ  ಪಿಂಕ್ ಮತಗಟ್ಟೆಗಳು

ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಮತ್ತು ಮತದಾನಕ್ಕೆ ಮಹಿಳೆಯರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಖಿ ಮತಗಟ್ಟೆಗಗಳನ್ನು ಆರಂಭಿಸಲಾಗಿತ್ತು. ಈ ಮತಗಟ್ಟೆಗಳಲ್ಲಿ ಚುನಾವಣೆ, ಭದ್ರತಾ ಸಿಬ್ಬಂದಿಯಾಗಿ ಮಹಿಳಾ ಸಿಬ್ಬಂದಿಯನ್ನೇ ನೇಮಕ ಮಾಡಲಾಗಿತ್ತು. ಮತಗಟ್ಟೆಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಹಾಗಾಗಿ ಮಹಿಳಾ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಸ್ವೀಪ್ ಸಮತಿ ಅಧಿಕಾರಿ ಪರುಶುರಾಮ ದುಡಗುಂಟಿ ತಿಳಿಸಿದ್ದಾರೆ.

ಜಿಲ್ಲೆಯ ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ವೀಪ್ ಸಮಿತಿಯಿಂದ ಮತದಾನ ಕುರಿತು ನಿರಂತರ ಜಾಗೃತಿ ಮೂಡಿಸಲಾಗಿದೆ. ಅಂಗವಿಕಲ ಮತದಾರರಿಗೆ ವೀಲ್‌ಚೇರ್ ವ್ಯವಸ್ಥೆ ಮಾಡಲಾಗಿತ್ತು. ಮತದಾನದಂದು ಸ್ಕೌಟ್ಸ್ ಗೈಡ್, ಎನ್‌ಸಿಸಿ ವಿದ್ಯಾರ್ಥಿಗಳು ಮತದಾರರಿಗೆ ನೆರವಾದರು.
| ಡಾ.ಕೆ.ವಿ.ರಾಜೇಂದ್ರ ಸ್ವೀಪ್ ಜಿಲ್ಲಾಧ್ಯಕ್ಷ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...