ಸಾಲದ ಖಾತೆಗೆ ಬೆಳೆ ವಿಮೆ ಜಮೆ ಬೇಡ

Latest News

ಅಸಲಿ ಪೊಲೀಸರಿಗೆ ಸೆರೆಸಿಕ್ಕ ನಕಲಿ ಅಧಿಕಾರಿ: ಉದ್ಯಮಿಗೆ ಬೆದರಿಸಿ 24 ಲಕ್ಷ ರೂ. ಸುಲಿಗೆ, ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಬೆಂಗಳೂರು: ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ ಬೆದರಿಸಿ ಲಕ್ಷಾಂತರ ರೂ. ಸುಲಿಗೆ ಮಾಡಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಚ್​ಎಎಲ್...

ಯುವಕನ ಕೊಲೆ ಮಾಡಿದ್ದ ದಂಪತಿ ಬೆಳಗಾವಿಯಲ್ಲಿ ಸೆರೆ

ಆನೇಕಲ್: ಖಾಸಗಿ ಸಂಸ್ಥೆಯ ಉದ್ಯೋಗಿ ಭದ್ರಾವತಿಯ ಕಿರಣ್ ಕುಮಾರ್ (25) ಕೊಲೆ ಪ್ರಕರಣ ಭೇದಿಸಿರುವ ಜಿಗಣಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆಯ ಸುರೇಖಾ (38)...

ತನ್ನದಲ್ಲದ ತಪ್ಪಿಗೆ ದಂಡ ಕಟ್ಟಿದ ಟೆಕ್ಕಿ: ನಕಲಿ ನಂಬರ್ ಪ್ಲೇಟ್ ಅಳವಡಿಸಿ 4 ವರ್ಷ ಕಾರು ಓಡಿಸಿದ್ದ, ಆರ್​ಟಿಒ ವಶದಲ್ಲಿ ಉದ್ಯಮಿ

ಬೆಂಗಳೂರು: ಪರಿಚಿತರೊಬ್ಬರ ಬೆನ್ಜ್ ಕಾರಿನ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು 7 ವರ್ಷಗಳಿಂದ 27 ಲಕ್ಷ ರೂ. ತೆರಿಗೆ ವಂಚಿಸಿ ಓಡಾಡುತ್ತಿದ್ದ ಮರ್ಸಿಡೀಸ್...

ಅಕ್ರಮ ಸಂಪತ್ತಿಗೆ ಅಧಿಕಾರಿಗಳ ಕಾವಲು

| ರಮೇಶ ದೊಡ್ಡಪುರ ಬೆಂಗಳೂರು ನಗರ ಪ್ರದೇಶದಲ್ಲಿ ವಸತಿ, ವಾಣಿಜ್ಯ ಪ್ರದೇಶಗಳಲ್ಲಿ ಸಮತೋಲನ ಕಾಯ್ದುಕೊಳ್ಳಲು ರಚಿಸಲಾಗಿರುವ ಕಾನೂನು ಪಾಲಿಸಿ ಅಕ್ರಮ ಕಟ್ಟಡಗಳಿಗೆ ಬ್ರೇಕ್ ಹಾಕಬೇಕಾದ...

ಪೊಲೀಸ್ ಠಾಣೆಗಳಲ್ಲಿ ದಲಿತರ ದಿನ ಆಚರಣೆ ಕಡ್ಡಾಯ: ಪ್ರತಿ ತಿಂಗಳ 2ನೇ ಭಾನುವಾರ ಕಡ್ಡಾಯ, ನಿಯಮ ಪಾಲಿಸದ ಅಧಿಕಾರಿಗಳ ವಿರುದ್ಧ ಇಲಾಖೆ ಗರಂ

| ಕೀರ್ತಿನಾರಾಯಣ ಸಿ. ಬೆಂಗಳೂರು ದಲಿತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಪ್ರತಿ ತಿಂಗಳ 2ನೇ ಭಾನುವಾರ ‘ದಲಿತರ...

ಲಕ್ಷ್ಮೇಶ್ವರ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಮನೋಜಕುಮಾರ್ ಜೈನ್ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಬಹುತೇಕ ಸಮಸ್ಯೆಗಳಿಗೆ ಸ್ಥಳದಲ್ಲಿದ್ದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನೊಳಗೊಂಡ ಸಭೆಗೆ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ಜನರು ಹತ್ತಾರು ಸಮಸ್ಯೆಗಳನ್ನು ಹೊತ್ತು ತಂದಿದ್ದರು.

ಜಂಟಿ ಕೃಷಿ ನಿರ್ದೇಶಕ ಸಿ.ಬಿ. ಬಾಲರೆಡ್ಡಿ ಮತ್ತು ಸ್ಥಳೀಯ ಬ್ಯಾಂಕ್ ಅಧಿಕಾರಿಗಳೊಂದಿಗೆ ರ್ಚಚಿಸಿ ಬೆಳೆ ವಿಮೆ ಮೊತ್ತವನ್ನು ಸಾಲಮನ್ನಾ ವ್ಯಾಪ್ತಿಗೊಳಪಡುವ ರೈತರ ಸಾಲದ ಖಾತೆಗೆ ಜಮಾ ಮಾಡಿಕೊಳ್ಳಬಾರದು ಮತ್ತು ಕೃಷಿ ಅಧಿಕಾರಿಗಳು ಬೆಳೆವಿಮೆ ತಾರತಮ್ಯದಲ್ಲಾಗಿರುವ ಸಮಸ್ಯೆ ಪರಿಹರಿಸುವಂತೆ ಜಿಲ್ಲಾಧಿಕಾರಿ ಮನೋಜ್ ಜೈನ್ ಸೂಚಿಸಿದರು.

ಹೊಸ ತಾಲೂಕು ಘೊಷಣೆಯಾಗಿದ್ದರೂ ಜನತೆಗೆ ಪೂರ್ಣ ಪ್ರಮಾಣದ ಸೇವೆ ಲಭ್ಯವಾಗುತ್ತಿಲ್ಲ ಎಂಬ ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು ಹೊಸ 50 ತಾಲೂಕುಗಳಲ್ಲಿ ಮುಖ್ಯವಾಗಿ ಲಕ್ಷ್ಮೇಶ್ವರ ತಾಲೂಕಿಗೆ ಹೊಸ ಕಚೇರಿ ಮತ್ತು ತಹಸೀಲ್ದಾರ್ ನೇಮಕವಾಗಿರುವುದು ಗಮನಾರ್ಹ ಎಂದರು.

ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ಎರಡೂ ತಾಲೂಕುಗಳ ಜನರಿಗೆ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರತಿ ಇಲಾಖೆಯಿಂದ ಒಬ್ಬ ಸಂಪರ್ಕಾಧಿಕಾರಿಯನ್ನು ಗುರುತಿಸಿ ಅವರ ಮೂಲಕ ಸಾರ್ವಜನಿಕರಿಗೆ ಸೇವೆ ಒದಗಿಸುವ ಮತ್ತು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಎಪಿಎಂಸಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ರೈತಭವನ ಸೇರಿ ಸುತ್ತಲಿನ ಪಾಳುಬಿದ್ದ ಕಟ್ಟಡ, ಖಾಲಿ ನಿವೇಶನವನ್ನು ಕಂದಾಯ ಇಲಾಖೆಗೆ ಬಿಟ್ಟುಕೊಡಲು ಪತ್ರ ಬರೆಯುವಂತೆ ಎಪಿಎಂಸಿ ಕಾರ್ಯದರ್ಶಿ ಎನ್.ಎ. ಲಕ್ಕುಂಡಿ ಅವರಿಗೆ ಸೂಚಿಸಿದರು.

ಪಟ್ಟಣದ ಕೇಂದ್ರ ಭಾಗದಲ್ಲಿರುವ ಹಳೇ ಬಸ್ ನಿಲ್ದಾಣದ ಕಲ್ಯಾಣ ಮಂಟಪವನ್ನು ತಾ.ಪಂ. ಕಚೇರಿಗೆ ಬಳಸಲು ಸರ್ಕಾರಕ್ಕೆ ಪತ್ರ ಬರೆಯುವ ಉದ್ದೇಶದಿಂದ ಸ್ಥಳಕ್ಕೆ ಭೇಟಿ ನೀಡಿ ಘಟಕ ವ್ಯವಸ್ಥಾಪಕರನ್ನು ಕರೆಯಿಸಿ ರ್ಚಚಿಸಿದರು. ಪ್ರತಿ ವರ್ಷ ಕಲ್ಯಾಣ ಮಂಟಪದ ನಿರ್ವಹಣೆಯನ್ನು ಟೆಂಡರ್ ಮೂಲಕ ಹೊರಗುತ್ತಿಗೆಗೆ ನೀಡಲಾಗುತ್ತಿದೆ ಎಂಬ ಮಾಹಿತಿಗೆ ಪ್ರತಿಯಾಗಿ ಈ ವರ್ಷ ಟೆಂಡರ್ ಕರೆಯುವುದನ್ನು ತಡೆ ಹಿಡಿಯಬೇಕು ಎಂದು ಸೂಚಿಸಿದರು.

ಜಿ.ಪಂ. ಪ್ರಭಾರಿ ಸಿಇಒ ಎಸ್.ಸಿ. ಮಹೇಶ, ಗದಗ ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್. ರುದ್ರೇಶ, ಶಿರಹಟ್ಟಿ ತಹಸೀಲ್ದಾರ್ ಎ.ಡಿ. ಅಮರಾವದಗಿ, ಲಕ್ಷ್ಮೇಶ್ವರ ತಹಸೀಲ್ದಾರ ಡಾ. ವೆಂಕಟೇಶ ನಾಯಕ, ಶಿರಹಟ್ಟಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ. ವೈ.ಎಂ. ಗುರಿಕಾರ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಾಹೇಬ್ರ ಸಹಾಯ ಮಾಡ್ರಿ..: ವಿವಾಹಿತ ಮಹಿಳೆಯೊಬ್ಬರು ಕೌಟುಂಬಿಕ ಸಮಸ್ಯೆ ಹೇಳಿ ಇಬ್ಬರು ಮಕ್ಕಳ ಜೀವನೋಪಾಯಕ್ಕಾಗಿ ನನಗೆ ಕೆಲಸ ಕೊಡಿಸಬೇಕು ಎಂದು ಪರಿಪರಿಯಾಗಿ ಬೇಡಿಕೊಂಡಳು. ಮತ್ತೊಬ್ಬ ಅಂಗವಿಕಲ ನನ್ನ ಮಕ್ಕಳ ಆರೋಗ್ಯ ಕಾಪಾಡಲು ಔಷಧೋಪಚಾರದ ವ್ಯವಸ್ಥೆ ಕಲ್ಪಿಸಬೇಕು. ಇನ್ನೊಂದಿಷ್ಟು ಜನರು ತಮಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಬಂದಿಲ್ಲ ಎಂದು, ಮತ್ತೊಬ್ಬ ಮಹಿಳೆ ತನಗೆ 6 ತಿಂಗಳಿಂದ ವಿಧವಾ ವೇತನ ಬರುತ್ತಿಲ್ಲ ಎಂದು, ಕೆಲವರು ತಮಗೆ ಶ್ರಯ ಮನೆ ಕಲ್ಪಿಸಬೇಕು ಎಂದು ಹೀಗೆ ಹತ್ತಾರು ಸಮಸ್ಯೆಗಳನ್ನು ತೋಡಿಕೊಂಡರು. ಸಂಬಂಧಪಟ್ಟ ಅಧಿಕಾರಿಗಳಿಂದ ಸ್ಪಷ್ಟನೆ, ಕಾರಣ ಕೇಳಿ ಸಾಧ್ಯವಾದಷ್ಟು ಬೇಗ ಈ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಅಭಿವೃದ್ಧಿಗೆ ಹಿನ್ನಡೆಯಾದ ನಿವೇಶನ: ಪಟ್ಟಣದ ಪುರಸಭೆಯ ವಸತಿ ಗೃಹ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 4 ಇರುವ 3 ಎಕರೆ 28 ಗುಂಟೆ ನಿವೇಶನ ಇದುವರೆಗೂ ಮೈಸೂರು ಹೌಸಿಂಗ್ ಬೋರ್ಡ್ ಹೆಸರಿನಲ್ಲಿಯೇ ಇದ್ದು ಇಲ್ಲಿನ ಶಾಲೆ ಮತ್ತು ಪ್ರದೇಶದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಪುರಸಭೆ ಸದಸ್ಯ ಬಸವರಾಜ ಓದುನವರ, ಎಸ್​ಡಿಎಂಸಿ ಹಾಗೂ ಬಿಇಒ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಈ ಕುರಿತು ಮುಖ್ಯಾಧಿಖಾರಿ ರವೀಂದ್ರ ಬಾಗಲಕೋಟ ಅವರನ್ನು ಕೇಳಿದಾಗ, 1972ರಿಂದಲೂ ಈ ಸಮಸ್ಯೆ ಇದ್ದು ಈ ಆಸ್ತಿಯನ್ನು ಪುರಸಭೆಗೆ ಬಿಟ್ಟುಕೊಡುವಂತೆ ಅನೇಕ ವರ್ಷಗಳ ಹಿಂದೆ ಶೇ. 60 ವಂತಿಗೆ ಕಟ್ಟಲಾಗಿದೆ. ಇತ್ತೀಚೆಗೆ ನಾನು ಕೇಂದ್ರ ಕಚೇರಿಗೆ ಭೇಟಿ ನೀಡಿ ಇನ್ನುಳಿದ ಶೇ. 40 ವಂತಿಗೆ ಕಟ್ಟುತ್ತೇವೆ ಪುರಸಭೆಗೆ ಬಿಟ್ಟುಕೊಡುವಂತೆ ಕೇಳಿದ್ದೇವೆ ಎಂದರು. ಇದಕ್ಕೆ ಜಿಲ್ಲಾಧಿಕಾರಿಗಳು ಆದಷ್ಟು ಬೇಗ ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾವೂ ಪತ್ರ ಬರೆಯುವುದಾಗಿ ತಿಳಿಸಿದರು.

- Advertisement -

Stay connected

278,673FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...